RCB vs CSK. IPL 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್

|

Updated on: Apr 16, 2023 | 12:55 PM

Chinnaswamy Stadium: ಇಂದು ಬಾಕ್ಸ್‌ ಆಫೀಸ್​ನಲ್ಲಿ ಆರ್​ಸಿಬಿ-ಸಿಎಸ್​ಕೆ ಪಂದ್ಯ ಟಿಕೆಟ್ ಮಾರಾಟ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೀಗ ಟಿಕೆಟ್ ಗೊಂದಲದಿಂದಾಗಿ ಆಕ್ರೋಶಗೊಂಡ ಅಭಿಮಾನಿಗಳು ಸ್ಟೇಡಿಯಂಗೆ ನುಗ್ಗಲು ಯತ್ನಿಸಿದ್ದಾರೆ.

RCB vs CSK. IPL 2023: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್
ಪ್ರಾತಿನಿಧಿಕ ಚಿತ್ರ
Follow us on

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ (IPL 2023) ಸೋಮವಾರ (ಏ. 17) ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಐಪಿಎಲ್​ನ ಬದ್ಧವೈರಿಗಳು ಎಂದೇ ಹೇಳಲಾಗುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ (RCB vs CSK) ತಂಡಗಳ ನಡುವೆ ರಣ ರೋಚಕ ಕದನ ಏರ್ಪಡಿಸಲಾಗಿದೆ. ಅಭಿಮಾನಿಗಳಂತು ಈ ಪಂದ್ಯ ವೀಕ್ಷಣೆಗೆ ತುದಿಗಾಲಿನಲ್ಲಿ ನಿಂತು ಕಾಯುತ್ತಿದ್ದಾರೆ. ಈಗಾಗಲೇ ಈ ಪಂದ್ಯದ ಆನ್​ಲೈನ್ ಟಿಕೆಟ್ ಸಂಪೂರ್ಣ ಸೋಲ್ಡ್ ಔಟ್ ಆಗಿದೆ.

ಇಂದು ಬಾಕ್ಸ್‌ ಆಫೀಸ್​ನಲ್ಲಿ ಆರ್​ಸಿಬಿ-ಸಿಎಸ್​ಕೆ ಪಂದ್ಯ ಟಿಕೆಟ್ ಮಾರಾಟ ನಡೆಯಲಿದೆ ಎಂದು ಹೇಳಲಾಗಿತ್ತು. ಆದರೀಗ ಟಿಕೆಟ್ ಗೊಂದಲದಿಂದಾಗಿ ಆಕ್ರೋಶಗೊಂಡ ಅಭಿಮಾನಿಗಳು ಸ್ಟೇಡಿಯಂಗೆ ನುಗ್ಗಲು ಯತ್ನಿಸಿದ್ದಾರೆ. ಇದರಿಂದಾಗಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ.

IPL 2023 Points Table: ಭರ್ಜರಿ ಜಯದೊಂದಿಗೆ ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲೇರಿದ RCB

ಇದನ್ನೂ ಓದಿ
Virat Kohli: ಅರ್ಧಶತಕ ಸಿಡಿಸಿದ ತಕ್ಷಣ ವಿರಾಟ್ ಕೊಹ್ಲಿ ಕೋಪದಲ್ಲಿ ಏನು ಮಾಡಿದ್ರು ನೋಡಿ
Faf Duplessis: ಡೆಲ್ಲಿ ವಿರುದ್ಧದ ಗೆಲುವಿನ ಬಳಿಕ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಸ್ ಏನಂದ್ರು ನೋಡಿ
Kamaal R Khan: ‘ವಿರಾಟ್​ ಕೊಹ್ಲಿಗೆ ಐಟಂ ಡ್ಯಾನ್ಸ್​ ಮಾಡುವ ಚಾನ್ಸ್​ ಕೊಡ್ತೀನಿ’ ಎಂದ ‘ದೇಶದ್ರೋಹಿ’ ನಟ
MI vs KKR, IPL 2023: ಐಪಿಎಲ್​ನಲ್ಲಿಂದು ಎರಡು ಪಂದ್ಯ: ರೋಹಿತ್ ಪಡೆಗೆ ಕೆಕೆಆರ್ ಸವಾಲ್

ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಣ ಪಂದ್ಯದ ಟಿಕೆಟ್ ಇಂದು ಬಾಕ್ಸ್‌ ಆಫೀಸ್​ನಲ್ಲಿ ನೀಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಫೋಸ್ಟ್ ಒಂದು ವೈರಲ್ ಆಗಿತ್ತು. ಈ ವೈರಲ್ ಆದ ಪೋಸ್ಟ್ ನೋಡಿ ರಾತ್ರಿಯೆ ಸ್ಟೇಡಿಯಂ ಬಳಿ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿ ಸೇರಿದ್ದರು. ಆದರೆ, ರಾತ್ರಿಯೇ ಬಂದು ಟಿಕೆಟ್​ಗಾಗಿ ಕಾದು ನಿಂತಿದ್ದ ಆರ್​ಸಿಬಿ ಅಭಿಮಾನಿಗಳಿಗೆ ಈಗ ನಿರಾಸೆ ಆಗಿದೆ. ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ ಎಂದು ಮ್ಯಾನೇಜ್ಮೆಂಟ್ ಹೇಳಿದೆ.

ಟೆಕೆಟ್ ಇಲ್ಲ ಎಂಬ ವಿಷಯ ತಿಳಿದು ಅಭಿಮಾನಗಳು ಆಕ್ರೋಶಗೊಂಡಿದ್ದಾರೆ. ಏಕಾಏಕಿ ಸ್ಟೇಡಿಯಂಗೆ ನುಗ್ಗಲು ಯತ್ನಿಸಿದ್ದಾರೆ. ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಮೂರು ವರ್ಷಗಳ ನಂತರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯಗಳು ನಡೆಯುತ್ತಿವೆ. ಅದರಿಂದಾಗಿ ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಕುದುರಿದೆ. ಶನಿವಾರ ನಡೆದ ಆರ್​ಸಿಬಿ ಹಾಗೂ ಡೆಲ್ಲಿ ಪಂದ್ಯದ ಟಿಕೆಟ್ ಕೂಡ ಸೋಲ್ಡ್ ಆಗಿತ್ತು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:54 pm, Sun, 16 April 23