AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫೈನಲ್ ಸೋತ ದಿನವೇ ಫೈನಲ್​ಗೇರಿದ RCB

IPL 2025 RCB vs PBKS: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಆರ್​ಸಿಬಿ ತಂಡವು ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 101 ರನ್ ಕಲೆಹಾಕಿದರೆ, ಈ ಗುರಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 10 ಓವರ್​ಗಳಲ್ಲಿ ಚೇಸ್ ಮಾಡಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ಫೈನಲ್ ಸೋತ ದಿನವೇ ಫೈನಲ್​ಗೇರಿದ RCB
Rcb
ಝಾಹಿರ್ ಯೂಸುಫ್
|

Updated on:May 30, 2025 | 8:08 AM

Share

ಫೈನಲ್ ಸೋತ ದಿನವೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದೆ. ಅದು ಕೂಡ 9 ವರ್ಷಗಳ ಬಳಿಕ. 2016 ರ ಮೇ 29 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಸನ್​ರೈಸರ್ಸ್ ಹೈದರಾಬಾದ್ (SRH) ತಂಡಗಳು ಮುಖಾಮುಖಿಯಾಗಿತ್ತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಹೆಚ್​ ತಂಡದ ನಾಯಕ ಡೇವಿಡ್ ವಾರ್ನರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಸನ್​ರೈಸರ್ಸ್​ ಹೈದರಾಬಾದ್ ತಂಡವು 16.2 ಓವರ್​ಗಳಲ್ಲಿ 150 ರನ್​ ಕಲೆಹಾಕಿತು. ಈ ಹಂತದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಆರ್​ಸಿಬಿ ರನ್​ ಗತಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ಪರಿಣಾಮ 19 ಓವರ್​ಗಳ ಮುಕ್ತಾಯದ ವೇಳೆ ಎಸ್​ಆರ್​ಹೆಚ್​ ತಂಡದ ಸ್ಕೋರ್ 184 ರನ್​ಗಳು.

ಆದರೆ ಕೊನೆಯ ಓವರ್​ನಲ್ಲಿ ಬೆನ್ ಕಟ್ಟಿಂಗ್ ಇಡೀ ಪಂದ್ಯದ ಚಿತ್ರಣ ಬದಲಿಸಿಬಿಟ್ಟರು. ಶೇನ್ ವಾಟ್ಸನ್ ಎಸೆದ ಅಂತಿಮ ಓವರ್​ನಲ್ಲಿ 4, 6, 6, 1, 1, 6 ಸಿಡಿಸುವ ಮೂಲಕ ಕಟ್ಟಿಂಗ್ ಬರೋಬ್ಬರಿ 24 ರನ್ ಕಲೆಹಾಕಿದರು. ಈ ಮೂಲಕ ಸನ್​ರೈಸರ್ಸ್​ ಹೈದರಾಬಾದ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿತು.

209 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಆರ್​ಸಿಬಿ ತಂಡವು 10.3 ಓವರ್​ಗಳಲ್ಲಿ 114 ರನ್ ಕಲೆಹಾಕಿತು. ಈ ಹಂತದಲ್ಲಿ ಕ್ರಿಸ್ ಗೇಲ್ (76) ಔಟಾದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (54) ಕೂಡ ವಿಕೆಟ್ ಒಪ್ಪಿಸಿದರು. ಆ ಬಳಿಕ ಬಂದ ಎಬಿ ಡಿವಿಲಿಯರ್ಸ್ (5) ಹಾಗೂ ಕೆಎಲ್ ರಾಹುಲ್ (11) ಬಂದ ವೇಗದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು.

ಇದಾಗ್ಯೂ 15.3 ಓವರ್​ಗಳಲ್ಲಿ ಆರ್​ಸಿಬಿ 160 ರನ್​ ಗಳಿಸಿತ್ತು. ಹೀಗಾಗಿ ಆರ್​ಸಿಬಿಗೆ ಗೆಲ್ಲಲು ಉತ್ತಮ ಅವಕಾಶವಿತ್ತು. ಆದರೆ ಬೌಲಿಂಗ್​ನಲ್ಲಿ ದುಬಾರಿಯಾಗಿದ್ದ ಶೇನ್ ವಾಟ್ಸನ್ ಬ್ಯಾಟಿಂಗ್​ನಲ್ಲೂ ವಿಫಲರಾದರು. ಕೇವಲ 11 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಹೊರ ನಡೆದರು. ಅಂತಿಮವಾಗಿ ಆರ್​ಸಿಬಿ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 200 ರನ್​ಗಳಿಸಿ 8 ರನ್​ಗಳಿಂದ ಸೋಲೊಪ್ಪಿಕೊಂಡಿತು.

ಈ ಮೂಲಕ ಚೊಚ್ಚಲ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸುವ ಅವಕಾಶವನ್ನು ಆರ್​ಸಿಬಿ ಕೇವಲ 8 ರನ್​ಗಳಿಂದ ಕೈಚೆಲ್ಲಿಕೊಂಡಿತು. ಇದಾದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಒಮ್ಮೆಯೂ ಫೈನಲ್​ಗೆ ಪ್ರವೇಶಿಸಿರಲಿಲ್ಲ. ಇದೀಗ ಮೇ 29 ರಂದೇ ಆರ್​ಸಿಬಿ ಪಡೆ ಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಇದನ್ನೂ ಓದಿ: ಈ ಸಲ ಕಪ್ ನಮ್ದೆ… ಇದಕ್ಕೆ ಸಾಕ್ಷಿ ಈ ಅಂಕಿ ಅಂಶಗಳು..!

ಅಂದರೆ 2016 ರಲ್ಲಿ ಮೇ 29 ರಂದು ಫೈನಲ್ ಪಂದ್ಯ ಸೋತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು 2025 ರ ಮೇ 29 ರಂದು ಫೈನಲ್​ಗೆ ಪ್ರವೇಶಿಸಿದೆ. ಈ ಮೂಲಕ ಚೊಚ್ಚಲ ಟ್ರೋಫಿ ಗೆಲ್ಲಲು ಮುನ್ನುಗ್ಗಿದೆ. ಅದರಂತೆ ಜೂ 3 ರಂದು ನಡೆಯಲಿರುವ ಅಂತಿಮ ಪಂದ್ಯದಲ್ಲಿ ಗೆಲ್ಲುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಚಾಂಪಿಯನ್ ಪಟ್ಟ ಅಲಂಕರಿಸಲಿದೆಯಾ ಕಾದು ನೋಡಬೇಕಿದೆ.

Published On - 8:04 am, Fri, 30 May 25

ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಡ್ರ್ಯಾಗನ್ ಬೋಟಿಂಗ್​​: ಮೈಸೂರಿಗೆ ಬರುವವರು ಇದನ್ನು ಮಿಸ್ ಮಾಡ್ಬೇಡಿ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