AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್

IPL 2026: ಹಾಲಿ ಚಾಂಪಿಯನ್ ಆರ್‌ಸಿಬಿ 2026ರ ಐಪಿಎಲ್‌ನಲ್ಲಿ ಮೊದಲ ತಂಡವಾಗಿ ಪ್ಲೇಆಫ್‌ಗೆ ಪ್ರವೇಶಿಸಿದೆ. ಅಮೋಘ ಪ್ರದರ್ಶನ ನೀಡುತ್ತಿರುವ ಆರ್‌ಸಿಬಿ ಈ ಬಾರಿಯೂ ಚಾಂಪಿಯನ್ ಆಗಲಿದೆ ಎಂದು ವೀರೇಂದ್ರ ಸೆಹ್ವಾಗ್ ಭವಿಷ್ಯ ನುಡಿದಿದ್ದಾರೆ. ಆದರೆ, ಗುಜರಾತ್ ಟೈಟಾನ್ಸ್ ಆರ್‌ಸಿಬಿಗೆ ದೊಡ್ಡ ಸವಾಲಾಗಬಲ್ಲದು, ವಿಶೇಷವಾಗಿ ಅದರ ಬಲಿಷ್ಠ ಬೌಲಿಂಗ್ ಘಟಕದಿಂದ. ಉಭಯ ತಂಡಗಳ ಪ್ಲೇಆಫ್ ಕದನ ಕುತೂಹಲ ಮೂಡಿಸಿದೆ.

IPL 2026: ‘ಈ ವರ್ಷವೂ ಆರ್‌ಸಿಬಿಯದ್ದೇ ಟ್ರೋಫಿ’; ಭವಿಷ್ಯ ನುಡಿದ ಸೆಹ್ವಾಗ್
Virender Sehwag
ಪೃಥ್ವಿಶಂಕರ
|

Updated on:May 18, 2026 | 11:21 PM

Share

ಹಾಲಿ ಚಾಂಪಿಯನ್ ಆರ್​ಸಿಬಿ (RCB) 2026 ರ ಐಪಿಎಲ್‌ನಲ್ಲಿ (IPL 2026) ಅಮೋಘ ಪ್ರದರ್ಶನ ನೀಡಿ ಮೊದಲ ತಂಡವಾಗಿ ಪ್ಲೇಆಫ್‌ಗೇರಿದೆ. ಆರ್​ಸಿಬಿ ಕಳೆದ ಐಪಿಎಲ್​ನಂತೆ ಈ ಐಪಿಎಲ್​ನಲ್ಲೂ ಎಲ್ಲಾ ವಿಭಾಗದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದೆ. ಹೀಗಾಗಿ ಆರ್​ಸಿಬಿಯ ಸಾಂಘಿಕ ಹೋರಾಟವನ್ನು ವೀಕ್ಷಿಸಿರುವ ಹಲವಾರು ಮಾಜಿ ಕ್ರಿಕೆಟಿಗರು ಈ ಬಾರಿಯೂ ಆರ್​ಸಿಬಿಯೇ ಚಾಂಪಿಯನ್ ಎನ್ನುತ್ತಿದ್ದಾರೆ. ಈ ರೀತಿಯಾಗಿ ಭವಿಷ್ಯ ನುಡಿದವರಲ್ಲಿ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಕೂಡ ಒಬ್ಬರು.

ಆರ್‌ಸಿಬಿಯದ್ದೇ ಟ್ರೋಫಿ

ಕ್ರಿಕ್‌ಬಜ್‌ನಲ್ಲಿ ಆರ್​ಸಿಬಿ ತಂಡದ ಪ್ರದರ್ಶನದ ಕುರಿತು ಮಾತನಾಡಿದ ವೀರೇಂದ್ರ ಸೆಹ್ವಾಗ್, ‘ಚಾಂಪಿಯನ್ ತಂಡವು ಅಗ್ರ ಎರಡು ಸ್ಥಾನಗಳಲ್ಲಿ ಅರ್ಹತೆ ಪಡೆಯಬೇಕು. ಅದರಂತೆ ಆರ್​ಸಿಬಿ ಆಡುತ್ತಿರುವ ರೀತಿಯನ್ನು ನೋಡಿದರೆ, ಈ ವರ್ಷವೂ ಅವರೇ ಟ್ರೋಫಿಯನ್ನು ಎತ್ತಿಹಿಡಿಯುತ್ತಾರೆ ಎಂದು ತೋರುತ್ತದೆ’ ಎಂದಿದ್ದಾರೆ. ಆದಾಗ್ಯೂ, ಆರ್​ಸಿಬಿ ಎದುರಿಸುತ್ತಿರುವ ದೊಡ್ಡ ಸವಾಲನ್ನು ಸಹ ಉಲ್ಲೇಖಿಸಿರುವ ಸೆಹ್ವಾಗ್. ಟ್ರೋಫಿ ಗೆಲುವಿನಲ್ಲಿ ಆರ್‌ಸಿಬಿಗೆ ಕಠಿಣ ಹೋರಾಟ ನೀಡಬಲ್ಲ ತಂಡವೆಂದರೆ ಅದು ಗುಜರಾತ್ ಟೈಟಾನ್ಸ್.

