AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2021, KKR vs RCB: ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI

RCB Playing 11 vs KKR: ಆರ್​ಸಿಬಿ ಪರ ಓಪನರ್​ಗಳಾಗಿ ನಾಯಕ ವಿರಾಟ್ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್ ಕಣಕ್ಕಿಳಿಯುವುದು ಖಚಿತ. ಈ ಜೋಡಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರೆ ಅರ್ಧದಷ್ಟು ಪಂದ್ಯ ಗೆದ್ದಂತೆ.

IPL 2021, KKR vs RCB: ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಕೊಹ್ಲಿಯ ಮಾಸ್ಟರ್ ಪ್ಲಾನ್: ಇಲ್ಲಿದೆ ನೋಡಿ ಸಂಭಾವ್ಯ ಪ್ಲೇಯಿಂಗ್ XI
RCB Playing 11 vs KKR
TV9 Web
| Updated By: Vinay Bhat|

Updated on: Sep 20, 2021 | 8:37 AM

Share

ಐಪಿಎಲ್ 2021 (IPL 2021) ರಲ್ಲಿ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡ ಎರಡನೇ ಚರಣದಲ್ಲಿ ಇಂದು ತನ್ನ ಅಭಿಯಾನ ಆರಂಭಿಸಲಿದೆ. ಅಬುಧಾಬಿಯ ಶೇಕ್ ಝಯೇದ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ ವಿರಾಟ್ ಕೊಹ್ಲಿ (Virat Kohli) ಪಡೆ ಕಣಕ್ಕಿಳಿಯಲಿದ್ದು ಮತ್ತೊಂದು ಗೆಲುವನ್ನು ಎದುರು ನೋಡುತ್ತಿದೆ. ಇದಕ್ಕಾಗಿ ಆರ್​ಸಿಬಿ ಬಲಿಷ್ಠ ತಂಡವನ್ನೇ ಕಣಕ್ಕಿಳಿಸುವ ಪ್ಲಾನ್ ಮಾಡಿಕೊಂಡಿದೆ. ಮೊದಲ ಚರಣಕ್ಕಿಂತ ಈ ಬಾರಿ ಬೆಂಗಳೂರು ಮತ್ತಷ್ಟು ಬಲಿಷ್ಠವಾಗಿದ್ದು ಕೆಲ ಹೊಸ ಆಟಗಾರರು ಸೇರಿಕೊಂಡಿದ್ದಾರೆ. ಹಾಗಾದ್ರೆ ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಪ್ಲೇಯಿಂಗ್ ಇಲೆವೆನ್ (RCB Playing XI) ಹೇಗಿರಲಿದೆ?, ಯಾವೆಲ್ಲ ಆಟಗಾರರು ಕಣಕ್ಕಿಳಿಯಬಹುದು ಎಂಬುದನ್ನು ನೋಡೋಣ.

ಆರ್​ಸಿಬಿ ಪರ ಓಪನರ್​ಗಳಾಗಿ ನಾಯಕ ವಿರಾಟ್ ಕೊಹ್ಲಿ ಜೊತೆ ದೇವದತ್ ಪಡಿಕ್ಕಲ್ ಕಣಕ್ಕಿಳಿಯುವುದು ಖಚಿತ. ಈ ಜೋಡಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದರೆ ಅರ್ಧದಷ್ಟು ಪಂದ್ಯ ಗೆದ್ದಂತೆ. ಮೂರನೇ ಕ್ರಮಾಂಕದಲ್ಲಿ ಈ ಹಿಂದೆ ರಜತ್ ಪಟಿದಾರ್ ಆಡುತ್ತಿದ್ದರು. ಪಟಿದಾರ್ ಮೊದಲ ಚರಣದಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಆದರೆ, ಕಳೆದ ಅಭ್ಯಾಸ ಪಂದ್ಯದಲ್ಲಿ ಮೊಹಮ್ಮದ್ ಅಜರುದ್ದೀನ್ ಸ್ಫೋಟಕ ಬ್ಯಾಟಿಂಗ್ ನಡೆಸಿ ಭರವಸೆ ಮೂಡಿಸಿದ್ದಾರೆ. ಹೀಗಾಗಿ ಇವರ ಜಾಗಕ್ಕೆ ಅಜರುದ್ದೀನ್ ಬಂದರೂ ಬರಬಹುದು.

