
ಐಪಿಎಲ್ 2026 (IPL 2026) ರ 67ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ರನ್ಗಳಿಂದ ಸೋತ ಆರ್ಸಿಬಿ (SRH vs RCB) ಸೋಲಿನೊಂದಿಗೆ ಲೀಗ್ ಹಂತವನ್ನು ಮುಗಿಸಿತು. ಈ ಸೋಲಿನ ಹೊರತಾಗಿಯೂ ರಜತ್ ಪಾಟಿದರ್ ಪಡೆ ಅಂಕಪಟ್ಟಿಯಲ್ಲಿ ತನ್ನ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ಮೂಲಕ ಆರ್ಸಿಬಿ ಕ್ವಾಲಿಫೈಯರ್ 1 ಆಡುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿತು. ಈ ಮೂಲಕ ಸತತ ಎರಡನೇ ಆವೃತ್ತಿಯಲ್ಲಿ ಆರ್ಸಿಬಿ ಕ್ವಾಲಿಫೈಯರ್ 1 ಆಡಲಿದೆ. ಕಳೆದ ಆವೃತ್ತಿಯಲ್ಲಿ ಎರಡನೇ ಸ್ಥಾನ ಪಡೆದು ಕ್ವಾಲಿಫೈಯರ್ 1ರಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಆರ್ಸಿಬಿ ಫೈನಲ್ಗೇರಿತ್ತು. ಈ ಬಾರಿ ಆರ್ಸಿಬಿಗೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟಾನ್ಸ್ (GT) ತಂಡ ಎದುರಾಗಲಿದೆ.
ಲೀಗ್ ಹಂತದಲ್ಲಿ ಆರ್ಸಿಬಿ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿತು. +0.783 ನೆಟ್ ರನ್ರೇಟ್ ಹೊಂದಿರುವ ಆರ್ಸಿಬಿ ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಪಡೆದುಕೊಂಡಿದೆ. ಇತ್ತ ಎರಡನೇ ಸ್ಥಾನದಲ್ಲಿರುವ ಗುಜರಾತ್ ಟೈಟಾನ್ಸ್ ಕೂಡ ಆಡಿದ 14 ಪಂದ್ಯಗಳಲ್ಲಿ 9 ಗೆಲುವು ಹಾಗೂ 5 ಸೋಲುಗಳೊಂದಿಗೆ 18 ಅಂಕಗಳನ್ನು ಕಲೆಹಾಕಿದೆ. ಆದರೆ ಗುಜರಾತ್ ತಂಡದ ನೆಟ್ ರನ್ರೇಟ್ ಆರ್ಸಿಬಿಗಿಂತ ಕಡಿಮೆ ಅಂದರೆ +0.695 ಆಗಿರುವ ಕಾರಣ ಎರಡನೇ ಸ್ಥಾನವನ್ನು ಪಡೆದುಕೊಂಡಿತು.
ಇನ್ನು ಲೀಗ್ ಹಂತದಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಮೊದಲ ಮುಖಾಮುಖಿಯಲ್ಲಿ ಆರ್ಸಿಬಿ ಗೆದ್ದರೆ, ಎರಡನೇ ಮುಖಾಮುಖಿಯಲ್ಲಿ ಗುಜರಾತ್ ಗೆಲುವು ಸಾಧಿಸಿತ್ತು. ಹೀಗಾಗಿ ಮೂರನೇ ಮುಖಾಮುಖಿಯಲ್ಲಿ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ. ಉಭಯ ತಂಡಗಳು ಕ್ವಾಲಿಫೈಯರ್ 1 ಗೆ ಅರ್ಹತೆ ಪಡೆದಿರುವ ಕಾರಣ ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ಗೇರಿದರೆ, ಸೋತ ತಂಡ ಕ್ವಾಲಿಫೈಯರ್ 2 ಆಡಲಿದೆ. ಅಂದರೆ ಸೋತ ತಂಡಕ್ಕೆ ಫೈನಲ್ಗೇರಲು ಮತ್ತೊಂದು ಅವಕಾಶ ಸಿಗಲಿದೆ.
SRH vs RCB IPL 2026 Highlights: ಸನ್‌ರೈಸರ್ಸ್ ವಿರುದ್ಧ 55 ರನ್ಗಳಿಂದ ಸೋತ ಆರ್ಸಿಬಿ
ಆರ್ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಮೇ 26 ರ ಮಂಗಳವಾರದಂದು ನಡೆಯಲಿದೆ.
ಆರ್ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ, ಧರ್ಮಶಾಲಾದಲ್ಲಿ ನಡೆಯಲಿದೆ.
ಆರ್ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಟಾಸ್ 6:30ಕ್ಕೆ ನಡೆಯಲಿದೆ.
ಆರ್ಸಿಬಿ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 1 ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಹಾಗೆಯೇ ಮೊಬೈಲ್ ಅಥವಾ ಲ್ಯಾಪ್‌ಟಾಪ್‌ನಲ್ಲಿ ಪಂದ್ಯವನ್ನು ವೀಕ್ಷಿಸಲು ಇಷ್ಟಪಡುವ ವೀಕ್ಷಕರಿಗೆ, ಜಿಯೋ ಹಾಟ್‌ಸ್ಟಾರ್ ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಲಭ್