AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB ಮಾರಾಟಕ್ಕೆ… ಮುಂದಿನ ವರ್ಷ ಹೊಸ ಮಾಲೀಕ..!

RCB on sale; : ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ಡಿಯಾಜಿಯೋ ಕಂಪೆನಿಯ ಒಡೆತನದಲ್ಲಿದೆ. ಬ್ರಿಟನ್ ಮೂಲದ ಡಿಯಾಜಿಯೋ ತನ್ನ ಭಾರತೀಯ ಘಟಕವಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಎಂಬ ಆಲ್ಕೋಹಾಲ್ ಕಂಪನಿಯ ಮೂಲಕ ಆರ್​ಸಿಬಿ ಫ್ರಾಂಚೈಸಿಯನ್ನು ಹೊಂದಿದೆ. ಇದೀಗ ಡಿಯಾಜಿಯೋ ಕಂಪೆನಿಯು ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದ್ದಾರೆ.

RCB ಮಾರಾಟಕ್ಕೆ... ಮುಂದಿನ ವರ್ಷ ಹೊಸ ಮಾಲೀಕ..!
Rcb - Virat Kohli
ಝಾಹಿರ್ ಯೂಸುಫ್
|

Updated on: Nov 06, 2025 | 8:54 AM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ (IPL) ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿಯ ಮಾಲೀಕರು ಬದಲಾಗುವುದು ಖಚಿತವಾಗಿದೆ. ಅದು ಕೂಡ  ಮುಂದಿನ ಐಪಿಎಲ್ ಸೀಸನ್​ ಮುಂಚಿತವಾಗಿ..! ಹೌದು, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಡಿಯಾಜಿಯೋ ಕಂಪೆನಿ ಮುಂದಾಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಾರಾಟಕ್ಕಿಡಲಾಗುತ್ತಿರುವ ಬಗ್ಗೆ ಖುದ್ದು ಡಿಯಾಜಿಯೊ ಮಾಹಿತಿ ನೀಡಿದೆ. ಅಲ್ಲದೆ “ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ (RCSPL) ನಲ್ಲಿನ ಹೂಡಿಕೆಯ ಮೌಲ್ಯಮಾಪನಕ್ಕೆ ಮುಂದಾಗುತ್ತಿರುವುದಾಗಿ ಬಾಂಬೆ ಸ್ಟಾಕ್ ಎಕ್ಸ್ಚೇಂಜ್ (ಬಿಎಸ್ಇ) ಗೆ ನೀಡಿದ ಸಂವಹನದಲ್ಲಿ ತಿಳಿಸಿದೆ. ಇದು ಡಿಯಾಜಿಯೊದ ಭಾರತೀಯ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್‌ನ ಸಂಪೂರ್ಣ ಸ್ವಾಮ್ಯದ ಕಂಪನಿ ಎಂಬುದು ಇಲ್ಲಿ ಉಲ್ಲೇಖಾರ್ಹ.

“USL ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ RCSPL ನಲ್ಲಿನ ಹೂಡಿಕೆಯ ಕಾರ್ಯತಂತ್ರದ ಪರಿಶೀಲನೆಯನ್ನು ಪ್ರಾರಂಭಿಸುತ್ತಿದೆ” ಎಂದು ಕಂಪನಿಯು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. RCSPL ನ ವ್ಯವಹಾರವು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಾರ್ಷಿಕವಾಗಿ ಆಯೋಜಿಸುವ ಪುರುಷರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಮತ್ತು ಮಹಿಳಾ ಪ್ರೀಮಿಯರ್ ಲೀಗ್ (WPL) ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಭಾಗವಹಿಸುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸ್ ತಂಡಗಳ ಮಾಲೀಕತ್ವವನ್ನು ಒಳಗೊಂಡಿದೆ.

