AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: RCB ಅನ್​ಬಾಕ್ಸ್​ಗೆ ಡೇಟ್ ಫಿಕ್ಸ್

IPL 2025: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೂ ಐದು ದಿನ ಮುಂಚಿತವಾಗಿ ಆರ್​ಸಿಬಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ. ಅದರಂತೆ ಮಾರ್ಚ್ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡದ ಬಹು ನಿರೀಕ್ಷಿತ ಕಾರ್ಯಕ್ರಮ ಅನ್​ಬಾಕ್ಸ್ ಇವೆಂಟ್ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಆಟಗಾರರೊಬ್ಬರಿಗೆ ಆಲ್​ ಆಫ್ ಫೇಮ್ ಪ್ರಶಸ್ತಿ ನೀಡಲಿದ್ದಾರೆ.

IPL 2025: RCB ಅನ್​ಬಾಕ್ಸ್​ಗೆ ಡೇಟ್ ಫಿಕ್ಸ್
Rcb
ಝಾಹಿರ್ ಯೂಸುಫ್
|

Updated on: Mar 04, 2025 | 7:24 AM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಅನ್​ಬಾಕ್ಸ್​ ಕಾರ್ಯಕ್ರಮಕ್ಕೆ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ತಂಡದ ಅನ್​ಬಾಕ್ಸ್​ ಇವೆಂಟ್ ನಡೆಯಲಿದೆ. ಸಂಗೀತ ರಸಮಂಜರಿಯೊಂದಿಗೆ ಜರುಗಲಿರುವ ಈ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ನೂತನ ಜೆರ್ಸಿಯನ್ನು ಅನಾವರಣಗೊಳಿಸಲಾಗುತ್ತದೆ.

ಇನ್ನು ಈ ಕಾರ್ಯಕ್ರಮದಲ್ಲಿ ಆರ್​ಸಿಬಿ ತಂಡದ ಆಟಗಾರರು ಕಾಣಿಸಿಕೊಳ್ಳಲಿದ್ದು, ಇವರೊಂದಿಗೆ ಕೆಲ ಮಾಜಿ ಆಟಗಾರರು ಸಹ ಉಪಸ್ಥಿತರಿರಲಿದ್ದಾರೆ. ಅದರಲ್ಲೂ ಈ ಬಾರಿ ಆರ್​ಸಿಬಿ ಆಲ್​ ಫೇಮ್ ಪ್ರಶಸ್ತಿ ಯಾರಿಗೆ ನೀಡಲಿದ್ದಾರೆ ಎಂಬುದೇ ಕುತೂಹಲ.

ಏನಿದು ಆಲ್​ ಆಫ್ ಫೇಮ್ ಪ್ರಶಸ್ತಿ?

ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ತನ್ನ ತಂಡದ ಪರ ಆಡಿದ ಮಾಜಿ ಆಟಗಾರರನ್ನು ಕಳೆದ ಎರಡು ವರ್ಷಗಳಿಂದ ಪ್ರಶಸ್ತಿ ನೀಡಿ ಗೌರವಿಸುತ್ತಿದೆ. ಈ ಪ್ರಶಸ್ತಿಗೆ ಆರ್​ಸಿಬಿ ಹಾಲ್ ಆಫ್​ ಫೇಮ್ ಎಂಬ ಹೆಸರಿಡಲಾಗಿದೆ.

ಈ ಗೌರವ ಪ್ರಶಸ್ತಿಯನ್ನು ಆರ್​ಸಿಬಿ ಪರ ಆಡಿದ ಎಲ್ಲಾ ಆಟಗಾರರಿಗೆ ನೀಡಲಾಗುವುದಿಲ್ಲ. ಬದಲಾಗಿ ತಂಡದ ಪರ ಸರ್ವ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ಮಾತ್ರ ಸಲ್ಲುತ್ತದೆ. ಇದಕ್ಕಾಗಿ ಒಂದಷ್ಟು ಷರತ್ತುಗಳನ್ನು ಕೂಡ ಆರ್​ಸಿಬಿ ರೂಪಿಸಿದೆ.

ಈ ಷರತ್ತುಗಳೆಂದರೆ, ಕನಿಷ್ಠ 3 ವರ್ಷಗಳ ಕಾಲ RCB ಪರ ಆಡಿರಬೇಕು. ಪ್ರಸ್ತುತ, ಅವರು ಐಪಿಎಲ್‌ನ ಯಾವುದೇ ತಂಡದ ಭಾಗವಾಗಿರಬಾರದು. ಮೈದಾನದಲ್ಲಿ ಮತ್ತು ಹೊರಗೆ RCB ಮೇಲೆ ಗಮನಾರ್ಹ ಪರಿಣಾಮ ಬೀರಬೇಕು. ಇಂತಹ ಸರ್ವ ಶ್ರೇಷ್ಠ ಆಟಗಾರರಿಗೆ ಮಾತ್ರ ಆರ್​ಸಿಬಿ ಹಾಲ್ ಆಫ್ ಫೇಮ್ ಗೌರವ ನೀಡಲಾಗುತ್ತದೆ.

ಕಳೆದ ಎರಡು ಸೀಸನ್​ಗಳಲ್ಲಿ ಆರ್​ಸಿಬಿಯ ಆಲ್​ ಆಫ್ ಫೇಮ್ ಗೌರವಕ್ಕೆ ಪಾತ್ರರಾದವರೆಂದರೆ ಕ್ರಿಸ್ ಗೇಲ್, ಎಬಿ ಡಿವಿಲಿಯರ್ಸ್ ಹಾಗೂ ವಿನಯ್ ಕುಮಾರ್. ಹೀಗಾಗಿ ಈ ಬಾರಿ ಈ ಪ್ರಶಸ್ತಿಯನ್ನು ಯಾರು ಪಡೆಯಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಇದಕ್ಕೆ ಉತ್ತರ ಮಾರ್ಚ್ 17 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಗಲಿದೆ.

ಇದನ್ನೂ ಓದಿ: IPL 2025: RCB ತಂಡದ ಹೊಸ ಜೆರ್ಸಿ ಫೋಟೋ ಲೀಕ್?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಲಿಯಾಮ್ ಲಿವಿಂಗ್​ಸ್ಟೋನ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋಶ್ ಹ್ಯಾಝಲ್​ವುಡ್, ರಸಿಖ್ ಸಲಾಂ, ಸುಯೇಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ನುವಾನ್ ತುಷಾರ, ರೊಮಾರಿಯೋ ಶೆಫರ್ಡ್, ಜೇಕೊಬ್ ಬೆಥೆಲ್, ಮನೋಜ್ ಭಾಂಡಗೆ, ಸ್ವಸ್ತಿಕ್ ಚಿಕಾರ, ದೇವದತ್​ ಪಡಿಕ್ಕಲ್, ಮೋಹಿತ್ ರಾಠಿ, ಅಭಿನಂದನ್ ಸಿಂಗ್, ಲುಂಗಿ ಎನ್​ಗಿಡಿ.

ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು