
ಐಪಿಎಲ್ 17ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹ್ಯಾಟ್ರಿಕ್ ಗೆಲುವು ಸಾಧಿಸಿದೆ. ಗುಜರಾತ್ ಟೈಟಾನ್ಸ್ ವಿರುದ್ಧ ಆರ್‌ಸಿಬಿ 4 ವಿಕೆಟ್‌ಗಳ ಜಯ ಸಾಧಿಸಿದೆ. ಗುಜರಾತ್ ಗೆಲುವಿಗೆ 148 ರನ್ ಗಳಿಂದ ಆರ್‌ಸಿಬಿ ಸವಾಲು ಹಾಕಿತು. ಆರ್‌ಸಿಬಿ 13.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು ಈ ಸವಾಲನ್ನು ಪೂರ್ಣಗೊಳಿಸಿತು. ಈ ಗೆಲುವಿನೊಂದಿಗೆ ಆರ್‌ಸಿಬಿ ಪ್ಲೇಆಫ್‌ನಲ್ಲಿ ತನ್ನ ಸವಾಲನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಈ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 4 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ತಂಡ 13.4 ಓವರ್‌ಗಳಲ್ಲಿ 6 ವಿಕೆಟ್ ಕಳೆದುಕೊಂಡು 152 ರನ್ ಗಳಿಸಿತು. ತಂಡದ ಪರ ನಾಯಕ ಫಾಫ್ ಡು ಪ್ಲೆಸಿಸ್ 62 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು.
ವಿರಾಟ್ ಕೊಹ್ಲಿ ಕೂಡ 42 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದ್ದಾರೆ. ದಿನೇಶ್ ಕಾರ್ತಿಕ್ ಅವರೊಂದಿಗೆ ಸ್ವಪ್ನಿಲ್ ಸಿಂಗ್ ಕ್ರೀಸ್‌ಗೆ ಬಂದಿದ್ದಾರೆ. ತಂಡದ ಸ್ಕೋರ್ 6 ವಿಕೆಟ್ ನಷ್ಟಕ್ಕೆ 117 ರನ್ ಆಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ 4 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ ಜೊತೆ ಕ್ಯಾಮರೂನ್ ಗ್ರೀನ್ ಕ್ರೀಸ್‌ಗೆ ಬಂದಿದ್ದಾರೆ. ತಂಡದ ಸ್ಕೋರ್ 4 ವಿಕೆಟ್ ನಷ್ಟಕ್ಕೆ 108 ರನ್ ಆಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟ್ಸ್‌ಮನ್ ವಿಲ್ ಜ್ಯಾಕ್ಸ್ 1 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ್ದಾರೆ. ರಜತ್ ಪಾಟಿದಾರ್ ಕ್ರೀಸ್‌ಗೆ ಬಂದಿದ್ದಾರೆ. ತಂಡದ ಸ್ಕೋರ್ 2 ವಿಕೆಟ್ ನಷ್ಟಕ್ಕೆ 100 ರನ್ ಆಗಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ 62 ರನ್ ಗಳಿಸಿ ಪೆವಿಲಿಯನ್‌ಗೆ ಮರಳಿದ್ದಾರೆ. ಪವರ್‌ಪ್ಲೇ ಅಂತ್ಯಕ್ಕೆ ತಂಡ 1 ವಿಕೆಟ್ ನಷ್ಟಕ್ಕೆ 92 ರನ್ ಗಳಿಸಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 84 ಎಸೆತಗಳಲ್ಲಿ 56 ರನ್ ಅಗತ್ಯವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಇಬ್ಬರೂ ಬ್ಯಾಟ್ಸ್‌ಮನ್‌ಗಳು 64 ರನ್‌ಗಳ ಜೊತೆಯಾಟ ಆಡಿದ್ದಾರೆ. ತಂಡ 4 ಓವರ್‌ಗಳಲ್ಲಿ 64 ರನ್ ಗಳಿಸಿದೆ. ತಂಡದ ಗೆಲುವಿಗೆ 96 ಎಸೆತಗಳಲ್ಲಿ 84 ರನ್‌ಗಳ ಅಗತ್ಯವಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2 ಓವರ್‌ಗಳಲ್ಲಿ 34 ರನ್ ಗಳಿಸಿದೆ. ವಿರಾಟ್ ಕೊಹ್ಲಿ 13 ರನ್ ಹಾಗೂ ಫಾಫ್ ಡು ಪ್ಲೆಸಿಸ್ 21 ರನ್ ಗಳಿಸಿ ಆಡುತ್ತಿದ್ದಾರೆ.
ಗುಜರಾತ್ ಟೈಟಾನ್ಸ್ ತಂಡ 19.3 ಓವರ್ ಗಳಲ್ಲಿ 147 ರನ್ ಗಳಿಸಿ ಆಲೌಟ್ ಆಯಿತು. ತಂಡದ ಪರವಾಗಿ ಶಾರುಖ್ ಖಾನ್ 37 ರನ್‌ಗಳ ಇನಿಂಗ್ಸ್ ಆಡಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಗೆಲುವಿಗೆ 120 ಎಸೆತಗಳಲ್ಲಿ 148 ರನ್ ಅಗತ್ಯವಿದೆ.
