ಅಹಮ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಐಪಿಎಲ್ 15ನೇ ಆವೃತ್ತಿಯ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ (RCB vs RR) ತಂಡಗಳು ಮುಖಾಮುಖಿಯಾಗಲಿವೆ. ಸಂಜೆ 7:30ಕ್ಕೆ ಈ ರೋಚಕ ಕದನ ಶುರುವಾಗಲಿದೆ. ಆದರೆ, ಇದಕ್ಕೂ ಮುನ್ನವೇ ಆರ್ಸಿಬಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಟ್ರೆಂಡಿಂಗ್ನಲ್ಲಿ ಕಾಣಿಸಿಕೊಂಡಿದೆ. ಟ್ವಿಟರ್ನಲ್ಲಿ (Twitter) ಆರ್ಸಿಬಿ ಅಭಿಮಾನಿಗಳು ಟ್ರೆಂಡ್ ಸೃಷ್ಟಿಸಿದ್ದು ಇಂದಿನ ಪಂದ್ಯದಲ್ಲಿ ಬೆಂಗಳೂರಿಗೆ ಜಯ, ಐಪಿಎಲ್ 2022 (IPL 2022) ಫೈನಲ್ನಲ್ಲಿ ಗುಜರಾತ್ ಹಾಗೂ ಆರ್ಸಿಬಿ ಮುಖಾಮುಖಿ ಆಗಲಿದೆ ಎಂದು ಹೇಳುತ್ತಿದ್ದಾರೆ. ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಕೂಡ ತಮ್ಮ ಪ್ರಿಡಿಕ್ಷನ್ ಪ್ರಕಟಿಸಿದ್ದು, ಇದರಲ್ಲಿ ಆರ್ಸಿಬಿಗೆ ಜಯ ಸಿಗಲಿದೆ ಎಂದು ಬರೆದುಕೊಂಡಿದ್ದಾರೆ.
ಈ ರೋಚಕ ಕದನಕ್ಕೆ ಯಾವುದೇ ಮಳೆಯ ಅಡ್ಡಿ ಕೂಡ ಇಲ್ಲ. ತಾಪಮಾನವು 48% ತೇವಾಂಶ ಮತ್ತು ಗಂಟೆಗೆ 18-22 ಕಿ.ಮೀ ಗಾಳಿಯ ವೇಗದೊಂದಿಗೆ 36° ಸೆಲ್ಸಿಯಸ್‌ನಷ್ಟು ಇರಲಿದೆ ಎಂದು ನಿರೀಕ್ಷಿಸಲಾಗಿದೆ ಹಾಗೂ ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ. ಹೀಗಾಗಿ ಹೈವೋಲ್ಟೇಜ್ ಪಂದ್ಯ ಆಗುವುದು ಖಚಿತ.
Its time for this #RRvsRCB meme…? pic.twitter.com/auxUNG3JfO
— Bengaluru Betala (@gururaj_mj) May 26, 2022
Sanju Samson winning it for #RCB today❤️#IPL #RRvsRCB pic.twitter.com/kVqt4kubCC
— ????? (@druva_874) May 27, 2022
Thank You Akash ?
Congratulations ROYALS#RCBvsRR #RRvsRCB pic.twitter.com/n1JPZgyCxq
— A S H (@itayouramit1) May 27, 2022
Today qualifer 2match ?? Hype is Sky Level #Rcb #RRvsRCB #RRvRCB God ? Plse ?? Rcb Win this match
— Prem Kumar (@ImPremVJ) May 27, 2022
RR vs RCB Qualifier 2: ಕ್ವಾಲಿಫೈಯರ್-2ಗೆ ಆರ್ಸಿಬಿ ಆಟಗಾರರ ಭರ್ಜರಿ ಪ್ರ್ಯಾಕ್ಟೀಸ್: ಫೋಟೋ ನೋಡಿ
ಇತ್ತ ಅಹ್ಮದಾಬಾದ್ ಕ್ರಿಕೆಟ್ ಕ್ರೀಡಾಂಗಣದ ಕೆಂಪು ಮಣ್ಣಿನ ಪಿಚ್‌ಗಳು ಬೇಗ ಒಣಗುವ ಲಕ್ಷಣಗಳನ್ನು ಹೊಂದಿದ್ದು, ಸ್ಪಿನ್ ಬೌಲರ್‌ಗಳಿಗೆ ಹೆಚ್ಚು ಸಹಾಯಕವಾಗಿರಲಿವೆ. ಹಿಂದಿನ ಪಂದ್ಯಗಳನ್ನು ಗಮನಿಸಿದರೆ ಈ ಪಿಚ್‌ನಲ್ಲಿ ಸ್ಪಿನ್ನರ್‌ಗಳು ಹೆಚ್ಚು ವಿಕೆಟ್ ಕಬಳಿಸಲಿದ್ದು, ಬ್ಯಾಟ್ಸ್‌ಮನ್‌ಗಳು ಹೆಚ್ಚು ರನ್ ಬಾರಿಸಲು ತಿಣುಕಾಡಬಹುದು. ಈ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯಗಳು ಕಡಿಮೆ ರನ್ ಮೊತ್ತದ ಪಂದ್ಯಗಳಾಗಿದ್ದು, ದೊಡ್ಡ ಬೌಂಡರಿಗಳಾಗಿರುವುದರಿಂದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಅಬ್ಬರಿಸುವುದೂ ಕಷ್ಟ.
ಆರ್ಸಿಬಿ ಇಂದಿನ ಪಂದ್ಯವನ್ನು ಜಯಿಸಿದರೆ ಫೈನಲ್ ಪ್ರವೇಶಿಸಲಿದೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಫೈನಲ್ ಪ್ರವೇಶಿಸಿದ ಹೆಗ್ಗಳಿಕೆಗೆ ಪಾತ್ರವಾಗಲಿದೆ. 2009, 2011 ಮತ್ತು 2016ರಲ್ಲಿ ಬೆಂಗಳೂರು ರನ್ನರ್-ಅಪ್ ಆಗಿದೆ. ರಾಜಸ್ಥಾನ್ ರಾಯಲ್ಸ್ ತಂಡ ಗೆಲುವು ಸಾಧಿಸಿದರೆ 2008ರ ಉದ್ಘಾಟನೆ ಆವೃತ್ತಿಯ ಚಾಂಪಿಯನ್ ತಂಡ ಎರಡನೇ ಬಾರಿಗೆ ಫೈನಲ್ ಪ್ರವೇಶಿಸಿದಂತಾಗುತ್ತದೆ.
ಸಂಭಾವ್ಯ ಪ್ಲೇಯಿಂಗ್ XI:
ಆರ್ಸಿಬಿ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಮಹಿಪಾಲ್ ಲೊಮೊರೊರ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.
ರಾಜಸ್ಥಾನ್ ರಾಯಲ್ಸ್: ಸಂಜು ಸ್ಯಾಮ್ಸನ್ (ನಾಯಕ), ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮೆಯರ್, ಆರ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.
ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:16 pm, Fri, 27 May 22