RCB vs CSK: ಸಿಎಸ್​​ಕೆ ವಿರುದ್ಧ ಹೊಸ ಪ್ರಯೋಗಕ್ಕೆ ಮುಂದಾದ ಆರ್​ಸಿಬಿ: ಶಹಬಾಜ್ ಔಟ್, ಈ ಆಟಗಾರ ಇನ್?

RCB Playing XI vs CSK, IPL 2022: ಆರ್​​ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಬೇಕಾಗಿದೆ. ಹೀಗಾಗಿ ಸಿಎಸ್​ಕೆ ವಿರುದ್ಧದ ಪಂದ್ಯಕ್ಕೆ ಶಹಬಾಜ್ ಅಹ್ಮದ್​ ಅವರನ್ನು ಕೈಬಿಟ್ಟು ಅವಕಾಶಕ್ಕಾಗಿ ಕಾಯುತ್ತಿರುವ ಅನುಭವಿ ಈ ಐಪಿಎಲ್ ಸ್ಪಿನ್ನರ್​​ರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ.

RCB vs CSK: ಸಿಎಸ್​​ಕೆ ವಿರುದ್ಧ ಹೊಸ ಪ್ರಯೋಗಕ್ಕೆ ಮುಂದಾದ ಆರ್​ಸಿಬಿ: ಶಹಬಾಜ್ ಔಟ್, ಈ ಆಟಗಾರ ಇನ್?
RCB Playing XI vs CSK
Follow us
TV9 Web
| Updated By: Vinay Bhat

Updated on:May 04, 2022 | 8:55 AM

ತಂಡದಲ್ಲಿ ಅನುಭವಿ ಆಟಗಾರರ ದಂಡೇ ಇದ್ದರೂ ಸಂಘಟಿತ ಪ್ರದರ್ಶನ ನೀಡಲು ಎಡವುತ್ತಿರುವ ಎರಡು ತಂಡಗಳ ನಡುವೆ ಇಂದು ಐಪಿಎಲ್ 2022ರ (IPL 2022) 49ನೇ ಪಂದ್ಯ ನಡೆಯಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಫಾಪ್ ಡುಪ್ಲೆಸಿಸ್ (Faf Duplessis) ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ತಂಡ ಮುಖಾಮುಖಿ ಆಗುತ್ತಿದೆ. ಆರ್​ಸಿಬಿ 10 ಪಂದ್ಯಗಳನ್ನಾಡಿ 5 ಪಂದ್ಯಗಳಲ್ಲಿ ಗೆದ್ದು, ಉಳಿದ 5 ಪಂದ್ಯಗಳಲ್ಲಿ ಸೋತು 10 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ. ಇತ್ತ ಸಿಎಸ್​ಕೆ 9 ಪಂದ್ಯಗಳನ್ನಾಡಿ 3 ಪಂದ್ಯಗಳಲ್ಲಿ ಗೆದ್ದು ಉಳಿದ 6 ಪಂದ್ಯಗಳಲ್ಲಿ ಸೋತಿದ್ದು 6 ಅಂಕಗಳನ್ನು ಪಡೆದುಕೊಂಡು ಅಂಕಪಟ್ಟಿಯಲ್ಲಿ ಒಂಬತ್ತನೇ ಸ್ಥಾನದಲ್ಲಿದೆ. ಹೀಗಾಗಿ ಉಭಯ ತಂಡಗಳಿಗೂ ಇದು ಮಹತ್ವದ ಪಂದ್ಯವಾಗಿದ್ದು ಗೆಲ್ಲಲೇ ಬೇಕಾದ ಒತ್ತಡದಲ್ಲಿದೆ. ಇದರ ನಡುವೆ ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ಬೆಂಗಳೂರು ತಂಡದಲ್ಲಿ ಮಹತ್ವದ ಬದಲಾವಣೆ ನಿರೀಕ್ಷಿಸಲಾಗಿದೆ.

ರಾಯಲ್ ಚಾಲೆಂಜರ್ಸ್​ ತಂಡಕ್ಕೆ ಮೊದಲಾರ್ಧ ಹಾಗೂ ದ್ವಿತೀಯಾರ್ಧದಲ್ಲಿ ಕಾಡುತ್ತಿರುವ ಸಮಸ್ಯೆ ಓಪನರ್ಸ್​. ಒಂದೆರೆಡು ಪಂದ್ಯಗಳಲ್ಲಿ ಬಿಟ್ಟರೆ, ಯಾವೊಂದು ಪಂದ್ಯದಲ್ಲೂ ಆರಂಭಿಕರಿಂದ ನಿರೀಕ್ಷಿತ ಪ್ರದರ್ಶನ ಬಂದಿಲ್ಲ. ಕಳೆದ ಎರಡು ಪಂದ್ಯಗಳಿಂದ ಸ್ವತಃ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲಿಸಿಯೇ ಇನ್ನಿಂಗ್ಸ್​ ಆರಂಭಿಸಿದರೂ ನಿರೀಕ್ಷಿತ ಪ್ರದರ್ಶನ ಬರಲಿಲ್ಲ. ಇದರ ನಡುವೆ ಕೊಹ್ಲಿ ಫಾರ್ಮ್​ಗೆ ಮರಳಿರುವುದು ತಂಡದ ಆತ್ಮವಿಶ್ವಾಸದ ಜೊತೆ ಬ್ಯಾಟಿಂಗ್ ಶಕ್ತಿ ಹೆಚ್ಚಿಸಿದೆ. ಕಳೆದ ಪಂದ್ಯದಲ್ಲಿ ಆರ್​ಸಿಬಿ ಸೋತರೂ ಕೊಹ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದರು. ಇವರ ಜೊತೆಯಾದ ರಜತ್ ಪಟಿದಾರ್ ಕೂಡ ಬೊಂಬಾಟ್ ಆಟವಾಡಿದ್ದರು.

