AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ತಂಡಕ್ಕೆ ಭುವನೇಶ್ವರ್ ಆಯ್ಕೆ; ತಲೆಕೆಳಗಾಯ್ತು ಆರ್​ಸಿಬಿ ಲೆಕ್ಕಾಚಾರ..!

ಭುವನೇಶ್ವರ್ ಕುಮಾರ್ ನಾಲ್ಕು ವರ್ಷಗಳ ನಂತರ ಟೀಂ ಇಂಡಿಯಾಗೆ ಮರಳಿದ್ದು ಅಭಿಮಾನಿಗಳಿಗೆ ಸಂತಸ ತಂದಿದೆ. ಆದರೆ, ಇದು ಆರ್‌ಸಿಬಿಯ ಐಪಿಎಲ್ 2028ರ ಮೆಗಾ ಹರಾಜು ಯೋಜನೆಯನ್ನು ಬುಡಮೇಲು ಮಾಡಿದೆ. ಭುವಿಯನ್ನು ಅನ್‌ಕ್ಯಾಪ್ಡ್ ಆಟಗಾರನಾಗಿ ಕಡಿಮೆ ಮೊತ್ತಕ್ಕೆ ಉಳಿಸಿಕೊಳ್ಳುವ ಆರ್‌ಸಿಬಿ ಅವಕಾಶ ಈಗ ಕಳೆದುಹೋಗಿದ್ದು, ಕ್ಯಾಪ್ಡ್ ಆಟಗಾರನಾಗಿ ಹೆಚ್ಚಿನ ಮೊತ್ತ ನೀಡಬೇಕಾಗಿದೆ.

ಭಾರತ ತಂಡಕ್ಕೆ ಭುವನೇಶ್ವರ್ ಆಯ್ಕೆ; ತಲೆಕೆಳಗಾಯ್ತು ಆರ್​ಸಿಬಿ ಲೆಕ್ಕಾಚಾರ..!
ಭುವನೇಶ್ವರ್ ಕುಮಾರ್Image Credit source: PTI
ಪೃಥ್ವಿಶಂಕರ
|

Updated on: Oct 07, 2026 | 6:30 PM

Share

ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಕೂಗು ಕೊನೆಗೂ ಬಿಸಿಸಿಐ ಕಿವಿಗೆ ಬಿದ್ದಂತೆ ಕಾಣಿಸುತ್ತಿದೆ. ಅದಕ್ಕಾಗಿಯೇ 4 ವರ್ಷಗಳಿಂದ ಕಡೆಗಣಿಸಲ್ಪಟ್ಟಿದ್ದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಅವರನ್ನು ಮತ್ತೆ ರಾಷ್ಟ್ರೀಯ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಟೀಂ ಇಂಡಿಯಾ ಇದೇ ತಿಂಗಳು ನ್ಯೂಜಿಲೆಂಡ್ ಪ್ರವಾಸ ಕೈಗೊಳ್ಳಲಿದೆ. ಟಿ20 ಸರಣಿಯೊಂದಿಗೆ ಈ ಪ್ರವಾಸ ಆರಂಭವಾಗಲಿದೆ. ಈ ಪ್ರವಾಸಕ್ಕೆ ಬಿಸಿಸಿಐ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಭುವನೇಶ್ವರ್ ಕುಮಾರ್​ಗೆ ಸ್ಥಾನ ನೀಡಲಾಗಿದೆ. ಭುವಿಯನ್ನು ತಂಡಕ್ಕೆ ಆಯ್ಕೆ ಮಾಡಿರುವುದು ಅಭಿಮಾನಿಗಳಿಗೆ ಸಂತಸವನ್ನುಂಟು ಮಾಡಿದೆ. ಆದರೆ ಭುವನೇಶ್ವರ್ ಕುಮಾರ್ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿರುವುದು ಆರ್​ಸಿಬಿ ಫ್ರಾಂಚೈಸಿಯ ಲೆಕ್ಕಾಚಾರವನ್ನು ಬುಡಮೇಲು ಮಾಡಿದೆ.

