AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs DC: ಡೆಲ್ಲಿ ಎದುರು 20 ರನ್ ಗಡಿ ದಾಟದ ಆರ್​​ಸಿಬಿಯ 8 ಬ್ಯಾಟರ್ಸ್

RCB vs DC IPL 2026: ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ 2026 ರ 26ನೇ ಪಂದ್ಯದಲ್ಲಿ, ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 175 ರನ್ ಗಳಿಸಿತು. ಫಿಲ್ ಸಾಲ್ಟ್ 63 ರನ್‌ಗಳ ಭರ್ಜರಿ ಅರ್ಧಶತಕ ಗಳಿಸಿದರೂ, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್ ಸೇರಿದಂತೆ ಉಳಿದ ಬ್ಯಾಟ್ಸ್‌ಮನ್‌ಗಳು ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಡೆಲ್ಲಿ ಬೌಲರ್‌ಗಳು ಆರ್‌ಸಿಬಿ ಬ್ಯಾಟಿಂಗ್‌ ಅನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು.

RCB vs DC: ಡೆಲ್ಲಿ ಎದುರು 20 ರನ್ ಗಡಿ ದಾಟದ ಆರ್​​ಸಿಬಿಯ 8 ಬ್ಯಾಟರ್ಸ್
Rcb
ಪೃಥ್ವಿಶಂಕರ
|

Updated on:Apr 18, 2026 | 5:42 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಐಪಿಎಲ್ 2026 (IPL 2026) ರ 26ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿತ್ತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್​ಗಳನ್ನು ಕಳೆದುಕೊಂಡು ಕೇವಲ 175 ರನ್ ಕಲೆಹಾಕಿತು. ಆರ್​​ಸಿಬಿ ಪರ ಇಬ್ಬರು ಬ್ಯಾಟ್ಸ್‌ಮನ್​ಗಳನ್ನು ಹೊರತುಪಡಿಸಿ ಉಳಿದ 8 ಬ್ಯಾಟ್ಸ್‌ಮನ್​ಗಳಿಗೆ 20 ರನ್​ಗಳ ಗಡಿ ದಾಟಲು ಸಾಧ್ಯವಾಗಲಿಲ್ಲ. ಇತ್ತ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಆರ್​ಸಿಬಿ ಬ್ಯಾಟರ್​ಗಳನ್ನು ಕಟ್ಟಿಹಾಕುವಲ್ಲಿ ಡೆಲ್ಲಿ ಬೌಲರ್ಸ್​ಗಳು ಯಶಸ್ವಿಯಾದರು. ಇದರೊಂದಿಗೆ ಆರ್​ಸಿಬಿ ಈ ಆವೃತ್ತಿಯಲ್ಲಿ ಮೊದಲು ಬ್ಯಾಟಿಂಗ್‌ ಮಾಡಿ 200 ರನ್​ಗಳ ಗಡಿ ದಾಟದೆ ಇರುವುದು ಇದೇ ಮೊದಲ ಬಾರಿ.

ಆರ್​ಸಿಬಿಗೆ ಉತ್ತಮ ಆರಂಭ

ಎಂದಿನಂತೆ ಈ ಪಂದ್ಯದಲ್ಲೂ ಆರ್​ಸಿಬಿಗೆ ಉತ್ತಮ ಆರಂಭ ಸಿಕ್ಕಿತು. ಫಿಲ್ ಸಾಲ್ಟ್ ಹಾಗೂ ವಿರಾಟ್ ಕೊಹ್ಲಿ ಜೋಡಿ ಮೊದಲ ವಿಕೆಟ್​ಗೆ 52 ರನ್​ಗಳ ಜೊತೆಯಾಟ ನೀಡಿದರು. ಆದರೆ ವಿರಾಟ್ ಕೊಹ್ಲಿಯ ವಿಕೆಟ್ ಪತನದೊಂದಿಗೆ ಈ ಜೊತೆಯಾಟ ಮುರಿದುಬಿತ್ತು. ಕೊಹ್ಲಿ 19 ರನ್​ಗಳಿಸಿ ಪೆವಿಲಿಯನ್ ಸೇರಿಕೊಂಡರು. ಕೊಹ್ಲಿ ಬಳಿಕ ಬಂದ ದೇವದತ್ ಪಡಿಕ್ಕಲ್ ಹಾಗೂ ನಾಯಕ ರಜತ್ ಪಾಟಿದರ್​ಗೆ ಈ ಪಂದ್ಯದಲ್ಲಿ ಹೆಚ್ಚಿನದನ್ನು ಮಾಡಲು ಸಾಧ್ಯವಾಗಲಿಲ್ಲ.

ಕೈಕೊಟ್ಟ ಮಧ್ಯಮ ಕ್ರಮಾಂಕ

ತವರಿನಲ್ಲಿ ಆಡುತ್ತಿದ್ದ ಪಡಿಕ್ಕಲ್ ಕೇವಲ 18 ರನ್​​ಗಳಿಗೆ ಸುಸ್ತಾದರೆ, ನಾಯಕ ರಜತ್ ಪಾಟಿದರ್ ಕೇವಲ 8 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಆದಾಗ್ಯೂ ಆರಂಭಿಕರಾಗಿ ಕಣಕ್ಕಿಳಿದಿದ್ದ ಸಾಲ್ಟ್ ತನ್ನ ಎಂದಿನ ಆಟವನ್ನು ಮುಂದುವರೆಸಿ ಸತತ ಎರಡನೇ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ ಇನ್ನಿಂಗ್ಸ್​ನಲ್ಲಿ 38 ಎಸೆತಗಳನ್ನು ಎದುರಿಸಿದ ಸಾಲ್ಟ್ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ ಅತ್ಯಧಿಕ 63 ರನ್​ಗಳ ಕೊಡುಗೆ ನೀಡಿದರು.

RCB vs DC IPL 2026 Live Score: ಡೆಲ್ಲಿಗೆ 176 ರನ್ ಗುರಿ ನೀಡಿದ ಆರ್​​ಸಿಬಿ

ಮ್ಯಾಜಿಕ್ ಮಾಡಿದ ಡೆಲ್ಲಿ ಬೌಲರ್ಸ್​

ತಂಡದ ಪರ 20 ರನ್​ಗಳ ಗಡಿ ದಾಟಿದ ಎರಡನೇ ಬ್ಯಾಟ್ಸ್‌ಮನ್ ಎಂದರೆ ಟಿಮ್ ಡೇವಿಡ್. ಸಂಕಷ್ಟದ ಸಮಯದಲ್ಲಿ ಡೇವಿಡ್ 26 ರನ್​​ಗಳ ಇನ್ನಿಂಗ್ಸ್ ಆಡಿದರು. ಉಳಿದಂತೆ ಜಿತೇಶ್ ಶರ್ಮಾ 14 ರನ್​, ಶೆಫರ್ಡ್​ 1 ರನ್, ಕೃನಾಲ್ ಪಾಂಡ್ಯ 12 ರನ್ ಬಾರಿಸಿದರೆ, ರಸಿಕ್ 0 ಹಾಗೂ ಭುವನೇಶ್ವರ್ 3 ರನ್ ಬಾರಿಸಿ ಅಜೇಯರಾಗಿ ಉಳಿದರು. ಇತ್ತ ಡೆಲ್ಲಿ ಪರ ಲುಂಗಿ ಎಂಗಿಡಿ, ಕುಲ್ದೀಪ್ ಯಾದವ್ ಹಾಗೂ ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:34 pm, Sat, 18 April 26

Follow Us