ಗ್ಲೆನ್ ಮ್ಯಾಕ್ಸ್​​ ವೆಲ್​​ ವೈಫಲ್ಯ ಮಿಡಲ್​​ ಆರ್ಡರ್​​ಗೆ ಸಮಸ್ಯೆ ತಂದಿದೆ. ಫಿನಿಶರ್ ಪಟ್ಟ ತೊಟ್ಟಿರುವ ದಿನೇಶ್ ಕಾರ್ತಿಕ್ ಕೂಡ ಮೊದಲ ಲಯದಲ್ಲಿ ಕಾಣಿಸುತ್ತಿಲ್ಲ. ಆದರೆ, ಇವರಿಬ್ಬರು ಯಾವುದೇ ಸಂದರ್ಭದಲ್ಲಿ ಅಬ್ಬರಿಸುವ ಸಾಮರ್ಥ್ಯ ಹೊಂದಿದ್ದಾರೆ. ಮಹಿಪಾಲ್​​ ಲೊಮ್ರೊರ್​ಗೆ ಅವಕಾಶ ಮಾಡಿಕೊಟ್ಟಿದ್ದು ಭರವಸೆ ಮೂಡಿಸಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲ ಇವರು ಆಡುವುದು ಖಚಿತ. ಶಹಬಾಜ್​ ಅಹ್ಮದ್ ತಮ್ಮ ಕೈಯಿಂದ ಎಷ್ಟು ಸಾಧ್ಯವೋ ಅಷ್ಟು ಪ್ರಯತ್ನ ಪಡುತ್ತಿದ್ದಾರೆ. ಆದರೆ, ಆರ್​​ಸಿಬಿ ತಂಡದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಬದಲಾವಣೆ ಬೇಕಾಗಿದೆ. ಹೀಗಾಗಿ ಶಹಬಾಜ್​ ಅವರನ್ನು ಕೈಬಿಟ್ಟು ಅವಕಾಶಕ್ಕಾಗಿ ಕಾಯುತ್ತಿರುವ ಅನುಭವಿ ಐಪಿಎಲ್ ಸ್ಪಿನ್ನರ್ ಕರ್ಣ್​ ಶರ್ಮಾ ಅವರನ್ನು ಕಣಕ್ಕಿಳಿಸುವ ಪ್ಲಾನ್​ ಮಾಡಿದರೆ ಅಚ್ಚರಿ ಪಡಬೇಕಿಲ್ಲ.

GT vs PBKS: ಆರ್​ಸಿಬಿಗೆ ಕಂಟಕವಾದ ಪಂಜಾಬ್ ಗೆಲುವು: ಫಾಫ್ ಪಡೆಗೆ ಮಯಾಂಕ್​ನಿಂದ ದೊಡ್ಡ ಪೆಟ್ಟು

ಯಾಕೆಂದರೆ ಹರ್ಷಲ್​​ ಪಟೇಲ್​​ ವಿಕೆಟ್​​ ಕಬಳಿಸುತ್ತಿಲ್ಲ. ಜೋಶ್​​ ಹ್ಯಾಜಲ್​​ವುಡ್​​ ಒತ್ತಡ ಹಾಕುತ್ತಿದ್ದರೂ ಮೊಹಮ್ಮದ್​​ ಸಿರಾಜ್​​ ರನ್​​ ಲೀಕ್​​ ಮಾಡುತ್ತಿದ್ದಾರೆ. ವನಿಂದು ಹಸರಂಗ ವಿಕೆಟ್​​ ಪಡೆದರೆ ಪಡೆದರು ಇಲ್ಲದಿದ್ದರೆ ದುಬಾರಿ ಅನ್ನುವ ಹಾಗಾಗಿದೆ. ಹೀಗಾಗಿ ತಂಡದ ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಬೇಕಾಗಿದೆ. ಇದಕ್ಕಾಗಿ ಕರ್ಣ್ ಶರ್ಮಾ ಅವರನ್ನು ಆಡಿಸಿ ಹೊಸ ಪ್ರಯೋಗ ನಡೆಸುವ ಸಾಧ್ಯತೆ ಹೆಚ್ಚಿದೆ. ಉಳಿದಂತೆ ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಇಂದುಕೂಡ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಬಹುದು.

ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್​​ ಲೊಮ್ರೊರ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಕರ್ಣ್​ ಶರ್ಮಾ, ಜೋಶ್​​ ಹ್ಯಾಜಲ್​​ವುಡ್, ಮೊಹಮ್ಮದ್ ಸಿರಾಜ್.

ಕ್ರೀಡಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:55 am, Wed, 4 May 22

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