AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಬ್ಯಾಟಿಂಗ್‌ ವೈಫಲ್ಯ; ತವರಿನಲ್ಲಿ ಸತತ 2ನೇ ಪಂದ್ಯ ಸೋತ ಆರ್​ಸಿಬಿ

RCB Suffers Second Home Defeat: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025ರಲ್ಲಿ ತನ್ನ ತವರಿನಲ್ಲಿ ದೆಹಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳಿಂದ ಸೋಲುಂಡಿದೆ. ಮೊದಲು ಬ್ಯಾಟ್ ಮಾಡಿದ ಆರ್ಸಿಬಿ ಕೇವಲ 163 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿ ಪರ ಕೆ.ಎಲ್. ರಾಹುಲ್ ಅಜೇಯ 93 ರನ್ ಬಾರಿಸಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ರಜತ್ ಪಟಿದಾರ್ ನೀಡಿದ ಜೀವದಾನದ ಲಾಭ ಪಡೆದ ರಾಹುಲ್ ಆರ್​ಸಿಬಿಗೆ ಸೋಲಿನ ಶಾಕ್ ನೀಡಿದರು.

IPL 2025: ಬ್ಯಾಟಿಂಗ್‌ ವೈಫಲ್ಯ; ತವರಿನಲ್ಲಿ ಸತತ 2ನೇ ಪಂದ್ಯ ಸೋತ ಆರ್​ಸಿಬಿ
Delhi Capitals
Follow us
ಪೃಥ್ವಿಶಂಕರ
|

Updated on:Apr 10, 2025 | 11:28 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ತವರಿನಲ್ಲಿ ಹೀನಾಯ ಸೋಲನ್ನು ಅನುಭವಿಸಿದೆ. ಐಪಿಎಲ್ 2025 ರ (IPL 2025) ತನ್ನ ಐದನೇ ಪಂದ್ಯದಲ್ಲಿ ಬೆಂಗಳೂರು ತಂಡವು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 6 ವಿಕೆಟ್‌ಗಳ ಸೋಲೊಪ್ಪಿಕೊಂಡಿತು. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ಬ್ಯಾಟಿಂಗ್‌ ವಿಭಾಗದ ವೈಫಲ್ಯದಿಂದಾಗಿ ಕೇವಲ 163 ರನ್‌ ಕಲೆಹಾಕಿತು. ಡೆಲ್ಲಿ ಪರ ಬೌಲಿಂಗ್‌ನಲ್ಲಿ ಮಿಂಚಿದ ವಿಪ್ರಜ್ ನಿಗಮ್ ಮತ್ತು ಕುಲ್ದೀಪ್ ಯಾದವ್ ಆರ್​ಸಿಬಿಯನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಇದಾದ ನಂತರ ಗುರಿ ಬೆನ್ನಟ್ಟಿದ ಡೆಲ್ಲಿ ಪರ ಜೀವದಾನದ ಲಾಭವನ್ನು ಸಂಪೂರ್ಣವಾಗಿ ಬಳಸಿಕೊಂಡ ಕೆಎಲ್ ರಾಹುಲ್ (KL Rahul) ಸತತ ಎರಡನೇ ಅರ್ಧಶತಕ ಬಾರಿಸಿ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಆರ್​ಸಿಬಿ ಬ್ಯಾಟಿಂಗ್ ವೈಫಲ್ಯ

ಗುರುವಾರ, ಏಪ್ರಿಲ್ 10 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಟಾಸ್ ಸೋತ ಬೆಂಗಳೂರು ಮೊದಲು ಬ್ಯಾಟಿಂಗ್ ಮಾಡಬೇಕಾಯಿತು. ಇದಕ್ಕೂ ಮೊದಲು ತಂಡವು ಮೊದಲು ಬ್ಯಾಟಿಂಗ್ ಮಾಡುವಾಗ ಗುಜರಾತ್ ಟೈಟಾನ್ಸ್ ವಿರುದ್ಧ ಸೋತಿತ್ತು. ಈ ಬಾರಿಯೂ ಕಥೆ ಬದಲಾಗಲಿಲ್ಲ. ಆದಾಗ್ಯೂ, ಈ ಬಾರಿ ತಂಡಕ್ಕೆ ಉತ್ತಮ ಆರಂಭ ನೀಡುವಲ್ಲಿ ಫಿಲ್ ಸಾಲ್ಟ್ ಹಾಗೂ ಕೊಹ್ಲಿ ಯಶಸ್ವಿಯಾದರು. ಆದರೆ ನಾಲ್ಕನೇ ಓವರ್‌ನಲ್ಲಿ ಎಲ್ಲವೂ ಬದಲಾಯಿತು. ಫಿಲ್ ಸಾಲ್ಟ್ ರನ್ ಔಟ್ ಆಗುವುದರೊಂದಿಗೆ ಆರ್​ಸಿಬಿಗೆ ಮೊದಲ ಆಘಾತ ಎದುರಾಯಿತು. ಇಲ್ಲಿಂದ ಆರ್​ಸಿಬಿ ಬ್ಯಾಟರ್​ಗಳ ಪೆವಿಲಿಯನ್ ಪರೇಡ್ ಕೂಡ ಆರಂಭವಾಯಿತು. ಮಧ್ಯಮ ಓವರ್‌ಗಳಲ್ಲಿ ವಿಪ್ರಾಜ್ ನಿಗಮ್, ಮುಖೇಶ್ ಕುಮಾರ್ ಮತ್ತು ಕುಲ್ದೀಪ್ ಯಾದವ್ ಬೆಂಗಳೂರು ಬ್ಯಾಟ್ಸ್‌ಮನ್‌ಗಳು ಮುಕ್ತವಾಗಿ ಬ್ಯಾಟ್ ಬೀಸದಂತೆ ಕಟ್ಟಿ ಹಾಕಿದರು. ನಾಯಕ ರಜತ್ ಪಟಿದಾರ್ ಮತ್ತು ಜಿತೇಶ್ ಶರ್ಮಾ ಕೂಡ ಈ ಬಾರಿ ವಿಶೇಷವಾದದ್ದೇನನ್ನೂ ಮಾಡಲು ಸಾಧ್ಯವಾಗಲಿಲ್ಲ. ಕೊನೆಯಲ್ಲಿ, ಟಿಮ್ ಡೇವಿಡ್ ಕೇವಲ 20 ಎಸೆತಗಳಲ್ಲಿ 37 ರನ್ ಗಳಿಸಿ ತಂಡವನ್ನು 163 ರನ್‌ಗಳ ಸ್ಕೋರ್‌ಗೆ ಕೊಂಡೊಯ್ದರು.

