
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ರ ಆರಂಭದಲ್ಲೇ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವು ಬ್ಯಾಕ್ ಟು ಬ್ಯಾಕ್ ಸೋಲನುಭವಿಸಿದೆ. ಅದರಲ್ಲೂ ತನ್ನ ಬದ್ಧವೈರಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಸಿಎಸ್‌ಕೆ ಪಡೆ ಮಕಾಡೆ ಮಲಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಸಿಎಸ್‌ಕೆ ತಂಡದ ನಾಯಕ ರುತುರಾಜ್ ಗಾಯಕ್ವಾಡ್ ಬೌಲಿಂಗ್ ಆಯ್ದುಕೊಂಡಿದ್ದರು.
ಅತ್ತ ಟಾಸ್ ಗೆದ್ದಿದ್ದರಿಂದ ಸಿಎಸ್‌ಕೆ ತಂಡವು ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿತ್ತು. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಂಡಿಗರು ಇಡೀ ಪಂದ್ಯದ ಚಿತ್ರಣವನ್ನೇ ಬದಲಿಸಿದ್ದರು. ಅಲ್ಲದೆ 20 ಓವರ್ಗಳಲ್ಲಿ ಬರೋಬ್ಬರಿ 250 ರನ್ ಬಾರಿಸಿ ಆರ್‌ಸಿಬಿ ಹೊಸ ಇತಿಹಾಸ ನಿರ್ಮಿಸಿದ್ದರು.
ಈ ಗುರಿಯನ್ನು ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ ತಂಡವು 19.4 ಓವರ್ಗಳಲ್ಲಿ 207 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಸಿಎಸ್‌ಕೆ ತಂಡವು 43 ರನ್‌ಗಳ ಅಂತರದಿಂದ ಸೋಲೊಪ್ಪಿಕೊಂಡಿತು.
ಈ ಸೋಲಿನ ಬಳಿಕ ಮಾತನಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ರುತುರಾಜ್ ಗಾಯಕ್ವಾಡ್, “ಇಂದಿನ ಸೋಲಿಗೆ ಖಂಡಿತವಾಗಿಯೂ ನಾನೇ ಕಾರಣ. ನಾನು ಕ್ರೀಸ್‌ನಲ್ಲಿ ಹೆಚ್ಚು ಸಮಯ ನಿಂತು ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದರೆ ಫಲಿತಾಂಶ ಬೇರೆಯೇ ಇರುತ್ತಿತ್ತು. ಆರಂಭದಲ್ಲೇ ವಿಕೆಟ್ ಒಪ್ಪಿಸಿದ್ದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು,” ಎಂದು ಒಪ್ಪಿಕೊಂಡಿದ್ದಾರೆ.
ಒಂದು ವೇಳೆ ನಾನು ಕ್ರೀಸ್‌ನಲ್ಲಿ ಹೆಚ್ಚು ಸಮಯ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗಿರುತ್ತಿತ್ತು. ನಾನು ಬೇಗನೆ ಔಟಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸೋಲಿಗೆ ಕಾರಣವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದಾಗ್ಯೂ ಮುಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಸಿಎಸ್‌ಕೆ ಗೆಲುವಿನ ಖಾತೆ ತೆರೆಯಲಿದೆ ಎಂಬ ವಿಶ್ವಾಸವಿದೆ ರುತುರಾಜ್ ಗಾಯಕ್ವಾಡ್ ತಿಳಿಸಿದ್ದಾರೆ.
ಇದು 2026ರ ಸೀಸನ್‌ನಲ್ಲಿ ಸಿಎಸ್‌ಕೆ ತಂಡಕ್ಕೆ ಎದುರಾದ ಸತತ ಮೂರನೇ ಸೋಲಾಗಿದೆ. ರುತುರಾಜ್ ನಾಯಕತ್ವದಲ್ಲಿ ತಂಡವು ಕಳೆದ ಸೀಸನ್‌ನಿಂದ ಸೇರಿ ಒಟ್ಟು ಏಳು ಪಂದ್ಯಗಳಲ್ಲಿ ಸೋಲು ಕಂಡಿದೆ.
ಸಿಎಸ್‌ಕೆ ತಂಡದ ಬ್ಯಾಟಿಂಗ್ ವೈಫಲ್ಯದ ಜೊತೆಗೆ, ವಿರಾಟ್ ಕೊಹ್ಲಿ ಅವರಿಗೆ ನೀಡಿದ ಜೀವದಾನ ಮತ್ತು ನೋ-ಬಾಲ್‌ಗಳ ಮೂಲಕ ಎದುರಾಳಿ ತಂಡಕ್ಕೆ ಸಿಕ್ಕ ಅವಕಾಶಗಳು ಸೋಲಿಗೆ ಮುಖ್ಯ ಕಾರಣ ಎಂದು ರುತುರಾಜ್ ಗಾಯಕ್ವಾಡ್ ವಿಶ್ಲೇಷಿಸಿದ್ದಾರೆ.
ಇದನ್ನೂ ಓದಿ: ಕೈ ಸನ್ನೆಯೊಂದಿಗೆ ವಿಶ್ಲೇಷಣೆ… ಬಿದ್ದು ಬಿದ್ದು ನಕ್ಕ RCB ಆಟಗಾರರು
ಇತ್ತ ಸರ್ಫರಾಝ್ ಖಾನ್, ಪ್ರಶಾಂತ್ ವೀರ್ ಹೋರಾಟ ನಡೆಸಿದರೂ ತಂಡವನ್ನು ಗೆಲುವಿನ ದಡ ಸೇರಿಸಲು ಸಾಧ್ಯವಾಗಲಿಲ್ಲ. ಇದಾಗ್ಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ ಪಂದ್ಯಗಳಲ್ಲಿ ಪುಟಿದೇಳಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.