RCB: ಪಂದ್ಯ ಆರಂಭಕ್ಕೂ ಮುನ್ನವೇ ಸಖತ್ ಟ್ರೆಂಡ್ ಆದ ಆರ್​ಸಿಬಿ: ಕಪ್ ನಮ್ದೆ ಎನ್ನುತ್ತಿರುವ ಫ್ಯಾನ್ಸ್

RR vs RCB Qualifier 2, IPL 2022: ಐಪಿಎಲ್ 2022 ರಲ್ಲಿಂದು ಸಂಜೆ 7:30ಕ್ಕೆ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಇದಕ್ಕೂ ಮುನ್ನವೇ ಆರ್​ಸಿಬಿ ಸಖತ್ ಟ್ರೆಂಡಿಂಗ್​ನಲ್ಲಿ ಕಾಣಿಸಿಕೊಂಡಿದೆ.

RCB: ಪಂದ್ಯ ಆರಂಭಕ್ಕೂ ಮುನ್ನವೇ ಸಖತ್ ಟ್ರೆಂಡ್ ಆದ ಆರ್​ಸಿಬಿ: ಕಪ್ ನಮ್ದೆ ಎನ್ನುತ್ತಿರುವ ಫ್ಯಾನ್ಸ್
RR vs RCB Qualifier 2, IPL 2022Image Credit source: RCB Twitter
Follow us
TV9 Web
| Updated By: Vinay Bhat

Updated on:May 27, 2022 | 3:17 PM

ಅಹಮ್ಮದಾಬಾದ್​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 15ನೇ ಆವೃತ್ತಿಯ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ (RCB vs RR) ತಂಡಗಳು ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಈ ರೋಚಕ ಕದನ ಶುರುವಾಗಲಿದೆ. ಆದರೆ, ಇದಕ್ಕೂ ಮುನ್ನವೇ ಆರ್​ಸಿಬಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡಿಂಗ್​ನಲ್ಲಿ ಕಾಣಿಸಿಕೊಂಡಿದೆ. ಟ್ವಿಟರ್​​ನಲ್ಲಿ (Twitter) ಆರ್​ಸಿಬಿ ಅಭಿಮಾನಿಗಳು ಟ್ರೆಂಡ್ ಸೃಷ್ಟಿಸಿದ್ದು ಇಂದಿನ ಪಂದ್ಯದಲ್ಲಿ ಬೆಂಗಳೂರಿಗೆ ಜಯ, ಐಪಿಎಲ್ 2022 (IPL 2022) ಫೈನಲ್​ನಲ್ಲಿ ಗುಜರಾತ್​ ಹಾಗೂ ಆರ್​​​ಸಿಬಿ ಮುಖಾಮುಖಿ ಆಗಲಿದೆ ಎಂದು ಹೇಳುತ್ತಿದ್ದಾರೆ. ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ತಮ್ಮ ಪ್ರಿಡಿಕ್ಷನ್ ಪ್ರಕಟಿಸಿದ್ದು, ಇದರಲ್ಲಿ ಆರ್​ಸಿಬಿಗೆ ಜಯ ಸಿಗಲಿದೆ ಎಂದು ಬರೆದುಕೊಂಡಿದ್ದಾರೆ.

ಈ ರೋಚಕ ಕದನಕ್ಕೆ ಯಾವುದೇ ಮಳೆಯ ಅಡ್ಡಿ ಕೂಡ ಇಲ್ಲ. ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್‌ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ.

ಇದನ್ನೂ ಓದಿ
Image
Harshal Patel: ಪಟಿದಾರ್ ಅಲ್ಲ: ಆರ್​ಸಿಬಿಯ ಈ ಆಟಗಾರನಿಗೆ 15 ಕೋಟಿ ಕೊಡಬೇಕು ಎಂದ ಸೆಹ್ವಾಗ್
Image
Women’s T20 Challenge: ಮಹಿಳೆಯರ ಟಿ20 ಚಾಲೆಂಜ್: ಪಂದ್ಯ ಸೋತರೂ ಫೈನಲ್​ಗೆ ಲಗ್ಗೆಯಿಟ್ಟ ವೆಲಾಸಿಟಿ
Image
Jos Buttler: ಶಾಕಿಂಗ್: ಜೋಸ್ ಬಟ್ಲರ್ ನನ್ನ ಎರಡನೇ ಗಂಡ ಎಂದ ಸ್ಟಾರ್ ಆಟಗಾರನ ಪತ್ನಿ
Image
RR vs RCB: ಕ್ವಾಲಿಫೈಯರ್-2 ಮುನ್ನ ಆರ್​ಸಿಬಿ ತಂಡದಲ್ಲಾಗುತ್ತಾ ಮೂರು ಮೇಜರ್ ಸರ್ಜರಿ

RR vs RCB Qualifier 2: ಕ್ವಾಲಿಫೈಯರ್-2ಗೆ ಆರ್​ಸಿಬಿ ಆಟಗಾರರ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ

ಇತ್ತ ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್‌ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಹಿಂದಿನ ಪಂದ್ಯಗಳನ್ನು ಗಮನಿಸಿದರೆ ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚು ವಿಕೆಟ್ ಕಬಳಿಸಲಿದ್ದು, ಬ್ಯಾಟ್ಸ್‌ಮನ್‌ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು. ಈ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯಗಳು ಕಡಿಮೆ ರನ್ ಮೊತ್ತದ ಪಂದ್ಯಗಳಾಗಿದ್ದು, ದೊಡ್ಡ ಬೌಂಡರಿಗಳಾಗಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಅಬ್ಬರಿಸುವುದೂ ಕಷ್ಟ.

ಆರ್​​ಸಿಬಿ ಇಂದಿನ ಪಂದ್ಯವನ್ನು ಜಯಿಸಿದರೆ ಫೈನಲ್ ಪ್ರವೇಶಿಸಲಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ. 2009, 2011 ಮತ್ತು 2016ರಲ್ಲಿ ಬೆಂಗಳೂರು ರನ್ನರ್-ಅಪ್ ಆಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ 2008ರ ಉದ್ಘಾಟನೆ ಆವೃತ್ತಿಯ ಚಾಂಪಿಯನ್ ತಂಡ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದಂತಾಗುತ್ತದೆ.

ಸಂಭಾವ್ಯ ಪ್ಲೇಯಿಂಗ್ XI:

ಆರ್​​ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಮಹಿಪಾಲ್ ಲೊಮೊರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್​ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:16 pm, Fri, 27 May 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್