ನಾಲ್ಕನೇ ಕ್ರಮಾಂಕದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ ಕಣಕ್ಕಿಳಿಯಲಿದ್ದು ಇವರ ಪಾತ್ರ ಬಹಳ ಮುಖ್ಯವಾಗಿದೆ. ಆರ್​ಸಿಬಿ ಪರ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡುತ್ತಿರುವ ಮ್ಯಾಕ್ಸ್​ವೆಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. ಇನ್ನೂ 5ನೇ ಕ್ರಮಾಂಕದಲ್ಲಿ ದಿ ಗ್ರೇಟ್ ಫಿನಿಶರ್ ಎಬಿ ಡಿವಿಲಿಯರ್ಸ್ ಆಡಲಿದ್ದಾರೆ. 15 ಓವರ್ ಬಳಿಕ ಇವರಿಗೆ ಬ್ಯಾಟಿಂಗ್ ಅವಕಾಶ ಲಭಿಸಿದರೆ ಎದುರಾಳಿಗೆ ಇವರು ಮಾರಕವಾಗಿ ಪರಿಣಮಿಸುತ್ತಾರೆ.

ಶಹ್ಬಾಜ್ ಅಹ್ಮದ್ ನಂತರದ ಸ್ಥಾನದಲ್ಲಿ ಆಡಿದರೆ, ವಾನಿಂದು ಹಸರಂಗ ಸ್ಥಾನ ಪಡೆಯುವ ಸಂಭವವಿದೆ. ಬಳಿಕ ಕೈಲ್ ಜೇಮಿಸನ್ ಸ್ಥಾನ ಪಡೆಯುವ ಸಾಧ್ಯತೆ ಇದೆ. ಬೌಲಿಂಗ್​ನಲ್ಲಿ ಜೇಮಿಸನ್ ತಮ್ಮ ಅದ್ಭುತ ಪ್ರದರ್ಶನ ತೋರುತ್ತಿದ್ದಾರೆ. ಜೊತೆಗೆ ಬ್ಯಾಟಿಂಗ್​ನಲ್ಲೂ ಇವರು ಸದ್ದು ಮಾಡುತ್ತಿದ್ದಾರೆ. ಇನ್ನುಳಿದಂತೆ ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್ ಮತ್ತು ಯುಜ್ವೇಂದ್ರ ಚಹಾಲ್ ತಮ್ಮ ಸ್ಥಾನ ಭದ್ರ ಪಡಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ತಮ್ಮ ತಂಡದ ಬಗ್ಗೆ ಮಾತನಾಡಿದ್ದು, ಹೊಸ ಆಟಗಾರರ ಸೇರ್ಪಡೆ ತಂಡದ ಬಲ ಹೆಚ್ಚಿಸಿದೆ. ಹಸರಂಗ, ಚಮೀರ ನಮಗೆ ಉಪಯುಕ್ತ ಆಟಗಾರರಾಗಬಲ್ಲರು. ಟೂರ್ನಿಯ ಮೊದಲ ಭಾಗದಲ್ಲಿ ಉತ್ತಮ ಆರಂಭ ಕಂಡಿದ್ದೆವು. ಅದು ತಂಡಕ್ಕೆ ಸಾಕಷ್ಟು ಆತ್ಮವಿಶ್ವಾಸ ತುಂಬಿದೆ. ನಮ್ಮ ಉತ್ತಮ ನಿರ್ವಹಣೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಪ್ಲೇಯಿಂಗ್ XI:

ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ (ನಾಯಕ), ರಜತ್ ಪಟಿದಾರ / ಮೊಹಮ್ಮದ್ ಅಜರುದ್ದಿನ್, ಗ್ಲೆನ್ ಮ್ಯಾಕ್ಸ್​ವೆಲ್, ಎಬಿ ಡಿವಿಲಿಯರ್ಸ್ (ವಿಕೆಟ್ ಕೀಪರ್), ಶಹ್ಬಾಜ್ ಅಹ್ಮದ್, ವಾನಿಂದು ಹಸರಂಗ, ಕೈಲ್ ಜೇಮಿಸನ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಹಾಲ್.

IPL 2021: ಇಂದು ಬಹುನಿರೀಕ್ಷೆಯ ಆರ್​ಸಿಬಿ ಪಂದ್ಯ: ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ ಕೆಕೆಆರ್

IPL 2021: RCB vs KKR ಮುಖಾಮುಖಿ: ಅಂಕಿ ಅಂಶಗಳ ಪ್ರಕಾರ ಯಾರು ಬಲಿಷ್ಠ?

(RCB Playing 11 vs KKR IPL 2021 Match 31: It will be a difficult task for the management to pick a XI)

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್