ಷೇರು ವಿನಿಮಯ ಕೇಂದ್ರಕ್ಕೆ ಬರೆದಿರುವ ಕವರಿಂಗ್ ಲೆಟರ್‌ನಲ್ಲಿ, ಡಿಯಾಜಿಯೊ ಮತ್ತು ಯುಎಸ್‌ಎಲ್, ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾದ ನಿಯಮ 30 ರ ಅಡಿಯಲ್ಲಿ ಫ್ರಾಂಚೈಸಿಯ ಮಾರಾಟವನ್ನು ಬಹಿರಂಗಪಡಿಸುತ್ತಿದ್ದೇವೆ ಎಂದು ತಿಳಿಸಲಾಗಿದೆ. ಅಲ್ಲದೆ ಈ ಪ್ರಕ್ರಿಯೆಯು ಮಾರ್ಚ್ 31, 2026 ರೊಳಗೆ ಪೂರ್ಣಗೊಳಿಸುವುದಾಗಿ ಹೇಳಿಕೊಂಡಿದೆ. ಅಂದರೆ ಮುಂದಿನ ಸೀಸನ್​ ಐಪಿಎಲ್ ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬದಲಾಗುವುದು ಖಚಿತ.

ಇದಕ್ಕೂ ಮುನ್ನ ಐಪಿಎಲ್​ನ ಮಾಜಿ ಅಧ್ಯಕ್ಷ ಲಲಿತ್ ಮೋದಿ, ಡಿಯಾಜಿಯೊ ಕಂಪೆನಿಯು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಮಾರಾಟ ಮಾಡಲು ಮುಂದಾಗಿದೆ ಎಂಬ ವಿಚಾರವನ್ನು ಬಹಿರಂಗಪಡಿಸಿದ್ದರು.

ಇದನ್ನೂ ಓದಿ: WPL 2026: RCB ನಾಲ್ವರನ್ನು ಮಾತ್ರ ಉಳಿಸಿಕೊಳ್ಳಲು ಇದುವೇ ಅಸಲಿ ಕಾರಣ..!

ಅಲ್ಲದೆ ಐಪಿಎಲ್ 2026 ಕ್ಕೂ ಮುನ್ನ ಒಟ್ಟಾರೆಯಾಗಿ ಲಭ್ಯವಿರುವ ಏಕೈಕ ತಂಡವಾಗಿ ಆರ್​ಸಿಬಿ ಮಾರಾಟವಾಗಬಹುದು. ಬಿಗ್ ಗ್ಲೋಬಲ್ ಫಂಡ್‌ಗಳಲ್ಲಿ ಒಂದು ಅಥವಾ ಬೃಹತ್ ಹೂಡಿಕೆದಾರರು ಆರ್​ಸಿಬಿ ತಂಡವನ್ನು ಖರೀದಿಸುವ ಸಾಧ್ಯತೆಯಿದೆ ಎಂದು ಲಲಿತ್ ಮೋದಿ ತಿಳಿಸಿದ್ದರು. ಅದರಂತೆ ಇದೀಗ ಡಿಯಾಜಿಯೋ ಕಂಪೆನಿ ಆರ್​ಸಿಬಿ ಫ್ರಾಂಚೈಸಿಯ ಮಾರಾಟಕ್ಕೆ ಮುಂದಾಗಿದ್ದು, ಬೆಂಗಳೂರು ಫ್ರಾಂಚೈಸಿಯನ್ನು ಯಾರು ಖರೀದಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.

ಆರ್​ಸಿಬಿ ಫ್ರಾಂಚೈಸಿಯ ಮೌಲ್ಯ ಎಷ್ಟು?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪುರುಷರ ತಂಡದ ಮೌಲ್ಯ ಸುಮಾರು 17 ಸಾವಿರ ಕೋಟಿ ರೂ. ಹಾಗೆಯೇ ಮಹಿಳಾ ತಂಡದ ಮೌಲ್ಯ 3 ರಿಂದ 5 ಸಾವಿರ ಕೋಟಿ ಇರಬಹುದು. ಹೀಗಾಗಿ ಆರ್​ಸಿಬಿ ಫ್ರಾಂಚೈಸಿಯನ್ನು ಅಂದಾಜು 25 ಸಾವಿರ ಕೋಟಿ ರೂ.ಗೆ  ಡಿಯಾಜಿಯೋ ಕಂಪೆನಿ ಮಾರಾಟ ಮಾಡುವ ಸಾಧ್ಯತೆಯಿದೆ.

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ಪ್ರಜ್ವಲ್​ಗೆ 1 ಕೋಟಿ 25 ಲಕ್ಷ ರೂ. ಸಂಭಾವನೆ; ಬಾಕಿ ಹಣಕ್ಕಾಗಿ ವಿವಾದ?
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