AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs CSK Playing11: ಸಿಎಸ್​ಕೆ ವಿರುದ್ಧ ಗೆಲ್ಲಲು ಕೊಹ್ಲಿ ಮಾಸ್ಟರ್ ಪ್ಲ್ಯಾನ್: ಆರ್​ಸಿಬಿಯಲ್ಲಿ 2 ಬದಲಾವಣೆ ಖಚಿತ

Who will win today IPL Match: ಐಪಿಎಲ್ 2021 ಎರಡನೇ ಚರಣದ ಮೊದಲ ಪಂದ್ಯದಲ್ಲಿ ಯುವ ಆಟಗಾರರಿಗೆ ಅವಕಾಶ ಕೊಟ್ಟು ವಿರಾಟ್ ಕೊಹ್ಲಿ, ಆರ್​ಸಿಬಿ ತಂಡ ಕೈಸುಟ್ಟುಕೊಂಡಿತ್ತು. ಕೇವಲ 92 ರನ್​ಗೆ ಆಲೌಟ್ ಆಯಿತು.

RCB vs CSK Playing11: ಸಿಎಸ್​ಕೆ ವಿರುದ್ಧ ಗೆಲ್ಲಲು ಕೊಹ್ಲಿ ಮಾಸ್ಟರ್ ಪ್ಲ್ಯಾನ್: ಆರ್​ಸಿಬಿಯಲ್ಲಿ 2 ಬದಲಾವಣೆ ಖಚಿತ
RCB Virat Kohli
TV9 Web
| Edited By: |

Updated on: Sep 24, 2021 | 9:23 AM

Share

ಐಪಿಎಲ್ 2021 (IPL2021) ರಲ್ಲಿಂದು ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿಗರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ನಡುವಣ ಕಾಳಗ ನಡೆಯಲಿದ್ದು, ಹೈವೋಲ್ಟೇಜ್ ಪಂದ್ಯ ನಿರೀಕ್ಷಿಸಲಾಗಿದೆ. ಟೂರ್ನಿಯ ಆರಂಭದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ (Virat Kohli) ಬಳಗ ಎರಡನೇ ಚರಣದಲ್ಲಿ ಕಳಪೆ ಆರಂಭ ಪಡೆದುಕೊಂಡಿತು. ಕೆಕೆಆರ್ (KKR) ವಿರುದ್ಧದ ಮೊದಲ ಪಂದ್ಯದಲ್ಲೇ ಹೀನಾಯ ಸೋಲು ಕಂಡಿತು. ಹೀಗಾಗಿ ಆರ್​ಸಿಬಿಗೆ (RCB) ಇಂದಿನ ಪಂದ್ಯ ಮುಖ್ಯವಾಗಿದ್ದು, ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಇತ್ತ ಎಂ. ಎಸ್ ಧೋನಿ (MS Dhoni) ಪಡೆ ಪಾಯಿಂಟ್ ಟೇಬಲ್​ನಲ್ಲಿ ಎರಡನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯ ಗೆದ್ದು ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸುವ ಲೆಕ್ಕಚಾರದಲ್ಲಿದೆ. ಅಲ್ಲದೆ ಪ್ಲೇ ಆಫ್​ಗೆ ಆರ್​ಸಿಬಿ ಅಥವಾ ಸಿಎಸ್​ಕೆ (CSK) ತಲುಪಿಲ್ಲ ಎಂದಾದರೆ ನಾಯಕರಾಗಿ ಕೊಹ್ಲಿ ಮತ್ತು ಧೋನಿ (Kohli vs Dhoni) ಮುಖಾಮುಖಿ ಆಗುತ್ತಿರುವುದು ಇದೇ ಕೊನೇಯ ಬಾರಿಯಾಗಿದೆ. ಹೀಗಾಗಿ ಅನೇಕ ಕಾರಣಗಳಿಗೆ ಇಂದಿನ ಪಂದ್ಯ ಸಾಕ್ಷಿಯಾಗಲಿದೆ.

ಎರಡನೇ ಚರಣದ ಮೊದಲ ಪಂದ್ಯದಲ್ಲಿ ಯುವ ಆಟಗಾರರಿಗೆ ಅವಕಾಶ ಕೊಟ್ಟು ಆರ್​ಸಿಬಿ ಕೈಸುಟ್ಟುಕೊಂಡಿತ್ತು. ಕೇವಲ 92 ರನ್​ಗೆ ಆಲೌಟ್ ಆಯಿತು. ಪ್ರಮುಖವಾಗಿ ಶ್ರೀಕರ್ ಭರತ್ ಮತ್ತು ಸಚಿನ್ ಬೇಬಿ ಸಿಕ್ಕ ಅವಕಾಶವನ್ನು ಉಪಯೋಗಿಸಕೊಂಡಿಲ್ಲ. ಹೀಗಾಗಿ ಇಂದಿನ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೆ ತಂಡದಲ್ಲಿ ಬದಲಾವಣೆ ಖಚಿತ ಎಂದೇ ಹೇಳಬಹುದು.

ನಾಯಕ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ ಬಿಟ್ಟರೆ ಯಶಸ್ಸು ಸಾಧಿಸುತ್ತಿಲ್ಲ. ಹೀಗಾಗಿ ಓಪನರ್ ಸ್ಥಾನದಿಂದ ಹಿಂದೆ ಸರಿದು ಇತರೆ ಆಟಗಾರರಿಗೆ ಅವಕಾಶ ನೀಡುತ್ತಾರ ಎಂಬ ಕುತೂಹಲವಿದೆ. ಎಬಿ ಡಿವಿಲಿಯರ್ಸ್ ಮತ್ತು ಗ್ಲೆನ್ ಮ್ಯಾಕ್ಸ್​ವೆಲ್ ಸ್ಥಾನ ತಂಡಕ್ಕೆ ಮುಖ್ಯವಾಗಿದೆ. ಮೊದಲ ಚರಣದಲ್ಲಿ ನಿರೀಕ್ಷೆ ಹುಟ್ಟಿಸಿದ್ದ ರಜತ್ ಪಟಿದಾರ್ ಆಡುವ ಬಳಗಕ್ಕೆ ಕಮ್​ಬ್ಯಾಕ್ ಮಾಡುವ ಸಾಧ್ಯತೆಯಿದೆ.

ಅಂತೆಯೆ ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ಮೊಹಮ್ಮದ್ ಅಜರುದ್ದೀನ್ ಇಂದಿನ ಪಂದ್ಯದಲ್ಲಿ ಆಡುವ ಸಂಭವವಿದೆ. ಬೌಲಿಂಗ್ ವಿಭಾಗದಲ್ಲಿ ವನಿಂದು ಹಸರಂಗ ಅವರನ್ನು ಕೈಬಿಟ್ಟು ಟಿಮ್ ಡೇವಿಡ್ ಕಣಕ್ಕಿಳಿದರೆ ಅಚ್ಚರಿಯಿಲ್ಲ. ಉಳಿದಂತೆ ಕೈಲ್ ಜೆಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್ ಮತ್ತು ನವ್​ದೀಪ್ ಸೈನಿ ಪ್ಲೇಯಿಂಗ್ ಇಲೆವೆನ್​ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲಿದ್ದಾರೆ.

ಇತ್ತ ಚೆನ್ನೈ ತಂಡದಲ್ಲೂ ಬದಲಾವಣೆ ನಿರೀಕ್ಷಿಸಲಾಗಿದೆ. ಸ್ಯಾಮ್ ಕುರ್ರನ್ ಇಂದಿನ ಪಂದ್ಯಕ್ಕೆ ಲಭ್ಯರಾಗುವ ಸಾಧ್ಯತೆ ಇದೆ. ಹೀಗಾದಲ್ಲಿ ಮೊಯೀನ್ ಅಲಿಗೆ ವಿಶ್ರಾಂತಿ ನೀಡಬಹುದು. ಚೆನ್ನೈ ಪರ ಅನುಭವಿ ಆಟಗಾರರ ಕಳಪೆ ಫಾರ್ಮ್​ ಒಂದುಕಡೆಯಾದರೆ ಯಂಗ್ ಸ್ಟಾರ್ಸ್​ಗಳು ಬೊಂಬಾಟ್ ಪ್ರದರ್ಶನ ತೋರುತ್ತಿದ್ದಾರೆ. ಕಳೆದ ಪಂದ್ಯದಲ್ಲಿ ರಜತ್ ಪಟಿದಾರ್ ಆಟ ಎಲ್ಲರ ಹುಬ್ಬೇರುವಂತೆ ಮಾಡಿದ್ದರು.

ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಣ ಪಂದ್ಯ ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಸಂಜೆ 7:30ಕ್ಕೆ ಮ್ಯಾಚ್ ಪ್ರಾರಂಭವಾಗಲಿದ್ದು, 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.

Point Table IPL 2021: ಪಾಯಿಂಟ್ ಟೇಬಲ್​ನಲ್ಲಿ ಆರನೇ ಸ್ಥಾನಕ್ಕೆ ಕುಸಿದ ಮುಂಬೈ: ಇತರೆ ತಂಡಗಳು ಯಾವ ಸ್ಥಾನದಲ್ಲಿದೆ?

IPL 2021, RCB vs CSK: ಇಂದು ಬೆಂಗಳೂರು-ಚೆನ್ನೈ ಕಾದಾಟ: ಪುಟಿದೇಳುವ ವಿಶ್ವಾಸದಲ್ಲಿ ಕೊಹ್ಲಿ ಬಳಗ

(RCB Playing 11 IPL 2021 RCB vs CSK Virat Kohli Team Royal Challengers Bangalore vs MS Dhoni Team Chennai Super Kings)

ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್