ವಾಸ್ತವವಾಗಿ ಭುವನೇಶ್ವರ್ ಕುಮಾರ್ 2022 ರ ನವೆಂಬರ್​ನಿಂದ ಭಾರತ ತಂಡದಿಂದ ಹೊರಗುಳಿದಿದ್ದಾರೆ. ಕೊನೆಯದಾಗಿ 2022 ರ ಟಿ20 ವಿಶ್ವಕಪ್ ಸೆಮಿಫೈನಲ್​ನಲ್ಲಿ ಆಡಿದ್ದ ಭುವಿ, ಆ ಪಂದ್ಯದಲ್ಲಿ ಒಂದೇ ಒಂದು ವಿಕೆಟ್ ಪಡೆದಿರಲಿಲ್ಲ. ಇತ್ತ ಟೀಂ ಇಂಡಿಯಾ ಆ ಪಂದ್ಯದಲ್ಲಿ 10 ವಿಕೆಟ್‌ಗಳ ಸೋಲು ಕಂಡಿತ್ತು. ಅದು ಪಾಕಿಸ್ತಾನದ ವಿರುದ್ಧ. ಈ ಏಕಪಕ್ಷೀಯ ಸೋಲಿನ ನಂತರ, ಭುವನೇಶ್ವರ್ ಅವರನ್ನು ಭಾರತ ತಂಡದಿಂದ ಕೈಬಿಡಲಾಗಿತ್ತು. ಅಂದಿನಿಂದ ಭುವಿ ಅವಕಾಶಕ್ಕಾಗಿ ಎದುರು ನೋಡುತ್ತಿದ್ದರು. ಆದರೆ ಬಿಸಿಸಿಐ ಮಾತ್ರ ಅವರನ್ನು ಕಡೆಗಣಿಸುತ್ತಲ್ಲಿತ್ತು. ಆದರೆ ಕಳೆದೆರಡು ಐಪಿಎಲ್ ಆವೃತ್ತಿಗಳಲ್ಲಿ ಅಮೋಘ ಪ್ರದರ್ಶನ ನೀಡಿದ ಭುವಿಗೆ ಮತ್ತೆ ತಂಡದಲ್ಲಿ ಸ್ಥಾನ ಸಿಕ್ಕಿದೆ.

ಆರ್‌ಸಿಬಿ ಲೆಕ್ಕಾಚಾರ ಬುಡಮೇಲು

ಐಪಿಎಲ್ 2025 ಮತ್ತು ಐಪಿಎಲ್ 2026 ರಲ್ಲಿ ಭುವನೇಶ್ವರ್ ಅವರ ಬೌಲಿಂಗ್ ಆರ್‌ಸಿಬಿ ತನ್ನ ಮೊದಲ ಐಪಿಎಲ್ ಪ್ರಶಸ್ತಿಯನ್ನು ಮಾತ್ರವಲ್ಲದೆ ಸತತ ಎರಡು ಪ್ರಶಸ್ತಿಗಳನ್ನು ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿತು. ಈ ಪ್ರದರ್ಶನದ ಆಧಾರದ ಮೇಲೆ ಭುವಿಯನ್ನು ನ್ಯೂಜಿಲೆಂಡ್ ಪ್ರವಾಸಕ್ಕೆ ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 22 ರಿಂದ ಪ್ರಾರಂಭವಾಗುವ ಸರಣಿಯಲ್ಲಿ ಅವರು ಮತ್ತೆ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದಾಗ್ಯೂ, ಅವರ ಮರಳುವಿಕೆ ಐಪಿಎಲ್ ಚಾಂಪಿಯನ್ಸ್ ಆರ್​ಸಿವಿಗೆ ಹೊಡೆತ ನೀಡಿದೆ.

ಐಪಿಎಲ್ ನಿಯಮ ಏನು ಹೇಳುತ್ತದೆ?

ವಾಸ್ತವವಾಗಿ, 2028 ರ ಐಪಿಎಲ್ ಆರಂಭಕ್ಕೂ ಮೊದಲು ಮೆಗಾ ಹರಾಜು ನಡೆಯಲಿದೆ. ಆ ಮೆಗಾ ಹರಾಜಿಗೂ ಮೊದಲು ಆರ್‌ಸಿಬಿ ಭುವನೇಶ್ವರ್ ಅವರನ್ನು ಅನ್‌ಕ್ಯಾಪ್ಡ್ ಆಟಗಾರನಾಗಿ ಉಳಿಸಿಕೊಳ್ಳುವ ಅವಕಾಶವನ್ನು ಹೊಂದಿತ್ತು. ಐಪಿಎಲ್ ಹರಾಜು ನಿಯಮಗಳ ಪ್ರಕಾರ ಟೀಂ ಇಂಡಿಯಾದಲ್ಲಿ ಆಡಿದ ಆಟಗಾರನೊಬ್ಬ ಸತತ ಐದು ವರ್ಷಗಳ ಕಾಲ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗದಿದ್ದರೆ ಅಥವಾ ಬಿಸಿಸಿಐನ ಕೇಂದ್ರ ಒಪ್ಪಂದಿಂದ ಹೊರಗೆ ಉಳಿದಿದ್ದರೆ ಅವರನ್ನು ಅನ್ ಕ್ಯಾಪ್ಡ್ ಆಟಗಾರನ ಪಟ್ಟಿಯಲ್ಲಿ ಸೇರಿಸಬಹುದು.

