Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ನೋಡ್ತಾಯಿರಿ… RCB ಸತತ 5 ಕಪ್ ಗೆಲ್ಲುತ್ತೆ..!

IPL 2025: ಐಪಿಎಲ್ ಸೀಸನ್-18 ಮಾರ್ಚ್ 22 ರಿಂದ ಶುರುವಾಗಲಿದೆ. ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಟೂರ್ನಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಮೂಲಕ ಪಂದ್ಯದ ಮೂಲಕ ಆರ್​ಸಿಬಿ ಶುಭಾರಂಭ ಮಾಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ.

IPL 2025: ನೋಡ್ತಾಯಿರಿ... RCB ಸತತ 5 ಕಪ್ ಗೆಲ್ಲುತ್ತೆ..!
Jitesh Sharma
Follow us
ಝಾಹಿರ್ ಯೂಸುಫ್
|

Updated on: Mar 18, 2025 | 9:04 AM

17 ವರ್ಷಗಳು… ಒಂದೇ ಒಂದು ಕಪ್ ಗೆದ್ದಿಲ್ಲ… ಪ್ರತಿ ಸೀಸನ್​ನಲ್ಲೂ ಲೆಕ್ಕಾಚಾರ… ಕೊನೆಗೆ ನೋವಿನ ವಿದಾಯ. ಆದರೆ ಈ ಬಾರಿ ಹಾಗೆ ಆಗುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ. ಈ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ ಜಿತೇಶ್, ನಮ್ಮ ತಂಡವು ಈ ಬಾರಿ ತುಂಬಾ ಬಲಿಷ್ಠವಾಗಿದೆ. ದೇಶೀಯ ಮತ್ತು ಅಂತರರಾಷ್ಟ್ರೀಯ ಅನುಭವ ಹೊಂದಿರುವ ಆಟಗಾರರು ತಂಡದಲ್ಲಿದ್ದಾರೆ.

ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ ಮತ್ತು ಸುಯಶ್ ಅವರಂತಹ ಆಟಗಾರರು ತಂಡದಲ್ಲಿದ್ದಾರೆ. ಹಾಗೆಯೇ ಯಶ್ ದಯಾಳ್ ಅವರಂತಹ ಬಲಿಷ್ಠ ಭಾರತೀಯ ಬೌಲರ್‌ಗಳನ್ನು ಹೊಂದಿದ್ದೇವೆ. ಅತ್ತ ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್ ಅವರಂತಹ ಅತ್ಯುತ್ತಮ ವಿದೇಶಿ ಆಟಗಾರರು ಸಹ ತಂಡದಲ್ಲಿದ್ದಾರೆ. ಹೀಗಾಗಿ ಈ ಬಾರಿಯ ಆರ್​ಸಿಬಿ ತಂಡವು ಉತ್ತಮ ಸಮತೋಲನದಿಂದ ಕೂಡಿದೆ ಎನ್ನಬಹುದು. ಹಾಗಾಗಿ ಈ ಬಾರಿ ಆರ್​ಸಿಬಿ ತಂಡದಿಂದ ಕಪ್ ಅನ್ನು ನಿರೀಕ್ಷಿಸಬಹುದು ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

ಇನ್ನು ಆರ್​ಸಿಬಿ ಲೀಗ್​ ಹಂತದಲ್ಲಿ ಆಡಲಿರುವ 14 ಪಂದ್ಯಗಳಲ್ಲಿ 11 ಮ್ಯಾಚ್​ಗಳನ್ನು ನಾನೇ ಗೆಲ್ಲಿಸಿಕೊಡಬೇಕೆಂದು ಬಯಸುತ್ತೇನೆ. ಇನ್ನು ಮೂರು ಪಂದ್ಯಗಳನ್ನು ಲಿಯಾಮ್ ಲಿವಿಂಗ್​ಸ್ಟೋನ್ ಗೆಲ್ಲಿಸಲಿ. ಈ ಮೂಲಕ ಲೀಗ್​ ಹಂತದಲ್ಲೇ ಆರ್​ಸಿಬಿ ತಂಡದ ಪಾರುಪತ್ಯವನ್ನು ಎದುರು ನೋಡುತ್ತಿರುವುದಾಗಿ ಜಿತೇಶ್ ಶರ್ಮಾ ಹೇಳಿದ್ದಾರೆ.

