IPL 2022: ನೀಲಿ ಬಣ್ಣಕ್ಕೆ ತಿರುಗಿದ ಕೆಂಪು: ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ಮುಂಬೈ, RCB

| Updated By: ಝಾಹಿರ್ ಯೂಸುಫ್

Updated on: May 21, 2022 | 4:42 PM

RCB Turns Blue: ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವಣ ಪಂದ್ಯವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯವಾಗಿ ಮಾರ್ಪಟ್ಟಿದೆ.

IPL 2022: ನೀಲಿ ಬಣ್ಣಕ್ಕೆ ತಿರುಗಿದ ಕೆಂಪು: ಡೆಲ್ಲಿ ಕ್ಯಾಪಿಟಲ್ಸ್ ಎದುರಾಳಿ ಮುಂಬೈ, RCB
RCB-MI
Follow us on

IPL 2022: ಐಪಿಎಲ್​ನ 69ನೇ ಪಂದ್ಯವು 2 ತಂಡಗಳ ಪಾಲಿಗೆ ನಿರ್ಣಾಯಕ. ಆದರೆ ಇಲ್ಲಿ ಈ ಪಂದ್ಯದಲ್ಲಿ ಕಣಕ್ಕಿಳಿಯುತ್ತಿರುವ ಮುಂಬೈ ಇಂಡಿಯನ್ಸ್​ಗೆ ಇದು ಔಪಚಾರಿಕ ಪಂದ್ಯ ಎಂಬುದು ವಿಶೇಷ. ಅಂದರೆ ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ ಡೆಲ್ಲಿ ಕ್ಯಾಪಿಟಲ್ಸ್ (MI vs DC) ಗೆದ್ದರೆ​ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಅದೇ ವೇಳೆ ಮುಂಬೈ ಇಂಡಿಯನ್ಸ್ ಜಯ ಸಾಧಿಸಿದರೆ, ಪಾಯಿಂಟ್ಸ್ ಟೇಬಲ್​ನಲ್ಲಿ ನಾಲ್ಕನೇ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತಂಡ ಪ್ಲೇಆಫ್​ ಆಡಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್-ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯ ಆರ್​ಸಿಬಿ ಪಾಲಿಗೂ ನಿರ್ಣಾಯಕ ಪಂದ್ಯವಾಗಿ ಮಾರ್ಪಟ್ಟಿದೆ. ಹೀಗಾಗಿ ಇತ್ತ ಆರ್​ಸಿಬಿ ಕಡೆಯಿಂದ ಮುಂಬೈಗೆ ಫುಲ್ ಸಪೋರ್ಟ್ ವ್ಯಕ್ತವಾಗುತ್ತಿದೆ. ಅದರಲ್ಲೂ ರೆಡ್ ಆರ್ಮಿ ಎಂದೇ ಗುರುತಿಸಿಕೊಂಡಿದ್ದ ಆರ್​ಸಿಬಿ ತನ್ನ ಲೋಗೋವನ್ನು ಬ್ಲೂ ಬಣ್ಣಕ್ಕೆ ಬದಲಿಸಿದೆ.