ಒಂದು ವೇಳೆ ಗುಜರಾತ್ ತಂಡ ಕೂಡ ಅಗ್ರ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆದರೆ, ಆರ್‌ಸಿಬಿಗೆ ಅದು ಕಷ್ಟಕರವಾಗಿರುತ್ತದೆ. ಏಕೆಂದರೆ ಗುಜರಾತ್ ಟೈಟಾನ್ಸ್ ಕೂಡ ಉತ್ತಮ ಬೌಲಿಂಗ್ ಘಟಕವನ್ನು ಹೊಂದಿದೆ. ಈ ಎರಡೂ ತಂಡಗಳ ಬೌಲಿಂಗ್ ಮತ್ತು ಬ್ಯಾಟಿಂಗ್ ಎರಡೂ ಬಲಿಷ್ಠವಾಗಿರುವುದರಿಂದ ಪ್ಲೇಆಫ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುವುದನ್ನು ನೋಡಲು ಖುಷಿಯಾಗುತ್ತದೆ. ಉಭಯ ತಂಡಗಳ ಅಗ್ರ ಮೂವರು ಬ್ಯಾಟ್ಸ್‌ಮನ್‌ಗಳು ಸ್ಥಿರವಾಗಿ ರನ್ ಗಳಿಸುತ್ತಿದ್ದಾರೆ ಎಂದು ಸೆಹ್ವಾಗ್ ಎಚ್ಚರಿಸಿದ್ದಾರೆ.

PBKS vs RCB: ‘49/ 3, ಮತ್ತೆ ಹೀಗ್ ಮಾಡ್ಬೇಡಿ’.. ಗೇಲಿ ಮಾಡಿದ್ದ ಪಂಜಾಬ್​ ಕಿವಿ ಹಿಂಡಿದ ಆರ್​ಸಿಬಿ

ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ತಂಡ

ಸೆಹ್ವಾಗ್ ನೀಡಿರುವ ಹೇಳಿಕೆಗೆ ಪೂರಕವಾಗಿ ಆರ್​ಸಿಬಿ ಕೂಡ ಚಾಂಪಿಯನ್ ತಂಡದಂತೆಯೇ ಪ್ರದರ್ಶನ ನೀಡುತ್ತಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 23 ರನ್‌ಗಳಿಂದ ಜಯಗಳಿಸಿದ ಆರ್​ಸಿಬಿ ಪ್ಲೇಆಫ್‌ಗೆ ಅರ್ಹತೆ ಪಡೆದುಕೊಂಡಿದೆ. ಈ ಮೂಲಕ ಈ ಆವೃತ್ತಿಯಲ್ಲಿ ಪ್ಲೇಆಫ್‌ಗೆ ಅರ್ಹತೆ ಪಡೆದ ಮೊದಲ ಐಪಿಎಲ್ ತಂಡ ಎನಿಸಿಕೊಂಡಿದೆ. ಹಾಲಿ ಚಾಂಪಿಯನ್ ಆರ್​ಸಿಬಿ ಈ ಆವೃತ್ತಿಯಲ್ಲಿ ಇದುವರೆಗೆ 13 ಪಂದ್ಯಗಳನ್ನು ಆಡಿದ್ದು, ಒಂಬತ್ತು ಪಂದ್ಯಗಳನ್ನು ಗೆದ್ದು ನಾಲ್ಕರಲ್ಲಿ ಸೋತಿದ್ದು, ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್​ಗೆ ಅರ್ಹತೆ ಪಡೆದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:14 pm, Mon, 18 May 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಇಂಡಿಯಾ- ವೆಸ್ಟ್ ಇಂಡೀಸ್ ಪಂದ್ಯಕ್ಕೆ  ಡಿಸಿಎಂಗೆ ವೆಂಕಟೇಶ್ ಪ್ರಸಾದ್ ಆಹ್ವಾನ
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಸರ್ಕಾರ ನಿಮ್ಮೊಂದಿಗಿದೆ ಪ್ರತಿಭಟನೆ ಕೈಬಿಡಿ ಎಂದು ರೈತರಿಗೆ ಜೋಶಿ ಮನವಿ!
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹೈಕಮಾಂಡ್ ತಲುಪಿದ ಸ್ಟಿಂಗ್ ವಿಚಾರ: ಕ್ಯಾಬಿನೆಟ್ ಪ್ರಸ್ತಾಪಕ್ಕೆ ಗರಂ
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ಹುನಗುಂದದಲ್ಲಿ ರೈತರ ಪ್ರತಿಭಟನೆ: ರಾಯಚೂರು-ಸೊಲ್ಲಾಪುರ ಹೆದ್ದಾರಿ ಬಂದ್
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ರಾಹುಲ್ ಗಾಂಧಿ ನಿವಾಸದಲ್ಲಿ ವಿಪಕ್ಷ ನಾಯಕರ ಹೈ-ಟೀ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ
ಕ್ಯಾಪ್ಟನ್ ಟೀಕಿಸಿದ ತಂಡವನ್ನೇ ಆಯ್ಕೆ ಮಾಡಿಕೊಂಡ ಕುಮಾರಿ