ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಆರ್ಯಮನ್ ಬಿರ್ಲಾ

"ಈ ಸಲ ಕಪ್ ನಮ್ದೇ" ಎಂಬ ಭಾವುಕ ಘೋಷಣೆಯೊಂದಿಗೆ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಹೃದಯ ಗೆದ್ದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯನ್ನು ಬರೋಬ್ಬರಿ ₹16,706 ಕೋಟಿ ಮೊತ್ತಕ್ಕೆ ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಖರೀದಿಸಿದೆ. ಈ ಖರೀದಿ ಬೆನ್ನಲ್ಲೇ ಆರ್​ಸಿಬಿ"ತಂಡದ ಹೆಸರು ಬದಲಾಗಲಿದೆ" ಎಂಬ ವದಂತಿಗಳು ಕಾಳ್ಗಿಚ್ಚಿನಂತೆ ಹರಡಿದ್ದವು. 

ಆರ್​ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಆರ್ಯಮನ್ ಬಿರ್ಲಾ
ಆರ್ಯಮನ್ ಬಿರ್ಲಾ
Image Credit source: IPL

Updated on: Sep 06, 2026 | 1:09 PM

ಐಪಿಎಲ್‌ನ ಅತ್ಯಂತ ಜನಪ್ರಿಯ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಬದಲಾಗಲಿದೆ ಎನ್ನುವ ಸಾಮಾಜಿಕ ಜಾಲತಾಣಗಳ ವದಂತಿಗಳಿಗೆ ಕೊನೆಗೂ ಪೂರ್ಣ ವಿರಾಮ ಬಿದ್ದಿದೆ. ತಂಡದ ನೂತನ ಚೇರ್ಮನ್ ಆರ್ಯಮನ್ ಬಿರ್ಲಾ ಅವರು ಆರ್‌ಸಿಬಿ ಹೆಸರು ಬದಲಾಗುವುದಿಲ್ಲ ಎಂದು ಅಧಿಕೃತವಾಗಿ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಆರ್ಯಮನ್ ಬಿರ್ಲಾ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರನ್ನು ಬದಲಿಸುವುದಿಲ್ಲ.  ಅಂತಹ ಯಾವುದೇ ಆಲೋಚನೆ ನಮ್ಮ ಮುಂದಿಲ್ಲ. ನಮಗೆ ‘ರಾಯಲ್ ಚಾಲೆಂಜರ್ಸ್ ಬೆಂಗಳೂರು’ ಎಂಬ ಹೆಸರು ತುಂಬಾ ಇಷ್ಟ. ನಾವು ಇದೇ ಹೆಸರನ್ನು ಮುಂದುವರಿಸಲಿದ್ದೇವೆ. ಹಾಗಾಗಿ ಹೆಸರು ಬದಲಾವಣೆಯ ವದಂತಿಗಳಿಗೆ ಇಲ್ಲಿಗೆ ತೆರೆ ಬೀಳಬೇಕು,” ಎಂದು ಸ್ಪಷ್ಟ ಮಾತುಗಳಲ್ಲಿ ತಿಳಿಸಿದ್ದಾರೆ.

ಆರ್​ಸಿಬಿ ಒಂದು ಬ್ರ್ಯಾಂಡ್:

ಆರ್‌ಸಿಬಿ ಎನ್ನುವುದು ಕೇವಲ ಒಂದು ತಂಡವಲ್ಲ, ಅದು ಕೋಟ್ಯಂತರ ಅಭಿಮಾನಿಗಳ ಭಾವನೆಯಾಗಿದೆ. ಈ ಬ್ರ್ಯಾಂಡ್ ಹೊಂದಿರುವ ಜನಪ್ರಿಯತೆ ಮತ್ತು ಸಮುದಾಯದ ಪ್ರೀತಿಯನ್ನು ನಾವು ಗೌರವಿಸುತ್ತೇವೆ. ಹೀಗಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹೆಸರು ಮುಂದುವರೆಯಿದ ಆರ್ಯಮನ್ ಬಿರ್ಲಾ ಹೇಳಿದ್ದಾರೆ.

ವದಂತಿಗಳು ಶುರುವಾಗಿದ್ದು ಏಕೆ?

ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ಸಂಸ್ಥೆಯಿಂದ ಆರ್‌ಸಿಬಿ ಫ್ರಾಂಚೈಸಿಯನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು (ಬೋಲ್ಟ್ ವೆಂಚರ್ಸ್, ಬ್ಲ್ಯಾಕ್‌ಸ್ಟೋನ್ ಮತ್ತು ಟೈಮ್ಸ್ ಆಫ್ ಇಂಡಿಯಾ ಗ್ರೂಪ್ ಒಳಗೊಂಡಂತೆ) ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,706 ಕೋಟಿ) ಭಾರಿ ಮೊತ್ತಕ್ಕೆ ಖರೀದಿಸಿತ್ತು.

ಮಾಲೀಕತ್ವ ಬದಲಾದ ಬೆನ್ನಲ್ಲೇ, ಹೊಸ ಮ್ಯಾನೇಜ್‌ಮೆಂಟ್ ತಂಡದ ಹೆಸರನ್ನು ಬದಲಾಯಿಸಲಿದೆ ಎಂಬ ವದಂತಿಗಳು ಹರಿದಾಡಲು ಶುರುವಾಗಿದ್ದವು. ಆದರೆ ಈಗ ಹೊಸ ಚೇರ್ಮನ್ ಅವರೇ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಹೀಗಾಗಿ ಆರ್ಯಮನ್ ಬಿರ್ಲಾ ಆರ್​ಸಿಬಿ ಚೇರ್ಮನ್ ಆಗಿ ಇರುವವರೆಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೆಸರಿನಲ್ಲಿಯೇ ಆರ್​ಸಿಬಿ ತಂಡ ಕಣಕ್ಕಿಳಿಯಲಿದೆ.

ಇದನ್ನೂ ಓದಿ: IPL 2027: ಐಪಿಎಲ್ ಟ್ರೇಡ್ ವಿಂಡೋ: ತೆರೆಮರೆಯ ರಣತಂತ್ರಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್​ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಯಶ್ ದಯಾಳ್, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ರಿಚರ್ಡ್ ಗ್ಲೀಸನ್.

 

ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Loading...
Unable to load recommendations.
Follow Us