RCB vs GT, IPL 2025: ಸತತ ಎರಡು ಪಂದ್ಯ ಗೆದ್ದ ಆರ್‌ಸಿಬಿಯ ಮುಂದಿನ ಟಾರ್ಗೆಟ್ ಯಾರು?, ಮ್ಯಾಚ್ ಯಾವಾಗ?
Bengaluru vs Gujarat, IPL 2025: ಸತತ ಎರಡು ಪಂದ್ಯಗಳನ್ನು ಗೆದ್ದು ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇದೀಗ ಹ್ಯಾಟ್ರಿಕ್ ಗೆಲುವಿಗಾಗಿ ಮುಂದಿನ ಪಂದ್ಯಕ್ಕೆ ಸಜ್ಜಾಗುತ್ತಿದೆ. ಬೆಂಗಳೂರಿನ ಮುಂದಿನ ಪಂದ್ಯದ ದಿನಾಂಕ ಮತ್ತು ಸ್ಥಳದ ಜೊತೆಗೆ ಯಾವ ತಂಡವನ್ನು ಎದುರಿಸಲಿದೆ ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

(ಬೆಂಗಳೂರು, ಏ 01): ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಸೀಸನ್ 18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡವು ಅತ್ಯುತ್ತಮ ಪ್ರದರ್ಶನ ನೀಡುತ್ತಿದೆ. ಶುಕ್ರವಾರ (ಮಾರ್ಚ್ 28) ತನ್ನ ಬದ್ದವೈರಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ತವರಿನಲ್ಲೇ ಅತಿ ದೊಡ್ಡ ಅಂತರದ ಸೋಲಿ ರುಚಿ ತೋರಿಸಿತು. ಇದಕ್ಕೂ ಮುನ್ನ ಮಾರ್ಚ್ 22 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆರ್‌ಸಿಬಿ ಜಯ ಸಾಧಿಸುವ ಮೂಲಕ ಋತುವಿನ ಆರಂಭಿತ್ತು. ಈ ಮೂಲಕ ರಜತ್ ಪಾಟಿದಾರ್ ಸತತ ಗೆಲುವುಗಳೊಂದಿಗೆ ಆರ್‌ಸಿಬಿಯಲ್ಲಿ ತಮ್ಮ ನಾಯಕತ್ವದ ಅವಧಿಯನ್ನು ಪ್ರಾರಂಭಿಸಿದ್ದಾರೆ.
ಕೃನಾಲ್ ಪಾಂಡ್ಯ ಅವರ ಬೌಲಿಂಗ್ ಪ್ರದರ್ಶನ ಮತ್ತು ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಬ್ಯಾಟಿಂಗ್ ನೆರವಿನಿಂದ ಆರ್‌ಸಿಬಿ ತಂಡವು ಕೆಕೆಆರ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ ತನ್ನ ಮೊದಲ ಐಪಿಎಲ್ ಟ್ರೋಫಿಯ ಹುಡುಕಾಟ ಆರಂಭಿಸಿತು. 175 ರನ್‌ಗಳ ಗುರಿಯನ್ನು 22 ಎಸೆತಗಳು ಬಾಕಿ ಇರುವಾಗಲೇ ಪೂರ್ಣಗೊಳಿಸಿತು.
ಬಳಿಕ ತನ್ನ ಎರಡನೇ ಪಂದ್ಯದಲ್ಲಿ ಆರ್‌ಸಿಬಿ ನಾಯಕ ಪಾಟಿದಾರ್ ಅವರ ಅರ್ಧಶತಕದ ನೆರವಿನಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 197 ರನ್‌ಗಳ ಸವಾಲಿನ ಗುರಿಯನ್ನು ನೀಡಿತು, ಆದರೆ ಜೋಶ್ ಹ್ಯಾಜಲ್‌ವುಡ್ (29ಕ್ಕೆ 3) ನೇತೃತ್ವದ ಸಾಮೂಹಿಕ ಬೌಲಿಂಗ್ ಪ್ರಯತ್ನದಿಂದ ಸಿಎಸ್‌ಕೆಯನ್ನು 146 ರನ್‌ಗಳಿಗೆ ಸೀಮಿತಗೊಳಿಸಿತು.
Travel Diaries: Chennai 🛬 Bengaluru
Assistant Physio takes over the hosting duties for us, as the team heads back to Bengaluru with 4 points in the bag! 😎
Watch it all on @bigbasket_com presents RCB Bold Diaries.#PlayBold #ನಮ್ಮRCB #IPL2025 pic.twitter.com/x31NQ8qHip
— Royal Challengers Bengaluru (@RCBTweets) March 30, 2025
ಸದ್ಯ ಆರ್‌ಸಿಬಿ ತಂಡವು 2025 ರ ಐಪಿಎಲ್‌ನಲ್ಲಿ ತಮ್ಮ ಮುಂದಿನ ಪಂದ್ಯವನ್ನೂ ಗೆದ್ದು ಹ್ಯಾಟ್ರಿಕ್ ಜಯದ ಸಾಧನೆ ಮಾಡುವ ಗುರಿಯನ್ನು ಹೊಂದಿದೆ. ಬೆಂಗಳೂರಿನ ಮುಂದಿನ ಪಂದ್ಯದ ದಿನಾಂಕ ಮತ್ತು ಸ್ಥಳದ ಜೊತೆಗೆ ಯಾವ ತಂಡವನ್ನು ಎದುರಿಸಲಿದೆ ಎಂಬ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
MI vs KKR, IPL 2025: ಪೋಸ್ಟ್ ಮ್ಯಾಚ್ನಲ್ಲಿ ತನ್ನದೇ ತಂಡದ ಆಟಗಾರರಿಗೆ ಗದರಿದ ಅಜಿಂಕ್ಯಾ ರಹಾನೆ: ಏನಂದ್ರು ನೋಡಿ
ಐಪಿಎಲ್ 2025 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಯಾವಾಗ, ಎಲ್ಲಿ ಮತ್ತು ಯಾರೊಂದಿಗೆ ಆಡಲಿದೆ?
ಸಿಎಸ್‌ಕೆ ವಿರುದ್ಧ ಜಯಗಳಿಸಿದ ನಂತರ ಆರ್‌ಸಿಬಿ ತನ್ನ ಮುಂದಿನ ಪಂದ್ಯಕ್ಕಾಗಿ ತವರು ಬೆಂಗಳೂರಿಗೆ ಬಂದಿದೆ. ಆರ್‌ಸಿಬಿಯ ಮುಂದಿನ ಪಂದ್ಯ ಬುಧವಾರ (ಏಪ್ರಿಲ್ 2) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ನಡೆಯಲಿದೆ.
ಐಪಿಎಲ್ 2025 ರಲ್ಲಿ RCB ಯ ಮುಂದಿನ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ಪಂದ್ಯ ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಶುರುವಾಗಲಿದೆ. 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಆರ್‌ಸಿಬಿ ಸಂಭಾವ್ಯ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಳ್.
ಗುಜರಾತ್ ಟೈಟಾನ್ಸ್ ಸಂಭಾವ್ತ ಪ್ಲೇಯಿಂಗ್ 11: ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶೆರ್ಫೇನ್ ರುದರ್ಫೋರ್ಡ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:48 am, Tue, 1 April 25