AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅನ್​ಬಾಕ್ಸ್ ಈವೆಂಟ್; 60 ನಿಮಿಷಗಳಲ್ಲೇ ಎಲ್ಲಾ ಟಿಕೆಟ್​ ಸೋಲ್ಡ್ ಔಟ್

RCB Unbox 2025: ಆರ್‌ಸಿಬಿ ಅನ್‌ಬಾಕ್ಸ್ 2025 ಕಾರ್ಯಕ್ರಮ ಮಾರ್ಚ್ 17 ರಂದು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಇದೀಗ ಈ ಕಾರ್ಯಕ್ರಮದ ಟಿಕೆಟ್‌ಗಳು ಒಂದು ಗಂಟೆಯೊಳಗೆ ಮಾರಾಟವಾಗಿವೆ.ಈ ವರ್ಷದ ಈವೆಂಟ್ ಹಿಂದೆಂದಿಗಿಂತಲೂ ಭಿನ್ನವಾಗಿರಲಿದ್ದು, ತಂಡಕ್ಕೆ ನೂತನವಾಗಿ ಆಯ್ಕೆಯಾಗಿರುವ ನಾಯಕ ರಜತ್ ಪಾಟಿದರ್ ಈ ಕಾರ್ಯಕ್ರಮದ ಕೇಂದ್ರಬಿಂದುವಾಗಿರಲಿದ್ದಾರೆ. ಇವರೊಂದಿಗೆ ತಂಡದ ಇನ್ನು ಕೆಲವು ಸ್ಟಾರ್ ಆಟಗಾರರು ಈ ಈವೆಂಟ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ.

IPL 2025: RCB ಅನ್​ಬಾಕ್ಸ್ ಈವೆಂಟ್; 60 ನಿಮಿಷಗಳಲ್ಲೇ ಎಲ್ಲಾ ಟಿಕೆಟ್​ ಸೋಲ್ಡ್ ಔಟ್
ಆರ್​ಸಿಬಿ ಅನ್​ಬಾಕ್ಸ್ ಈವೆಂಟ್
ಪೃಥ್ವಿಶಂಕರ
|

Updated on: Mar 06, 2025 | 9:12 PM

Share

ಕಳೆದ ಬಾರಿಯಂತೆ ಈ ಬಾರಿಯೂ 2025 ರ ಐಪಿಎಲ್ (IPL 2025) ಆರಂಭಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರಾಂಚೈಸಿ ಅನ್​ಬಾಕ್ಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಆರ್​ಸಿಬಿಯ ತವರು ನೆಲವಾದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಕಾರ್ಯಕ್ರಮ ಮಾರ್ಚ್ 17 ರಂದು ನಡೆಯಲ್ಲಿದೆ. ಈ ಕಾರ್ಯಕ್ರಮಕ್ಕೆ ಇಂದು ಟಿಕೆಟ್ ಮಾರಾಟವನ್ನು ಆರಂಭಿಸಲಾಗಿದ್ದು, ಟಿಕೆಟ್ ಮಾರಾಟ ಆರಂಭವಾದ ಒಂದು ಗಂಟೆಯೊಳಗೆ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ. ಕಳೆದ ಬಾರಿ ನಡೆದಿದ್ದ ಅನ್​ಬಾಕ್ಸ್ ಈವೆಂಟ್​ಗೂ ಇಡೀ ಕ್ರೀಡಾಂಗಣವೇ ತುಂಬಿತ್ತು. ಈ ಬಾರಿಯೂ ಅದೇ ನಿರೀಕ್ಷೆ ಇಡಲಾಗಿತ್ತು. ಅದರಂತೆ ಟಿಕೆಟ್ ಮಾರಾಟ ಆರಂಭವಾದ 60 ನಿಮಿಷಗಳಲ್ಲೇ ಎಲ್ಲಾ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿವೆ.

