AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!

Royal Challengers Bengaluru vs Chennai Super Kings: ಐಪಿಎಲ್​ನ 11ನೇ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ ಕಲೆಹಾಕಿದ್ದು ಬರೋಬ್ಬರಿ 250 ರನ್​ಗಳು. ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ 207 ರನ್​ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಮೂಲಕ ಆರ್​​ಸಿಬಿ 43 ರನ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಸೋಲಿನ ಹೊರತಾಗಿಯೂ ಸಿಎಸ್​ಕೆ ಭರ್ಜರಿ ವಿಶ್ವ ದಾಖಲೆ ನಿರ್ಮಿಸಿದೆ.

Ruturaj Gaikwad: ನಾನು ನಿಂತಿದ್ರೆ ಫಲಿತಾಂಶ ಬೇರೆ ಇರುತ್ತಿತ್ತು..!
Ruturaj Gaikwad
ಝಾಹಿರ್ ಯೂಸುಫ್
|

Updated on: Apr 07, 2026 | 4:54 PM

Share

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಅದರಲ್ಲೂ ತನ್ನ ಬದ್ಧವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್​ಕೆ ಪಡೆ ಮಕಾಡೆ ಮಲಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್​ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು.

ಅತ್ತ ಟಾಸ್ ಗೆದ್ದಿದ್ದರಿಂದ ಸಿಎಸ್​ಕೆ ತಂಡವು ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ರಾಯಲ್ ಚಾಲೆಂಜರ್ಸ್  ಬೆಂಗಳೂರು ತಂಡದ ದಾಂಡಿಗರು ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದ್ದರು. ಅಲ್ಲದೆ  20 ಓವರ್​ಗಳಲ್ಲಿ ಬರೋಬ್ಬರಿ 250 ರನ್ ಬಾರಿಸಿ ಆರ್​ಸಿಬಿ ಹೊಸ ಇತಿಹಾಸ ನಿರ್ಮಿಸಿದ್ದರು.

ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್​ಗಳಲ್ಲಿ 207 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್​ಕೆ ತಂಡವು 43 ರನ್​ಗಳ ಅಂತರದಿಂದ ಸೋಲೊಪ್ಪಿಕೊಂಡಿತು.

ಈ ಸೋಲಿನ ಬಳಿಕ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್, “ಇಂದಿನ ಸೋಲಿಗೆ ಖಂಡಿತವಾಗಿಯೂ ನಾನೇ ಕಾರಣ. ನಾನು ಕ್ರೀಸ್‌ನಲ್ಲಿ ಹೆಚ್ಚು ಸಮಯ ನಿಂತು ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು. ಆರಂಭದಲ್ಲೇ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು,” ಎಂದು ಒಪ್ಪಿಕೊಂಡಿದ್ದಾರೆ.

ಒಂದು ವೇಳೆ ನಾನು ಕ್ರೀಸ್​ನಲ್ಲಿ ಹೆಚ್ಚು ಸಮಯ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗಿರುತ್ತಿತ್ತು. ನಾನು ಬೇಗನೆ ಔಟಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸೋಲಿಗೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಸಿಎಸ್​ಕೆ ಗೆಲುವಿನ ಖಾತೆ ತೆರೆಯಲಿದೆ ಎಂಬ ವಿಶ್ವಾಸವಿದೆ ರುತುರಾಜ್ ಗಾಯಕ್ವಾಡ್ ತಿಳಿಸಿದ್ದಾರೆ.

RCB vs CSK ಮುಖ್ಯಾಂಶಗಳು:

  • RCB ಅಬ್ಬರ: ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ, ಟಿಮ್ ಡೇವಿಡ್ (70*) ಮತ್ತು ರಜತ್ ಪಾಟಿದಾರ್ (48*) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್​ಗಳಲ್ಲಿ  250 ರನ್‌ಗಳ ಬೃಹತ್ ಮೊತ್ತ ಪೇರಿಸಿತು.
  • CSK ವಿಫಲ: 251 ರನ್​ಗಳ ಗುರಿ ಬೆನ್ನತ್ತಿದ ಸಿಎಸ್​ಕೆ ತಂಡವು 19.4 ಓವರ್​ಗಳಲ್ಲಿ 207 ರನ್​​ಗಳಿಗೆ ಆಲೌಟ್ ಆಗಿದ್ದರು.
  • ಗಾಯಕ್ವಾಡ್ ವೈಫಲ್ಯ: 251 ರನ್‌ಗಳ ಗುರಿ ಬೆನ್ನಟ್ಟಿದ ಸಿಎಸ್‌ಕೆ ಪರ ನಾಯಕ ರುತುರಾಜ್ ಗಾಯಕ್ವಾಡ್ ಕೇವಲ 7 ರನ್ ಗಳಿಸಿ ಔಟ್ ಆಗಿದ್ದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತು.

ಸತತ ಸೋಲು:

ಇದು 2026ರ ಸೀಸನ್‌ನಲ್ಲಿ ಸಿಎಸ್‌ಕೆ ತಂಡಕ್ಕೆ ಎದುರಾದ ಸತತ ಮೂರನೇ ಸೋಲಾಗಿದೆ. ರುತುರಾಜ್ ನಾಯಕತ್ವದಲ್ಲಿ ತಂಡವು ಕಳೆದ ಸೀಸನ್‌ನಿಂದ ಸೇರಿ ಒಟ್ಟು ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ.

ಸೋಲಿಗೆ ಕಾರಣವಾದ ಅಂಶಗಳು:

ಸಿಎಸ್​ಕೆ ತಂಡದ ಬ್ಯಾಟಿಂಗ್ ವೈಫಲ್ಯದ ಜೊತೆಗೆ, ವಿರಾಟ್ ಕೊಹ್ಲಿ ಅವರಿಗೆ ನೀಡಿದ ಜೀವದಾನ ಮತ್ತು ನೋ-ಬಾಲ್‌ಗಳ ಮೂಲಕ ಎದುರಾಳಿ ತಂಡಕ್ಕೆ ಸಿಕ್ಕ ಅವಕಾಶಗಳು ಸೋಲಿಗೆ ಮುಖ್ಯ ಕಾರಣ ಎಂದು ರುತುರಾಜ್ ಗಾಯಕ್ವಾಡ್ ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ: ಕೈ ಸನ್ನೆಯೊಂದಿಗೆ ​ವಿಶ್ಲೇಷಣೆ… ಬಿದ್ದು ಬಿದ್ದು ನಕ್ಕ RCB ಆಟಗಾರರು

ಇತ್ತ ಸರ್ಫರಾಝ್ ಖಾನ್, ಪ್ರಶಾಂತ್ ವೀರ್ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್​ ತಂಡವು ಮುಂದಿನ ಪಂದ್ಯಗಳಲ್ಲಿ ಪುಟಿದೇಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!