ಇಲ್ಲಿ ಮುಂಬೈ ಇಂಡಿಯನ್ಸ್ ನೀಲಿ ಬಣ್ಣದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಬೆಂಬಲ ಸೂಚಿಸುವ ಸಲುವಾಗಿ ಲೋಗೋವನ್ನು ಬ್ಲೂ ಬಣ್ಣದ ಹಿನ್ನೆಲೆಯಲ್ಲಿ ಚಿತ್ರಿಸಿದೆ. ಈ ಮೂಲಕ ಆರ್​ಸಿಬಿ ತಂಡವು ಮುಂಬೈ ಇಂಡಿಯನ್ಸ್​ ತಂಡದ ಬೆಂಬಲಕ್ಕೆ ನಿಂತಿದೆ. ಅಷ್ಟೇ ಅಲ್ಲದೆ ಆರ್​ಸಿಬಿ ಅಭಿಮಾನಿಗಳು ಕೂಡ ಇಂದು ಮುಂಬೈ ಇಂಡಿಯನ್ಸ್ ತಂಡಕ್ಕೆ ಫುಲ್ ಸಪೋರ್ಟ್ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ಓದಿ
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
IPL 2022: RCB ಗೆದ್ದರೂ ಡೆಲ್ಲಿ ಕ್ಯಾಪಿಟಲ್ಸ್​ ಚಾನ್ಸ್, ಯಾಕೆ ಗೊತ್ತಾ?
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಇನ್ನು ಗುಜರಾತ್ ಟೈಟನ್ಸ್ ವಿರುದ್ದದ ಪಂದ್ಯದ ಬಳಿಕ ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ ಸೇರಿದಂತೆ ಬಹುತೇಕ ಆರ್​ಸಿಬಿ ಆಟಗಾರರು ಮುಂಬೈ ಇಂಡಿಯನ್ಸ್ ಗೆಲ್ಲುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. ಅದರಲ್ಲೂ ಒಂದು ಹೆಜ್ಜೆ ಮುಂದೆ ಹೋಗಿರುವ ವಿರಾಟ್ ಕೊಹ್ಲಿ, ಶನಿವಾರ ಮುಂಬೈ ಇಂಡಿಯನ್ಸ್​ಗೆ ಹೆಚ್ಚುವರಿ 25 ಮಂದಿ ಬೆಂಬಲಿಗರು (ಆರ್‌ಸಿಬಿ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಸೇರಿದಂತೆ) ಇರಲಿದ್ದಾರೆ ಎಂದಿದ್ದರು.

ಹೊಸ ಬೆಂಬಲಿಗರು ಕ್ರೀಡಾಂಗಣದಿಂದ ಹುರಿದುಂಬಿಸುವುದನ್ನು ಸಹ ಕಾಣಬಹುದು ಎನ್ನುವ ಮೂಲಕ ವಿರಾಟ್ ಕೊಹ್ಲಿ ಪರೋಕ್ಷವಾಗಿ ಮುಂಬೈ ಇಂಡಿಯನ್ಸ್​ ನಮ್ಮ ಸಪೋರ್ಟ್ ಎಂದು ತಿಳಿಸಿದ್ದಾರೆ. ಇದೀಗ ವಿಶೇಷ ಪೋಸ್ಟ್​ಕಾರ್ಡ್​ ಲೆಟರ್​ನೊಂದಿಗೆ ಇಡೀ ಆರ್​ಸಿಬಿ ತಂಡವು ನಿಮ್ಮ ಬೆಂಬಲಕ್ಕೆ ಇರಲಿದೆ. ಅದು ಕೂಡ ಒಂದೇ ಕುಟುಂಬದಂತೆ..ನೀವು ಡೆಲ್ಲಿ ವಿರುದ್ದ ನಿರ್ಭೀತಿಯಿಂದ ಗೆಲ್ಲಿ ಎಂದು ಹಾರೈಸಿದ್ದಾರೆ.

ಒಟ್ಟಿನಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್​ ನಡುವಣ ಪಂದ್ಯವು ಇದೀಗ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಆರ್​ಸಿಬಿ ನಡುವಣ ಪಂದ್ಯವಾಗಿ ಮಾರ್ಪಟ್ಟಿದೆ. ಏಕೆಂದರೆ ಡೆಲ್ಲಿ ಕ್ಯಾಪಿಟಲ್ಸ್ ಗೆದ್ದರೆ ಪ್ಲೇಆಫ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಇಂಡಿಯನ್ಸ್ ಗೆದ್ದರೆ ಮಾತ್ರ ಆರ್​ಸಿಬಿಗೆ ಚಾನ್ಸ್​. ಹೀಗಾಗಿಯೇ ಮುಂಬೈ ಇಂಡಿಯನ್ಸ್​ಗೆ ಆರ್​ಸಿಬಿ ಬೆಂಬಲ ವ್ಯಕ್ತಪಡಿಸುತ್ತಿದೆ. ಅದರಲ್ಲೂ #RedTurnsBlue ಹ್ಯಾಶ್​ಟ್ಯಾಗ್ ಮೂಲಕ ಇದೀಗ ಆರ್​ಸಿಬಿ ಮುಂಬೈ ಇಂಡಿಯನ್ಸ್ ತಂಡವನ್ನು ಹುರಿದುಂಬಿಸುತ್ತಿರುವುದು ವಿಶೇಷ.

 

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.