AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್

IPL 2026, RCB vs SRH: 19ನೇ ಆವೃತ್ತಿಯ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಸನ್​ರೈಸರ್ಸ್​ ಹೈದರಾಬಾದ್ (SRH) ತಂಡವನ್ನು ಮಣಿಸಿ ಗೆಲುವಿನ ಶುಭಾರಂಭ ಮಾಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, 202 ರನ್‌ಗಳ ಗುರಿಯನ್ನು ಕೇವಲ 15.4 ಓವರ್‌ಗಳಲ್ಲಿ ಬೆನ್ನಟ್ಟಿದ ಆರ್​ಸಿಬಿ, ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ಸುಲಭ ಜಯ ಸಾಧಿಸಿತು. ಹಾಲಿ ಚಾಂಪಿಯನ್ಸ್ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

RCB vs SRH: ತವರಿನಲ್ಲಿ ಶುಭಾರಂಭ; ಆರ್​ಸಿಬಿ ಅಬ್ಬರಕ್ಕೆ ಸುಸ್ತಾದ ಸನ್​ರೈಸರ್ಸ್
Rcb Vs Srh
ಪೃಥ್ವಿಶಂಕರ
|

Updated on:Mar 28, 2026 | 11:21 PM

Share

ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 19ನೇ ಆವೃತ್ತಿಯ ಐಪಿಎಲ್ (IPL 2026) ಉದ್ಘಾಟನಾ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ ತಂಡವನ್ನು ಸಲುಭವಾಗಿ ಮಣಿಸಿದ ಹಾಲಿ ಚಾಂಪಿಯನ್‌ ಆರ್​ಸಿಬಿ (RCB vs SRH) ಗೆಲುವಿನ ಶುಭಾರಂಭ ಮಾಡಿದೆ. ತವರಿನಲ್ಲಿ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿದ್ದ ಎಸ್​ಆರ್​ಹೆಚ್ ತಂಡವನ್ನು ಮಕಾಡೆ ಮಲಗಿಸಿದ ಆರ್​ಸಿಬಿ ಕೇವಲ 15.4 ಓವರ್​ಗಳಲ್ಲಿ 202 ರನ್ ಬೆನ್ನಟ್ಟಿ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಸನ್​ರೈಸರ್ಸ್​ ಹೈದರಾಬಾದ್ 201 ರನ್ ಕಲೆಹಾಕಿತು. ಗೆಲುವಿಗೆ 202 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ, ದೇವದತ್ ಪಡಿಕ್ಕಲ್ (Devdutt Padikkal) ಹಾಗೂ ವಿರಾಟ್ ಕೊಹ್ಲಿ (Virat Kohli) ಅವರ ಅಬ್ಬರದ ಅರ್ಧಶತಕದ ನೆರವಿನಿಂದ ಸುಲಭ ಜಯ ದಾಖಲಿಸಿತು. ಈ ಮೂಲಕ ಆರ್​ಸಿಬಿ ಮೊದಲ ಪಂದ್ಯದಲ್ಲೇ ಐಪಿಎಲ್ ಇತಿಹಾಸದಲ್ಲಿ ಅತ್ಯಂತ ವೇಗವಾಗಿ 200 ಕ್ಕೂ ಹೆಚ್ಚು ರನ್ ಚೇಸ್ ಮಾಡಿದ ದಾಖಲೆ ಬರೆಯಿತು.

80 ರನ್ ಬಾರಿಸಿದ ಕಿಶನ್

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 201 ರನ್ ಗಳಿಸಿತು. ತಂಡದ ಪರ ನಾಯಕ ಇಶಾನ್ ಕಿಶನ್ 38 ಎಸೆತಗಳಲ್ಲಿ 8 ಬೌಂಡರಿ ಮತ್ತು 5 ಸಿಕ್ಸರ್‌ಗಳ ನೆರವಿನಿಂದ 80 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಅಬ್ಬರಿಸಿದ ಅನಿಕೇತ್ ವರ್ಮಾ ಕೂಡ 18 ಎಸೆತಗಳಲ್ಲಿ 43 ರನ್​ಗಳ ಕಾಣಿಕೆ ನೀಡಿದರೆ, ಹೆನ್ರಿಕ್ ಕ್ಲಾಸೆನ್ 31 ರನ್ ಬಾರಿಸಿದರು. ಇತ್ತ ಆರ್​ಸಿಬಿ ಪರ ಬೌಲಿಂಗ್‌ನಲ್ಲಿ ಮಿಂಚಿದ ಜಾಕೋಬ್ ಡಫಿ ತಮ್ಮ 4 ಓವರ್‌ಗಳ ಖೋಟಾದಲ್ಲಿ ಕೇವಲ 22 ರನ್‌ ನೀಡಿ 3 ವಿಕೆಟ್ ಪಡೆದರು. ರೊಮೆರೊ ಶೆಫರ್ಡ್ ಕೂಡ 3 ವಿಕೆಟ್ ಪಡೆದರೆ, ಅಭಿನಂದನ್, ಭುವನೇಶ್ವರ್ ಹಾಗೂ ಸುಯೇಶ್ ಶರ್ಮಾ ತಲಾ 1 ವಿಕೆಟ್ ಪಡೆದರು.

