AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷ ಮಹಿಳೆಯರು, ಈ ವರ್ಷ ಪುರುಷರು; ನೀಗಿತು ಆರ್​​ಸಿಬಿ ಟ್ರೋಫಿ ಬರ

RCB Triumphs: ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡವು 2024ರ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆದರೆ ಪುರುಷರ ತಂಡದ ಟ್ರೋಫಿ ಬರ ಮುಂದುವರಿದಿತ್ತು. ಈ ಬಾರಿ ರಜತ್ ಪಾಟಿದರ್ ನೇತೃತ್ವದ ಪುರುಷರ ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದು ಆರ್‌ಸಿಬಿ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ. ಮಹಿಳಾ ತಂಡದ ಗೆಲುವು ಮತ್ತು ಪುರುಷರ ತಂಡದ ಗೆಲುವು ಎರಡೂ ಆರ್‌ಸಿಬಿ ಅಭಿಮಾನಿಗಳಿಗೆ ದೊಡ್ಡ ಸಂಭ್ರಮವನ್ನು ತಂದಿದೆ.

ಕಳೆದ ವರ್ಷ ಮಹಿಳೆಯರು, ಈ ವರ್ಷ ಪುರುಷರು; ನೀಗಿತು ಆರ್​​ಸಿಬಿ ಟ್ರೋಫಿ ಬರ
Rcb 2025
ಪೃಥ್ವಿಶಂಕರ
|

Updated on:Jun 04, 2025 | 4:40 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ 2025 (IPL 2025) ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿತು. ಜೂನ್ 3, 2025 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್‌ನಲ್ಲಿ, ಆರ್‌ಸಿಬಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಫೈನಲ್‌ನಲ್ಲಿ ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಿ 190 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಪಂಜಾಬ್ ಕಿಂಗ್ಸ್ ತಂಡವು 6 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಆರ್‌ಸಿಬಿ 17 ವರ್ಷಗಳ ದೀರ್ಘ ಕಾಯುವಿಕೆಗೆ ಅಂತ್ಯ ಹಾಡಿತು. ಇದಕ್ಕೂ ಮೊದಲು ಆರ್​​ಸಿಬಿ 2009, 2011 ಮತ್ತು 2016 ರಲ್ಲಿ ಫೈನಲ್‌ನಲ್ಲಿ ಸೋತಿದ್ದರು. ಆದರೆ ಕಳೆದೊಂದು ವರ್ಷದಿಂದ ಆರ್​​ಸಿಬಿ ಅದೃಷ್ಟ ಬದಲಾಗಿದ್ದು, ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ.

ಆರ್​ಸಿಬಿಗೆ ಬ್ಯಾಕ್ ಟು ಬ್ಯಾಕ್ ಕಪ್

ಹೌದು… ಆರ್​ಸಿಬಿ ಪುರುಷರ ತಂಡ ಟ್ರೋಫಿ ಗೆಲ್ಲುವುದಕ್ಕೂ ಮುನ್ನ ಮಹಿಳೆಯರ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ 2024 ರ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. 2023 ರಿಂದ ಆರಂಭವಾದ ಮಹಿಳೆಯರ ಪ್ರೀಮಿಯರ್ ಲೀಗ್​ನ ಮೊದಲ ಆವೃತ್ತಿಯನ್ನು ಮುಂಬೈ ಇಂಡಿಯನ್ಸ್ ಗೆದ್ದುಕೊಂಡರೆ, ಎರಡನೇ ಆವೃತ್ತಿಯಲ್ಲಿ ಆರ್​ಸಿಬಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಈ ಮೂಲಕ ಮಹಿಳಾ ತಂಡ ಆರ್​ಸಿಬಿ ಅಭಿಮಾನಿಗಳ ಟ್ರೋಫಿ ಬರವನ್ನು ನೀಗಿಸಿತ್ತು. ಆದಾಗ್ಯೂ ಆರ್​ಸಿಬಿ ಅಭಿಮಾನಿಗಳ ಮನದಲ್ಲಿ ಪುರುಷರ ತಂಡ ಟ್ರೋಫಿ ಗೆಲ್ಲದಿರುವ ಕೊರಗು ಹಾಗೆಯೇ ಉಳಿದಿತ್ತು. ಆದರೆ ಈ ಬಾರಿ ಆ ಬರ ನೀಗಿಸುವಲ್ಲಿ ರಜತ್ ಪಾಟಿದರ್ ನೇತೃತ್ವದ ಆರ್​ಸಿಬಿ ತಂಡ ಯಶಸ್ವಿಯಾಗಿದೆ.

IPL 2025: ಐಪಿಎಲ್ ಟ್ರೋಫಿ ಜೊತೆಗೆ ಬೆಂಗಳೂರಿಗೆ ಬಂದಿಳಿದ ಆರ್​ಸಿಬಿ ತಂಡ

ಆರ್​ಸಿಬಿ ಮಹಿಳಾ ತಂಡಕ್ಕೆ 8 ವಿಕೆಟ್ ಜಯ

ದೆಹಲಿಯ ಆರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಫೈನಲ್ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರ್​ಸಿಬಿ ಮಹಿಳಾ ತಂಡ ಬಲಿಷ್ಠ ಡೆಲ್ಲಿ ತಂಡವನ್ನು 8 ವಿಕೆಟ್​ಗಳಿಂದ ಮಣಿಸಿ ಮೊದಲ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಆ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ತಂಡ ಪೂರ್ಣ 20 ಓವರ್​ಗಳನ್ನು ಆಡಲಾಗದೆ 18.3 ಓವರ್​ಗಳಲ್ಲಿ ತನ್ನೇಲ್ಲ ವಿಕೆಟ್ ಕಳೆದುಕೊಂಡು 113 ರನ್ ಕಲೆಹಾಕಲಷ್ಟೇ ಶಕ್ತವಾಗಿತ್ತು. ಈ ಗುರಿ ಬೆನ್ನಟ್ಟಿದ ಆರ್​ಸಿಬಿ ಕೇವಲ 2 ವಿಕೆಟ್ ಕಳೆದುಕೊಂಡು ಇನ್ನು 3 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ದಡ ಸೇರಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:39 pm, Wed, 4 June 25

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು