IPL 2025: ಅಭಿಮಾನಿಗಳಿಗೆ ಸಿಹಿ ಸುದ್ದಿ; ಬೆಂಗಳೂರಿನಲ್ಲಿ ಆರ್​ಸಿಬಿ ಮುಂದಿನ ಪಂದ್ಯ, ಯಾರು ಎದುರಾಳಿ?

|

Updated on: Mar 29, 2025 | 6:44 PM

Royal Challengers Bengaluru Home Match: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಎರಡು ಸತತ ಗೆಲುವುಗಳೊಂದಿಗೆ 2025ರ ಐಪಿಎಲ್‌ನಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದೆ. ಈಗ ರಜತ್ ಪಡೆ ತನ್ನ ಮೂರನೇ ಪಂದ್ಯವನ್ನು ಗುಜರಾತ್ ಟೈಟಾನ್ಸ್‌ ವಿರುದ್ಧ ಬೆಂಗಳೂರಿನಲ್ಲಿ ಆಡಲಿದೆ. ಈ ಪಂದ್ಯದ ದಿನಾಂಕ, ಸಮಯ, ಸ್ಥಳ ಮತ್ತು ಪ್ರಸಾರ ವಿವರಗಳು ಇಲ್ಲಿವೆ.

IPL 2025: ಅಭಿಮಾನಿಗಳಿಗೆ ಸಿಹಿ ಸುದ್ದಿ; ಬೆಂಗಳೂರಿನಲ್ಲಿ ಆರ್​ಸಿಬಿ ಮುಂದಿನ ಪಂದ್ಯ, ಯಾರು ಎದುರಾಳಿ?
Rcb
Follow us on

ಸತತ ಎರಡು ಪಂದ್ಯಗಳನ್ನು ಗೆದ್ದು 2025 ರ ಐಪಿಎಲ್‌ನಲ್ಲಿ (IPL 2025) ಶುಭಾರಂಭ ಮಾಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇದೀಗ ತನ್ನ ತವರಿನತ್ತ ಪ್ರಯಾಣ ಬೆಳೆಸಿದೆ. ಆಡಿರುವ ಮೊದಲೆರಡು ಪಂದ್ಯಗಳನ್ನು ತವರಿನಿಂದ ಹೊರಗೆ ಆಡಿದ್ದ ಆರ್​ಸಿಬಿ, ಮೊದಲ ಪಂದ್ಯವನ್ನು ಕೆಕೆಆರ್ ವಿರುದ್ಧ ಅದರ ತವರು ನೆಲವಾದ ಕೋಲ್ಕತ್ತಾದಲ್ಲಿ ಆಡಿತ್ತು. ಆ ಬಳಿಕ ತನ್ನ ಎರಡನೇ ಪಂದ್ಯವನ್ನು ಸಿಎಸ್​ಕೆ ವಿರುದ್ಧ ಅದರ ತವರು ನೆಲವಾದ ಚೆನ್ನೈನಲ್ಲಿ ಆಡಿತ್ತು. ಇದೀಗ ತನ್ನ ಮೂರನೇ ಪಂದ್ಯಕ್ಕೆ ಸಜ್ಜಾಗಿರುವ ಆರ್​ಸಿಬಿ ತನ್ನ ತವರು ನೆಲವಾದ ಬೆಂಗಳೂರಿನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಯಾವಾಗ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಏಪ್ರಿಲ್ 2 ರಂದು ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಇದನ್ನೂ ಓದಿ
ಸೋಲಿಗೆ ಪಿಚ್ ಕಡೆ ಬೆರಳು ತೋರಿಸಿದ ಸಿಎಸ್​ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್
ಪಂದ್ಯದ ವೇಳೆ ಖಲೀಲ್ ಅಧಿಕಪ್ರಸಂಗತನ; ವಾರ್ನಿಂಗ್ ಕೊಟ್ಟ ಕೊಹ್ಲಿ
ಆರ್​ಸಿಬಿ ಫ್ಯಾನ್ಸ್ ಹಾವಳಿಗೆ 1 ವಾರ ಸೋಶಿಯಲ್ ಮೀಡಿಯಾಗೆ ರಾಯುಡು ಗುಡ್​ಬೈ
ಸಿಎಸ್​ಕೆಗೆ ಅವರ ನೆಲದಲ್ಲೇ ಅಟ್ಟಾಡಿಸಿ ಹೊಡೆದ ಆರ್​ಸಿಬಿ

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಎಷ್ಟು ಗಂಟೆಗೆ ಆರಂಭ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಟಾಸ್ 7 ಗಂಟೆಗೆ ನಡೆಯಲಿದೆ.

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯ ಯಾವ ಚಾನೆಲ್​ನಲ್ಲಿ ನೇರಪ್ರಸಾರ?

ಆರ್​ಸಿಬಿ ಹಾಗೂ ಗುಜರಾತ್ ನಡುವಿನ ಐಪಿಎಲ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದಾಗಿದೆ. ಹಾಗೆಯೇ ಜಿಯೋ ಹಾಟ್​ಸ್ಟಾರ್​ನಲ್ಲಿ ಲೈವ್ ಸ್ಟ್ರೀಮಿಂಗ್​ ವೀಕ್ಷಿಸಬಹುದು.

IPL 2025: ಆರ್​ಸಿಬಿ ವಿರುದ್ಧದ ಸೋಲಿಗೆ ವಿಚಿತ್ರ ನೆಪ ಹೇಳಿದ ಸಿಎಸ್​ಕೆ ಕೋಚ್ ಸ್ಟೀಫನ್ ಫ್ಲೆಮಿಂಗ್

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ರಸಿಕ್ ಸಲಾಂ, ಸುಯಾಶ್ ಶರ್ಮಾ, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಮನೋಜ್ ಭಾಂಡಗೆ, ಜಾಕೋಬ್ ಬೆಥೆಲ್, ದೇವದತ್ ಪಡಿಕಲ್, ಸ್ವಸ್ತಿಕ್ ಚಿಖರ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.

ಗುಜರಾತ್ ಟೈಟನ್ಸ್: ಜೋಸ್ ಬಟ್ಲರ್ (ವಿಕೆಟ್ ಕೀಪರ್), ಶುಭ್​ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಗ್ಲೆನ್ ಫಿಲಿಪ್ಸ್, ಶಾರುಖ್ ಖಾನ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಇಶಾಂತ್ ಶರ್ಮಾ, ಜಯಂತ್ ಯಾದವ್, ಮಹಿಪಾಲ್ ಲೊಮ್ರೋರ್, ಕರೀಂ ಜನತ್, ಕುಲ್ವಂತ್ ಖೆಜ್ರೋಲಿಯಾ, ಅನುಜ್ ರಾವತ್, ಜೆರಾಲ್ಡ್ ಕೋಟ್ಜಿ, ಶೆರ್ಫಾನೆ ರುದರ್‌ಫೋರ್ಡ್, ಮಾನವ್ ಸುತಾರ್, ಕುಮಾರ್ ಕುಶಾಗ್ರಾ, ಅರ್ಷದ್ ಖಾನ್, ಗುರ್ನೂರ್ ಬ್ರಾರ್, ನಿಶಾಂತ್ ಸಿಂಧು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