ಇದನ್ನೂ ಓದಿ
Image
IPL 2025: RCB ನೂತನ ಜೆರ್ಸಿ ಫೋಟೋ ಇಲ್ಲಿದೆ
Image
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
Image
ಈ ಸಲನೂ RCB ಕಪ್ ಗೆಲ್ಲದಿರಲಿ, ಅದಕ್ಕಾಗಿ ನಾನು ಪ್ರಾರ್ಥಿಸುವೆ..!
Image
ಗಂಭೀರ್ ಅವರ ಒಂದು ದೃಢ ನಿರ್ಧಾರ ಚಾಂಪಿಯನ್ಸ್ ಟ್ರೋಫಿಯ ಚಿತ್ರಣ ಬದಲಿಸಿತು

ಮಾತು ಮುಂದುವರೆಸಿದ ಜಿತೇಶ್ ಶರ್ಮಾ, ನಾವು ಈವರೆಗೆ ಟ್ರೋಫಿ ಗೆದ್ದಿಲ್ಲ ಎಂಬುದು ನಿಜ. ಆದರೆ ಒಮ್ಮೆ ನಾವು ಕಪ್ ಗೆಲ್ಲಲಿ… ಆ ಬಳಿಕ ಸತತ 5 ಟ್ರೋಫಿಗಳನ್ನು ಗೆಲ್ಲಲಿದ್ದೇವೆ ಎಂಬ ವಿಶ್ವಾಸವನ್ನು ಸಹ ವ್ಯಕ್ತಪಡಿಸಿದ್ದಾರೆ.

ಅಂದಹಾಗೆ ಜಿತೇಶ್ ಶರ್ಮಾ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಕಣಕ್ಕಿಳಿದಿದ್ದರು. ಈ ವೇಳೆ 14 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಅವರು ಒಟ್ಟು 142 ಎಸೆತಗಳನ್ನು ಎದುರಿಸಿ ಕಲೆಹಾಕಿದ್ದು ಕೇವಲ 187 ರನ್​ಗಳು ಮಾತ್ರ.

ಇನ್ನು ಐಪಿಎಲ್​ನಲ್ಲಿ ಈವರೆಗೆ 40 ಪಂದ್ಯಗಳಲ್ಲಿ ಕಾಣಿಸಿಕೊಂಡಿರುವ ಅವರು ಒಟ್ಟು 730 ರನ್​ ಗಳಿಸಿದ್ದಾರೆ. ಇದಾಗ್ಯೂ ಅವರ ಬ್ಯಾಟ್​ನಿಂದ ಒಂದೇ ಒಂದು ಅರ್ಧಶತಕ ಮೂಡಿಬಂದಿಲ್ಲ.

ಇದನ್ನೂ ಓದಿ: IPL 2025: 8 ಆಟಗಾರರು ಎಂಟ್ರಿ: RCB ಅಭಿಮಾನಿಗಳಿಗೆ ಗುಡ್​ ನ್ಯೂಸ್

ಇದೀಗ ಆರ್​ಸಿಬಿ ತಂಡದ ಪಾಲಾಗಿರುವ ಜಿತೇಶ್ ಶರ್ಮಾ ಈ ಬಾರಿಯ ಐಪಿಎಲ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಫಿನಿಶರ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಮೂಲಕ ಅವರೇ ಹೇಳಿದಂತೆ 11 ಪಂದ್ಯಗಳಲ್ಲಿ ಜಯ ತಂದುಕೊಡಲಿದ್ದಾರಾ ಕಾದು ನೋಡಬೇಕಿದೆ.

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಶಿವಪುರಿಯ ಮಾತಟಿಲಾ ಡ್ಯಾಂನಲ್ಲಿ ಮುಳುಗಿದ ದೋಣಿ; 7 ಜನ ಸಾವನ್ನಪ್ಪಿರುವ ಶಂಕೆ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