ಗುಜರಾತ್ ಟೈಟಾನ್ಸ್ ಬ್ಯಾಟ್ಸ್‌ಮನ್ ರಾಹುಲ್ ತೆವಾಟಿಯಾ 35 ರನ್ ಗಳಿಸಿ ಔಟಾದರು. ಮಾನವ್ ಸುತಾರ್ ಕ್ರೀಸ್‌ಗೆ ಬಂದಿದ್ದಾರೆ. ತಂಡದ ಸ್ಕೋರ್ 7 ವಿಕೆಟ್ ನಷ್ಟಕ್ಕೆ 141 ರನ್ ಆಗಿದೆ.
ಗುಜರಾತ್ ಟೈಟಾನ್ಸ್ ತಂಡ 16ನೇ ಓವರ್ ಅಂತ್ಯಕ್ಕೆ ಒಟ್ಟು 121 ರನ್ ಗಳಿಸಿದೆ.
ಗುಜರಾತ್ 5ನೇ ವಿಕೆಟ್ ಕಳೆದುಕೊಂಡಿದೆ. ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ಶಾರುಖ್ ಖಾನ್ ರನೌಟ್ಗೆ ಬಲಿಯಾಗಿದ್ದಾರೆ.
ಗುಜರಾತ್ 87/5
ಗುಜರಾತ್ 4ನೇ ವಿಕೆಟ್ ಕಳೆದುಕೊಂಡಿದೆ. ಕಿಲ್ಲರ್ ಮಿಲ್ಲರ್ 30 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದ್ದಾರೆ.
ಗುಜರಾತ್ ಇನ್ನಿಂಗ್ಸ್ನ ಮೊದಲ 10 ಓವರ್ಗಳು ಮುಗಿದಿವೆ. ಈ 10 ಓವರ್‌ಗಳಲ್ಲಿ ತಂಡ 3 ವಿಕೆಟ್ ಕಳೆದುಕೊಂಡು 61 ರನ್ ಕಲೆಹಾಕಿದೆ.
ಆರ್‌ಸಿಬಿ ವಿರುದ್ಧ ಮೊದಲ ಆರು ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 23 ರನ್ ಕಲೆಹಾಕುವ ಮೂಲಕ ಗುಜರಾತ್, ಪವರ್ ಪ್ಲೇನಲ್ಲಿ ಅತಿ ಕಡಿಮೆ ರನ್ ಬಾರಿಸಿದ ಬೇಡದ ದಾಖಲೆ ಬರೆದಿದೆ.
ಗುಜರಾತ್ ಪ್ರಮುಖ ವಿಕೆಟ್ ಕಳೆದುಕೊಂಡಿದೆ. ಸ್ಟಾರ್ ಬ್ಯಾಟರ್ ಸಾಯಿ ಸುದರ್ಶನ್ ಔಟಾಗಿದ್ದಾರೆ.
ಗುಜರಾತ್ 19/3
ಗುಜರಾತ್ 2ನೇ ವಿಕೆಟ್ ಕಳೆದುಕೊಂಡಿದೆ. ನಾಯಕ ಶುಭ್ಮನ್ ಗಿಲ್ ಕೇವಲ 2 ರನ್ಗಳಿಗೆ ಇನ್ನಿಂಗ್ಸ್ ಮುಗಿಸಿದರು.
ಗುಜರಾತ್ 14/2
ಗುಜರಾತ್ ಮೊದಲ ವಿಕೆಟ್ ಪತನವಾಗಿದೆ. ಆರಂಭಿಕ ವೃದ್ಧಿಮಾನ್ ಸಾಹ 1 ರನ್ಗೆ ಇನ್ನಿಂಗ್ಸ್ ಮುಗಿಸಿದರು.
ಗುಜರಾತ್ 1/1
ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್ (ನಾಯಕ), ವಿಲ್ ಜ್ಯಾಕ್ಸ್, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಕರ್ಣ್ ಶರ್ಮಾ, ಸ್ವಪ್ನಿಲ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ವಿಜಯಕುಮಾರ್ ವಿಶಾಕ್.
ಇಂಪ್ಯಾಕ್ಟ್ ಪ್ಲೇಯರ್: ಅನುಜ್ ರಾವತ್, ಮಹಿಪಾಲ್ ಲೊಮ್ರೋರ್, ಆಕಾಶ್ ದೀಪ್, ರಜತ್ ಪಾಟಿದಾರ್, ಸುಯ್ಯಶ್ ಪ್ರಭುದೇಸಾಯಿ.
ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಶುಭ್ಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಡೇವಿಡ್ ಮಿಲ್ಲರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮಾನವ್ ಸುತಾರ್, ನೂರ್ ಅಹ್ಮದ್, ಮೋಹಿತ್ ಶರ್ಮಾ, ಜೋಶುವಾ ಲಿಟಲ್.
ಇಂಪ್ಯಾಕ್ಟ್ ಪ್ಲೇಯರ್: ಸಂದೀಪ್ ವಾರಿಯರ್, ವಿಜಯ್ ಶಂಕರ್, ಜಯಂತ್ ಯಾದವ್, ನಲ್ಕಂಡೆ, ಬಿ.ಆರ್.ಶರತ್.
ಟಾಸ್ ಗೆದ್ದ ಆರ್‌ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಆರ್‌ಸಿಬಿ 10 ಪಂದ್ಯಗಳಿಂದ ಆರು ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದ್ದರೆ, ಗುಜರಾತ್ ಟೈಟಾನ್ಸ್ 10 ಪಂದ್ಯಗಳಿಂದ ಎಂಟು ಅಂಕಗಳನ್ನು ಗಳಿಸಿ ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿದೆ.
Published On - 6:18 pm, Sat, 4 May 24