WPL 2026: ಡೆಲ್ಲಿ ವಿರುದ್ಧ ಟಾಸ್ ಸೋತ ಆರ್ಸಿಬಿ; ಎರಡು ತಂಡಗಳಲ್ಲೂ ಬದಲಾವಣೆ
WPL 2026, RCB vs DC Match 15: 2026ರ WPLನ 15ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ಡೆಲ್ಲಿ ಮುಖಾಮುಖಿಯಾಗಿವೆ. ಅಜೇಯ ಆರ್ಸಿಬಿ ನೇರ ಫೈನಲ್‌ಗೆ ಅರ್ಹತೆ ಪಡೆಯಲು ನೋಡುತ್ತಿದೆ, ಡೆಲ್ಲಿ ಪ್ಲೇಆಫ್ ಆಸೆಗೆ ಗೆಲ್ಲಲೇಬೇಕು. ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ದುಕೊಂಡಿದ್ದು, ಇಬ್ಬನಿ ಪ್ರಭಾವದ ನಿರೀಕ್ಷೆಯಲ್ಲಿದೆ. ಎರಡೂ ತಂಡಗಳು ಪ್ರಮುಖ ಬದಲಾವಣೆಗಳೊಂದಿಗೆ ತಮ್ಮ ಆಡುವ 11ರ ಬಳಗ ಪ್ರಕಟಿಸಿವೆ.

2026 ರ ಮಹಿಳಾ ಪ್ರೀಮಿಯರ್ ಲೀಗ್ನ (Women’s Premier League) 15 ನೇ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (RCB vs DC) ನಡುವೆ ನಡೆಯುತ್ತಿದೆ. ವಡೋದರಾದ ಕೋಟಂಬಿಯಲ್ಲಿರುವ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದವನ್ನು ಸ್ಮೃತಿ ಮಂಧಾನ ನಾಯಕತ್ವದ ಆರ್ಸಿಬಿ ಗೆಲ್ಲುವ ಮೂಲಕ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯುವ ಇರಾದೆಯಲ್ಲಿದೆ. ಆರ್ಸಿಬಿ ತಂಡ ಟೂರ್ನಿಯಲ್ಲಿ ಇಲ್ಲಿಯವರೆಗೆ ಅಜೇಯವಾಗಿ ಉಳಿದಿದ್ದು, ಈಗಾಗಲೇ ಪ್ಲೇಆಫ್‌ಗೆ ಅರ್ಹತೆ ಪಡೆದಿದೆ. ಇತ್ತ ಡೆಲ್ಲಿ ಕ್ಯಾಪಿಟಲ್ಸ್ ಈ ಪಂದ್ಯವನ್ನು ಗೆದ್ದು ಪ್ಲೇಆಫ್ ಭರವಸೆಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಡಲಿದೆ.
ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್
ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ವಡೋದರಾದಲ್ಲಿ ಎರಡನೇ ಇನ್ನಿಂಗ್ಸ್ನಲ್ಲಿ ಬ್ಯಾಟಿಂಗ್ ಮಾಡುವ ತಂಡಕ್ಕೆ ಇಬ್ಬನಿಯ ನೆರವು ಸಿಗುವುದರಿಂದ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾಗಿ ಹೇಳಿದರು. ಇತ್ತ ಟಾಸ್ ಸೋತ ಸ್ಮೃತಿ ಕೂಡ ಟಾಸ್ ಗೆದ್ದಿದ್ದರೆ, ಬೌಲಿಂಗ್ ಮಾಡುವುದಾಗಿ ಹೇಳಿದರು. ಟಾಸ್ ಬಳಿಕ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಎರಡೂ ತಂಡಗಳಲ್ಲಿ ಬದಲಾವಣೆಗಳನ್ನು ಮಾಡಲಾಗಿದೆ.
🚨 Toss 🚨@DelhiCapitals have won the toss against @RCBTweets and elected to bowl first in Match 1⃣5⃣
Updates ▶️ https://t.co/LX37VtsnbS#TATAWPL | #KhelEmotionKa | #RCBvDC pic.twitter.com/RicUI7NUqK
— Women’s Premier League (WPL) (@wplt20) January 24, 2026
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಗ್ರೇಸ್ ಹ್ಯಾರಿಸ್, ಸ್ಮೃತಿ ಮಂಧಾನ (ನಾಯಕಿ), ಜಾರ್ಜಿಯಾ ವೋಲ್, ಗೌತಮಿ ನಾಯ್ಕ್, ರಿಚಾ ಘೋಷ್ (ವಿಕೆಟ್ ಕೀಪರ್), ನಡಿನ್ ಡಿ ಕ್ಲರ್ಕ್, ರಾಧಾ ಯಾದವ್, ಅರುಂಧತಿ ರೆಡ್ಡಿ (ಪ್ರೇಮಾ ರಾವತ್ ಬದಲಿಗೆ), ಶ್ರೇಯಾಂಕಾ ಪಾಟೀಲ್, ಸಯಾಲಿ ಸತ್ಘರೆ, ಮತ್ತು ಲಾರೆನ್ ಬೆಲ್.
ದೆಹಲಿ ಕ್ಯಾಪಿಟಲ್ಸ್ ಪ್ಲೇಯಿಂಗ್ XI: ಶಫಾಲಿ ವರ್ಮಾ, ಲಿಜೆಲ್ಲೆ ಲೀ (ವಿಕೆಟ್ ಕೀಪರ್), ಲಾರಾ ವೊಲ್ವಾರ್ಡ್ಟ್, ಜೆಮಿಮಾ ರಾಡ್ರಿಗಸ್ (ನಾಯಕಿ), ಮರಿಝನ್ನೆ ಕಪ್, ನಿಕಿ ಪ್ರಸಾದ್, ಚಿನೆಲ್ಲೆ ಹೆನ್ರಿ (ಲೂಸಿ ಹ್ಯಾಮಿಲ್ಟನ್ ಬದಲಿಗೆ), ಸ್ನೇಹ ರಾಣಾ, ಮಿನ್ನು ಮಣಿ (ದೀಯಾ ಯಾದವ್ ಬದಲಿಗೆ), ಶ್ರೀ ಚರಣಿ ಮತ್ತು ನಂದಿನಿ ಶರ್ಮಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 pm, Sat, 24 January 26