ಪಡಿಕ್ಕಲ್ ಅಬ್ಬರದ ಬ್ಯಾಟಿಂಗ್

ಈ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡ ಕಳಪೆ ಆರಂಭ ಪಡೆಯಿತು. ಪ್ರಸ್ತುತ ಕಳಪೆ ಫಾರ್ಮ್​ನಿಂದ ಬಳಲುತ್ತಿರುವ ಫಿಲ್ ಸಾಲ್ಟ್ 9 ರನ್ ಬಾರಿಸಿ ಔಟಾದರು. ಆದರೆ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬಂದ ದೇವದತ್ ಪಡಿಕ್ಕಲ್, ತಂಡದ ಗೆಲುವನ್ನು ಆರಂಭದಲ್ಲೇ ಖಚಿತಪಡಿಸಿದರು. ಕೇವಲ 21 ಎಸೆತಗಳಲ್ಲಿ ತಮ್ಮ ಐಪಿಎಲ್ ವೃತ್ತಿಜೀವನದ ಅತಿ ವೇಗದ ಅರ್ಧಶತಕ ಬಾರಿಸಿದ ಪಡಿಕ್ಕಲ್, ಅಂತಿಮವಾಗಿ 26 ಎಸೆತಗಳಲ್ಲಿ ಏಳು ಬೌಂಡರಿ ಮತ್ತು ನಾಲ್ಕು ಸಿಕ್ಸರ್‌ಗಳ ಸಹಿತ 61 ರನ್ ಗಳಿಸಿ ಔಟಾದರು.

RCB vs SRH: ಸೂಪರ್ ಮ್ಯಾನ್ ಫಿಲ್ ಸಾಲ್ಟ್ ಚಿರತೆಯ ಜಿಗಿತಕ್ಕೆ ದಂಗಾದ ಇಶಾನ್ ಕಿಶನ್

ಅಜೇಯ 69 ರನ್ ಬಾರಿಸಿದ ಕೊಹ್ಲಿ

ಪಡಿಕ್ಕಲ್ ಔಟಾಗುವುದಕ್ಕೂ ಮುನ್ನ ವಿರಾಟ್ ಕೊಹ್ಲಿ ಜೊತೆಗೆ ಎರಡನೇ ವಿಕೆಟ್​ಗೆ ಶತಕದ ಜೊತೆಯಾಟವನ್ನು ಕಟ್ಟಿದರು. ಪಡಿಕ್ಕಲ್ ಔಟಾದ ಬಳಿಕ ತಂಡವನ್ನು ಗೆಲುವಿನತ್ತ ಮುನ್ನಡೆಸಿದ ವಿರಾಟ್ ಕೊಹ್ಲಿ 38 ಎಸೆತಗಳಲ್ಲಿ ಐದು ಬೌಂಡರಿ ಮತ್ತು ಐದು ಸಿಕ್ಸರ್‌ಗಳ ಸಹಿತ ಅಜೇಯ 69 ರನ್ ಬಾರಿಸಿದರು. ನಾಯಕ ರಜತ್ ಪಟಿದಾರ್ 12 ಎಸೆತಗಳಲ್ಲಿ 31 ರನ್‌ಗಳ ಆಕ್ರಮಣಕಾರಿ ಇನ್ನಿಂಗ್ಸ್ ಆಡಿದರು. ಪರಿಣಾಮವಾಗಿ, ಆರ್‌ಸಿಬಿ ಕೇವಲ 15.4 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ಕಳೆದುಕೊಂಡು ಗುರಿ ತಲುಪಿತು. ಈ ಮೂಲಕ ಐಪಿಎಲ್‌ ಇತಿಹಾಸದಲ್ಲಿ ಮೊದಲ ಬಾರಿಗೆ ಎಸ್‌ಆರ್‌ಹೆಚ್ ವಿರುದ್ಧ 190+ ರನ್‌ಗಳ ಗುರಿಯನ್ನು ಆರ್‌ಸಿಬಿ ಯಶಸ್ವಿಯಾಗಿ ಬೆನ್ನಟ್ಟಿದ ದಾಖಲೆಯನ್ನು ಬರೆಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:07 pm, Sat, 28 March 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