ಡೆಲ್ಲಿಗೂ ಆರಂಭಿಕ ಆಘಾತ

163 ರನ್ ಗುರಿ ಬೆನ್ನಟ್ಟಿದ ಡೆಲ್ಲಿಗೂ ಆರಂಭ ಉತ್ತಮವಾಗಿರಲಿಲ್ಲ. ಐದನೇ ಓವರ್ ವೇಳೆಗೆ ತಂಡವು ಕೇವಲ 30 ರನ್‌ಗಳಿಗೆ ಪ್ರಮುಖ 3 ವಿಕೆಟ್‌ಗಳನ್ನು ಕಳೆದುಕೊಂಡಿತ್ತು. ಭುವನೇಶ್ವರ್ ಕುಮಾರ್ ಮತ್ತು ಯಶ್ ದಯಾಳ್ ದೆಹಲಿಗೆ ಆರಂಭಿಕ ಆಘಾತ ನೀಡಿದರು. ಆ ಬಳಿಕ ತಂಡದ ಸ್ಕೋರ್ 58 ರನ್ ಗಳಿಸಿದಾಗ ನಾಯಕ ಅಕ್ಷರ್ ಪಟೇಲ್ ಕೂಡ ಪೆವಿಲಿಯನ್ ಸೇರಿಕೊಂಡರು. ಈ ವೇಳೆ ತಂಡದ ಇನ್ನಿಂಗ್ಸ್ ಜವಬ್ದಾರಿ ಹೊತ್ತುಕೊಂಡ ಕೆಎಲ್ ರಾಹುಲ್ ಟ್ರಿಸ್ಟಾನ್ ಸ್ಟಬ್ಸ್ ಅವರೊಂದಿಗೆ ಜೊತೆಗೂಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

IPL 2025: 1000 ಬೌಂಡರಿಗಳು; ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ ವಿರಾಟ್ ಕೊಹ್ಲಿ..!

ರಾಹುಲ್​ಗೆ ಜೀವದಾನ

ವಾಸ್ತವವಾಗಿ ಕೆಎಲ್ ರಾಹುಲ್ ಆರಂಭದಲ್ಲೇ ಔಟಾಗುತ್ತಿದ್ದರು. ಕೇವಲ 7 ರನ್​ಗಳ ವೈಯಕ್ತಿಕ ಸ್ಕೋರ್​ನಲ್ಲಿ ರಾಹುಲ್​ ಕ್ಯಾಚ್ ನೀಡಿದ್ದರು. ಆದರೆ ಕೊಂಚ ಕಷ್ಟಕರವಾದ ಕ್ಯಾಚ್ ಹಿಡಿಯುವಲ್ಲಿ ಆರ್​ಸಿಬಿ ನಾಯಕ ರಜತ್ ಪಾಟಿದರ್ ವಿಫಲರಾದರು. ಇದರಲ ಲಾಭ ಪಡೆದ ರಾಹುಲ್ ಮತ್ತೊಂದು ಅವಕಾಶವನ್ನು ನೀಡದೆ ಆರ್​ಸಿಬಿಗೆ ಸೋಲಿನ ಶಾಕ್ ನೀಡಿದರು. ಅಂತಿಮವಾಗಿ ರಾಹುಲ್ ಕೇವಲ 53 ಎಸೆತಗಳಲ್ಲಿ 93 ರನ್ ಗಳಿಸಿ ಅಜೇಯರಾಗಿ ಉಳಿದರೆ, ಸ್ಟಬ್ಸ್ ಕೂಡ 38 ರನ್ ಗಳಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:23 pm, Thu, 10 April 25

ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಪಾಕಿಸ್ತಾನದವರು ಬೈದರೂ ದಿನೇಶ್ ಗುಂಡೂರಾವ್​ಗೆ ಏನೂ ಅನಿಸಲ್ಲ: ಅಶೋಕ
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್