ಅದರಂತೆ ಭುವನೇಶ್ವರ್ ಕುಮಾರ್ ಕಳೆದ ನಾಲ್ಕು ವರ್ಷಗಳಿಂದ ಭಾರತ ತಂಡದಿಂದ ಹೊರಗಿದ್ದಾರೆ. ಅಲ್ಲದೆ ಕೇಂದ್ರ ಒಪ್ಪಂದದಲ್ಲೂ ಭುವಿ ಹೆಸರಿರಲಿಲ್ಲ. ಹೀಗಾಗಿ 2027 ರ ನವೆಂಬರ್ ತಿಂಗಳಿಗೆ ಭುವಿ ಟೀಂ ಇಂಡಿಯಾದಿಂದ ಹೊರಬಿದ್ದು ಐದು ವರ್ಷಗಳಾಗುತ್ತಿತ್ತು. ಇದರಿಂದಾಗಿ ಆರ್‌ಸಿಬಿ ಭುವನೇಶ್ವರ್ ಅವರನ್ನು ಅನ್‌ಕ್ಯಾಪ್ಡ್ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ಹೊಂದಿತ್ತು. ಆದರೆ ಭುವಿ ಇದೀಗ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಸ್ಟಾರ್ ವೇಗಿಗಳ ಅನುಪಸ್ಥಿತಿಯಲ್ಲಿ ಭುವಿಗೆ ಪ್ಲೇಯಿಂಗ್​ 11ನಲ್ಲಿ ಸ್ಥಾನ ಸಿಗುವುದು ಖಚಿತವಾಗಿದೆ.

4 ಆಟಗಾರ್ತಿಯರನ್ನು ಹೊರಹಾಕಿದ ಆರ್​ಸಿಬಿ; ಉಳಿದ ತಂಡಗಳ ವಿವರ ಇಂತಿದೆ

ಹೀಗಾಗಿ ಆರ್‌ಸಿಬಿ ಭುವಿಯನ್ನು ಕ್ಯಾಪ್ಡ್ ಆಟಗಾರನಾಗಿ ತಂಡದಲ್ಲಿ ಉಳಿಸಿಕೊಳ್ಳಬೇಕಾಗುತ್ತದೆ. ಇದರರ್ಥ ಆರ್​ಸಿಬಿ, ಭುವಿಗೆ ಅತ್ಯಧಿಕ ಮೊತ್ತ ನೀಡಬೇಕಾಗುತ್ತದೆ. ಒಂದು ವೇಳೆ ಭುವಿ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗದಿದ್ದರೆ ಅವರನ್ನು ಆರ್​ಸಿಬಿ ಅನ್‌ಕ್ಯಾಪ್ಡ್ ಆಟಗಾರನಾಗಿ ಕಡಿಮೆ ಮೊತ್ತಕ್ಕೆ ತಂಡದಲ್ಲಿ ಉಳಿಸಿಕೊಳ್ಳುವ ಅವಕಾಶ ಹೊಂದಿರುತಿತ್ತು. ಆದರೀಗ ಅದು ಸಾಧ್ಯವಾಗುವುದಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಡೀಸೆಲ್​ ಟ್ಯಾಂಕರ್​​ನಲ್ಲಿ ತಾಂತ್ರಿಕ ದೋಷ, ಬಸ್​ ಸಂಚಾರ ಸ್ಥಗಿತ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
ಮಂತ್ರಿಗಳ ಮೇಲೆ ರಹಸ್ಯ ಕ್ಯಾಮೆರಾ ಕಣ್ಣು: ಸಚಿವರನ್ನ ಎಚ್ಚರಿಸಿದ ಡಿಕೆಶಿ
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
'ಸಿಎಂ ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್ ಮಾಡಿದ್ದರು'
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಕಬ್ಬು ಬೆಳೆಗಾರರ ಮೀಟಿಂಗ್‌ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೀಗಂದ್ರು
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಸಾರಿಗೆ ನೌಕರರಿಂದ ಮತ್ತೆ ಪ್ರತಿಭಟನೆ: ವೇತನ ಪರಿಷ್ಕರಣೆಗೆ ಆಗ್ರಹ
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್
ಮೈಸೂರು: ಚಾಮುಂಡೇಶ್ವರಿ ದರ್ಶನ ಪಡೆದ ತೆಲುಗು ನಟ ಮಂಚು ಮನೋಜ್