
IPL 2026: ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್ನ ಕೊನೆಯ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಭಾನುವಾರ (ಮೇ.31) ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಗುಜರಾತ್ ಟೈಟಾನ್ಸ್ (GT) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ಹೇಗೆ ಪ್ಲೇಯಿಂಗ್ ಇಲೆವೆನ್ ರೂಪಿಸಲಿದೆ ಎಂಬುದೇ ಈಗ ಕುತೂಹಲ.
ಏಕೆಂದರೆ ಈ ಬಾರಿ ಆರ್ಸಿಬಿ ಗುಜರಾತ್ ಟೈಟಾನ್ಸ್ ವಿರುದ್ಧ ಮೂರು ಪಂದ್ಯಗಳನ್ನಾಡಿದೆ. ಈ ಮೂರು ಮ್ಯಾಚ್ಗಳಲ್ಲೂ ವಿಭಿನ್ನ ಪ್ಲೇಯಿಂಗ್ ಇಲೆವೆನ್ ರೂಪಿಸಿತ್ತು. ಈ ಸಂಯೋಜನೆಯೊಂದಿಗೆ ಆರ್ಸಿಬಿ ಎರಡು ಮ್ಯಾಚ್ಗಳಲ್ಲಿ ಜಯ ಸಾಧಿಸಿದೆ.
ಆದರೆ ಈ ಎರಡು ಜಯಗಳ ನಡುವೆ ಆರ್ಸಿಬಿ ಒಂದು ಪಂದ್ಯದಲ್ಲಿ ಸೋಲನುಭವಿಸಿದೆ. ಅದು ಕೂಡ ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ. ಅಂದರೆ ಇದೀಗ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಫೈನಲ್ ಮ್ಯಾಚ್ ನಡೆಯುತ್ತಿದೆ.
ಈ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಬೌಲರ್ಗಳು ಪರಾಕ್ರಮ ಮೆರೆದಿದ್ದರು. ಅಂದರೆ ಆರ್ಸಿಬಿ ತಂಡವನ್ನು ಕೇವಲ 155 ರನ್ಗಳಿಗೆ ಆಲೌಟ್ ಮಾಡಿದ್ದರು.
ಇದೀಗ ಅದೇ ಮೈದಾನದಲ್ಲಿ ಮತ್ತೆ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲು ಆರ್ಸಿಬಿ ಸಜ್ಜಾಗಿದೆ. ಆದರೆ ಈ ಪಂದ್ಯಕ್ಕಾಗಿ ಆರ್ಸಿಬಿ ಕೊನೆಯ ಬಾರಿ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್ ಅನ್ನೇ ಮುಂದುವರೆಸಲಿದೆಯಾ? ಅಥವಾ ಈ ಹಿಂದೆ ಅಹಮದಾಬಾದ್ನಲ್ಲಿ ಆಡಿದ 11 ಆಟಗಾರರನ್ನು ಕಣಕ್ಕಿಳಿಸಲಿದೆಯಾ ಎಂಬುದೇ ಪ್ರಶ್ನೆ.
ಮೊದಲ ಕ್ವಾಲಿಫೈಯರ್ನಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ದಾಖಲೆಯ ವಿಜಯ ಸಾಧಿಸಿದ ಆಡುವ ಬಳಗವನ್ನೇ ಮುಂದುವರೆಸಲು ಬಯಸಿದರೆ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಈ ಹಿಂದೆ ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಕಣಕ್ಕಿಳಿದ ಬಳಗವನ್ನು ಆಡಿಸಲು ನಿರ್ಧರಿಸಿದರೆ ಆರ್ಸಿಬಿ ತಂಡದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
ಇಲ್ಲಿ ಎರಡು ಪ್ಲೇಯಿಂಗ್ ಇಲೆವೆನ್ನಲ್ಲಿ ಅಂತಹ ದೊಡ್ಡ ಬದಲಾವಣೆ ಕಂಡು ಬರದಿದ್ದರೂ, ಫಿಲ್ ಸಾಲ್ಟ್ಗೆ ಅವಕಾಶ ನೀಡುವ ಸಲುವಾಗಿ ವೆಂಕಟೇಶ್ ಅಯ್ಯರ್ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಲಿಸ್ಟ್ನಲ್ಲಿರಿಸಬಹುದು.
ಇದನ್ನೂ ಓದಿ: IPL 2026: ಐವರು ರಣಬೇಟೆಗಾರರು RCB ಪಾಲಿಗೆ ಡೇಂಜರಸ್!
ಈ ಮೂಲಕ ಬಲಿಷ್ಠ ಬ್ಯಾಟಿಂಗ್ ಲೈನಪ್ನೊಂದಿಗೆ ಫೈನಲ್ ಪಂದ್ಯದಲ್ಲಿ ಆರ್ಸಿಬಿ ಕಣಕ್ಕಿಳಿಯುವ ಸಾಧ್ಯತೆಯಿದೆ. ಏಕೆಂದರೆ ಇದೇ ಮೈದಾನದಲ್ಲಿ ಕಳೆದ ಬಾರಿ ಆರ್ಸಿಬಿ ಕೇವಲ 155 ರನ್ಗಳಿಗೆ ಆಲೌಟ್ ಆಗಿತ್ತು. ಹೀಗಾಗಿ ಈ ಬಾರಿ ಬ್ಯಾಟಿಂಗ್ ಲೈನಪ್ ಮತ್ತಷ್ಟು ಬಲಿಷ್ಠಗೊಳಿಸುವ ಸಾಧ್ಯತೆ ಹೆಚ್ಚು.