ತಂಡಕ್ಕೆ ನೂತನ ನಾಯಕ

ಈ ವರ್ಷದ ಈವೆಂಟ್ ಹಿಂದೆಂದಿಗಿಂತಲೂ ಭಿನ್ನವಾಗಿರಲಿದ್ದು, ತಂಡಕ್ಕೆ ನೂತನವಾಗಿ ಆಯ್ಕೆಯಾಗಿರುವ ನಾಯಕ ರಜತ್ ಪಾಟಿದರ್ ಈ ಕಾರ್ಯಕ್ರಮದ ಕೇಂದ್ರಬಿಂದುವಾಗಿರಲಿದ್ದಾರೆ. ಇವರೊಂದಿಗೆ ತಂಡದ ಇನ್ನು ಕೆಲವು ಸ್ಟಾರ್ ಆಟಗಾರರು ಈ ಈವೆಂಟ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಹಾಗೆಯೇ ಇದೇ ಕಾರ್ಯಕ್ರಮದಲ್ಲಿ ಆರ್​ಸಿಬಿ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರ ಹಾಲ್ ಆಫ್ ಫೇಮ್ ಗೌರವಕ್ಕೆ ಭಾಜನರಾಗಲಿದ್ದಾನೆ. ಇದುವರೆಗೆ ಈ ಗೌರವಕ್ಕೆ ಮೂವರು ದಿಗ್ಗಜ ಆಟಗಾರರಾದ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್​ ಹಾಗೂ ಕನ್ನಡಿಗ ಆರ್​ ವಿನಯ್​ಕುಮಾರ್ ಭಾಜನರಾಗಿದ್ದರು. ಈ ಬಾರಿ ಯಾರಿಗೆ ಆ ಗೌರವ ಸಿಗಲಿದೆ ಎಂಬುದನ್ನು ಕಾದುನೋಡಬೇಕಿದೆ.

ನನ್ಯ ಅವಕಾಶವನ್ನು ನೀಡುತ್ತದೆ

ಇನ್ನು ಈ ಕಾರ್ಯಕ್ರಮದ ಬಗ್ಗೆ ಮಾತನಾಡಿರುವ ಆರ್‌ಸಿಬಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಒಒ) ರಾಜೇಶ್ ಮೆನನ್, ‘ಆರ್‌ಸಿಬಿ ಅನ್‌ಬಾಕ್ಸ್ ಈವೆಂಟ್ ಈ ಸೀಸನ್ ಆರಂಭಕ್ಕೆ ಉತ್ತಮ ವೇದಿಕೆಯಾಗಿದೆ. ಟೂರ್ನಿ ಆರಂಭವಾಗುವ ಮೊದಲು ಅಭಿಮಾನಿಗಳು ತಂಡದೊಂದಿಗೆ ಸಂಪರ್ಕ ಸಾಧಿಸಲು ಒಂದು ಅನನ್ಯ ಅವಕಾಶವನ್ನು ನೀಡುತ್ತದೆ. ನಮ್ಮ ಅಭಿಮಾನಿಗಳಿಗೆ ಮತ್ತೊಂದು ಸ್ಮರಣೀಯ ಅನುಭವವನ್ನು ಸೃಷ್ಟಿಸಲು ನಾವು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

RCB vs DC: ಬೆಂಗಳೂರಿನಲ್ಲಿ ಸತತ ನಾಲ್ಕನೇ ಪಂದ್ಯ ಸೋತ ಆರ್​ಸಿಬಿ; ಸೆಮೀಸ್ ಹಾದಿ ಕಠಿಣ

ಕೆಕೆಆರ್ ಮೊದಲ ಎದುರಾಳಿ

ಹಾಗೆಯೇ 2025 ರ ಐಪಿಎಲ್​ನಲ್ಲಿ ಆರ್‌ಸಿಬಿಯ ಪ್ರಯಾಣದ ಬಗ್ಗೆ ಹೇಳುವುದಾದರೆ… ರಜತ್ ಪಾಟಿದರ್ ನಾಯಕತ್ವದ ರೆಡ್ ಆರ್ಮಿ ಮಾರ್ಚ್ 22 ರಂದು ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲ್ಲಿರುವ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕಣಕ್ಕಿಳಿಯುವ ಮೂಲಕ ತಮ್ಮ ಅಭಿಯಾನವನ್ನು ಪ್ರಾರಂಭಿಸಲಿದೆ. ಆ ಬಳಿಕ ಆರ್‌ಸಿಬಿ ಏಪ್ರಿಲ್ 2 ರಂದು ಗುಜರಾತ್ ಟೈಟಾನ್ಸ್ ವಿರುದ್ಧ ಈ ಆವೃತ್ತಿಯಲ್ಲಿ ತನ್ನ ಮೊದಲ ತವರು ಪಂದ್ಯವನ್ನು ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