AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ

MS Dhoni: ಚಿನ್ನಸ್ವಾಮಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯಕ್ಕೆ ಅಖಾಡ ಸಿದ್ಧವಾಗಿದೆ. ಸ್ನಾಯು ಸೆಳೆತದಿಂದ ಬಳಲುತ್ತಿದ್ದ ಧೋನಿ ಅವರು ಈ ಮಹತ್ವದ ಪಂದ್ಯಕ್ಕೆ ಲಭ್ಯರಾಗುತ್ತಾರಾ ಎಂಬ ಕುತೂಹಲವಿದೆ. ಇತ್ತೀಚೆಗೆ ಧೋನಿ ಅಭ್ಯಾಸದಲ್ಲಿ ಭಾಗವಹಿಸಿದ್ದು, ಅಭಿಮಾನಿಗಳಿಗೆ ಆಶಾಕಿರಣ ಮೂಡಿದೆ.

ಆರ್​​ಸಿಬಿ ವಿರುದ್ಧದ ಪಂದ್ಯಕ್ಕೆ ಥಲಾ ಲಭ್ಯ? ಧೋನಿ ಫ್ಯಾನ್ಸ್​​ಗೆ ಖುಷಿ ಸುದ್ದಿ
ಧೋನಿ
ರಾಜೇಶ್ ದುಗ್ಗುಮನೆ
|

Updated on:Apr 03, 2026 | 1:28 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಿದ್ಧವಾಗುತ್ತಿದೆ. ಈ ಪಂದ್ಯ ನೋಡಲು ಅಭಿಮಾನಿಗಳು ಕಾದಿದ್ದಾರೆ. ಧೋನಿ ಅವರು ಸ್ನಾಯು ಸೆಳೆತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರಿಗೆ ಎರಡು ವಾರ ರೆಸ್ಟ್ ಸೂಚಿಸಲಾಗಿತ್ತು. ಆದರೆ, ಅವರು ಈಗ ಆರ್​​ಸಿಬಿ ವಿರುದ್ಧ ಪಂದ್ಯಕ್ಕೆ ಲಭ್ಯರಾಗುತ್ತಾರಾ ಎನ್ನುವ ಕುತೂಹಲ ಮೂಡಿದೆ.

ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಹೀನಾಯವಾಗಿ ಸೋತಿತು. ಇಂದು (ಏಪ್ರಿಲ್ 3) ಚೆನ್ನೈ ತಂಡ ಪಂಜಾಬ್ ಅನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಲಯಕ್ಕೆ ಮರಳುವ ತವಕದಲ್ಲಿ ಸಿಎಸ್​​ಕೆ ಇದೆ. ಧೋನಿ ಇದ್ದಿದ್ದರೆ ಒಂದಷ್ಟು ಮಾರ್ಗದರ್ಶನ ಸಿಗುತ್ತಿತ್ತು ಎಂಬುದು ಪ್ರೇಕ್ಷಕರ ಆಲೋಚನೆ. ಆದರೆ, ಅವರು ಇಂದಿನ ಪಂದ್ಯಕ್ಕೆ ಲಭ್ಯವಾಗೋದು ಅನುಮಾನ.

ಧೋನಿ ಅವರು ಇತ್ತೀಗೆ ಪ್ರ್ಯಾಕ್ಟಿಸ್ ಸೆಷನ್ ಅಲ್ಲಿ ಭಾಗಿ ಆಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಖುಷಿ ಸುದ್ದಿ ಸಿಕ್ಕಿದೆ. ಇಂದು ಕೂಡ ಚೆನ್ನೈ ಸೂಪರ್ ಕಿಂಗ್ಸ್ ಪರ್ಫಾರ್ಮೆನ್ಸ್ ಕಳಪೆ ಆಗಿದ್ದರೆ ತಂಡವನ್ನು ಉಳಿಸಲು ಧೋನಿ ಅವರು ಎಂಟ್ರಿ ಆಗಬಹುದು ಎಂದು ಹೇಳಲಾಗುತ್ತಾ ಇದೆ. ಹಾಗಾದಲ್ಲಿ ಬೆಂಗಳರಲ್ಲಿ ನಡೆಯುವ ಪಂದ್ಯಕ್ಕೆ ಧೋನಿ ಇರಲಿದ್ದಾರೆ.

ಇದನ್ನೂ ಓದಿ: ಆರ್​​​ಸಿಬಿ ಮಾರಾಟದಿದ ವಿಜಯ್ ಮಲ್ಯಗೆ ಸಿಕ್ಕ ಹಣ ಎಷ್ಟು?

ಆರ್​​​ಸಿಬಿ ಹಾಗೂ ಸಿಎಸ್​​ಕೆ ಮ್ಯಾಚ್ ಆದರೆ ಅಭಿಮಾನಿಗಳು ಇದನ್ನು ಬದ್ಧ ವೈರಿಗಳ ಮ್ಯಾಚ್ ಎಂಬ ರೀತಿಯಲ್ಲಿ ಪರಿಗಣಿಸುತ್ತಾರೆ. ಕಳೆದ ಸೀಸನ್​ ಅಲ್ಲಿ ಚೆನ್ನೈ ಎರಡೂ ಪಂದ್ಯಗಳನ್ನು ಆರ್​​ಸಿಬಿ ವಿರುದ್ಧ ಚೆನ್ನೈ ಸೋತಿದೆ. ಈ ಬಾರಿಯೂ ಅದೇ ಫಾರ್ಮ್ ಉಳಿಸಿಕೊಳ್ಳುವ ಆಲೋಚನೆ ಚೆನ್ನೈಗೆ ಇದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 1:17 pm, Fri, 3 April 26

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹಾಸನಾಂಬೆ ಮಹೋತ್ಸವ: ಗುತ್ತಿಗೆದಾರನ ಜತೆ ಸಚಿವ ಶಿವಲಿಂಗೇಗೌಡ ಚೌಕಾಸಿ
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಪ್ರೀತಿಸಿ ಮದುವೆಯಾದ 3 ತಿಂಗಳಲ್ಲೇ ನವಜೋಡಿಗೆ ಗಂಡಾಂತರ: ಆಗಿದ್ದೇನು?
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
ಬರ ಮಧ್ಯೆ ಸಚಿವರು, ಲೋಕಸಭಾ, ರಾಜ್ಯಸಭಾ ಸದಸ್ಯರ ಕಾರು ಖರೀದಿ ಮೊತ್ತ ಏರಿಕೆ
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?