RCB vs GT IPL 2025: ತವರಿನ ಮೊದಲ ಪಂದ್ಯದಲ್ಲಿ ಟಾಸ್ ಸೋತ ಆರ್ಸಿಬಿ; ಪ್ಲೇಯಿಂಗ್ 11 ಹೀಗಿದೆ
RCB vs GT IPL 2025 Match 14: ಐಪಿಎಲ್ 2025ರ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿವೆ. ಬೆಂಗಳೂರಿನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ, ಟಾಸ್ ಗೆದ್ದ ಗುಜರಾತ್ ತಂಡ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಎರಡೂ ತಂಡಗಳು ತಮ್ಮ ಆಡುವ ಹನ್ನೊಂದರ ಪಟ್ಟಿಯನ್ನು ಪ್ರಕಟಿಸಿದ್ದು, ಗುಜರಾತ್ ತಂಡದಲ್ಲಿ ಒಂದು ಬದಲಾವಣೆ ಕಂಡುಬಂದಿದೆ.

ಇಂದು ಐಪಿಎಲ್ 2025 ರ (IPL 2025) 14 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟನ್ಸ್ (RCB vs GT) ಮುಖಾಮುಖಿಯಾಗಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಸೀಸನ್ನ ಮೊದಲ ಪಂದ್ಯ ನಡೆಯುತ್ತಿದ್ದು, ತವರಿನ ಹೊರಗೆ ಸತತ ಎರಡು ಪಂದ್ಯಗಳನ್ನು ಆಡಿದ್ದ ಆರ್ಸಿಬಿ (RCB) ಇದೀಗ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಆಡುತ್ತಿದೆ. ಹೊಸ ನಾಯಕ ರಜತ್ ಪಟಿದಾರ್ ನಾಯಕತ್ವದಲ್ಲಿ, ಬೆಂಗಳೂರು ತಂಡವು ಸತತ ಎರಡು ಗೆಲುವುಗಳೊಂದಿಗೆ ಈ ಆವೃತ್ತಿಯನ್ನು ಅದ್ಭುತವಾಗಿ ಆರಂಭಿಸಿದೆ. ಇತ್ತ ಶುಭ್ಮನ್ ಗಿಲ್ ನೇತೃತ್ವದ ಗುಜರಾತ್ ತಂಡ ಮೊದಲ ಪಂದ್ಯದಲ್ಲಿ ಸೋತರೂ ಎರಡನೇ ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದೆ.
ಟಾಸ್ ಗೆದ್ದ ಗುಜರಾತ್
ಈ ಪಂದ್ಯದ ಟಾಸ್ ಕೂಡ ನಡೆದಿದ್ದು, ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ನಾಯಕ ಶುಭ್ಮನ್ ಗಿಲ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇದರರ್ಥ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲು ಬ್ಯಾಟಿಂಗ್ ಮಾಡಲಿದೆ. ಇದರ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದ್ದು, ಗುಜರಾತ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಈ ಪಂದ್ಯದಲ್ಲಿ ಕಗಿಸೊ ರಬಾಡ ಬದಲಿಗೆ ಅರ್ಷದ್ ಖಾನ್‌ಗೆ ನಾಯಕ ಶುಭ್ಮನ್ ಗಿಲ್ ಅವಕಾಶ ನೀಡಿದ್ದಾರೆ. ಇತ್ತ ತವರಿನಲ್ಲಿ ಮೊದಲ ಪಂದ್ಯ ಆಡುತ್ತಿರುವ ಆರ್ಸಿಬಿ, ಈ ಮುಂಚೆ ನಿರೀಕ್ಷಿಸಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡದೆ ಕಣಕ್ಕಿಳಿಯುತ್ತಿದೆ.
🚨 Toss 🚨@gujarat_titans elected to field against @RCBTweets
Updates ▶️ https://t.co/teSEWkWPWL #TATAIPL | #RCBvGT pic.twitter.com/zF2RIz9oS4
— IndianPremierLeague (@IPL) April 2, 2025
ಎರಡೂ ತಂಡಗಳ ಪ್ಲೇಯಿಂಗ್-11
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹ್ಯಾಜಲ್‌ವುಡ್, ಯಶ್ ದಯಾಲ್.
ಇಂಪ್ಯಾಕ್ಟ್ ಪ್ಲೇಯರ್ಸ್: ಸುಯಾಶ್ ಶರ್ಮಾ, ರಸಿಖ್ ಸಲಾಂ, ಮನೋಜ್ ಭಾಂಡಗೆ, ಜೇಕಬ್ ಬೆಥೆಲ್, ಸ್ವಪ್ನಿಲ್ ಸಿಂಗ್.
ಗುಜರಾತ್ ಟೈಟನ್ಸ್: ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಅರ್ಷದ್ ಖಾನ್, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ.
TOSS UPDATE – RCB VS GT GT WON THE TOSS AND ELECTED TO BOWL FIRST “Get ready for the ultimate clash at the Chinnaswamy Stadium in Bengaluru! #RCBvsGT #IPL2025 #BengaluruBattles #ChinnaswamyStadium #RCBfans #GTsupporters #ViratKohli #RajatPatidar #ShubhmanGill#IndianPremierLeague pic.twitter.com/PkKUz5Jp95
— CricketGram (@cricket_gram) April 2, 2025
ಇಂಪ್ಯಾಕ್ಟ್ ಪ್ಲೇಯರ್ಸ್: ಶೆರ್ಫೇನ್ ರುದರ್ಫೋರ್ಡ್, ಗ್ಲೆನ್ ಫಿಲಿಪ್ಸ್, ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ವಾಷಿಂಗ್ಟನ್ ಸುಂದರ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:22 pm, Wed, 2 April 25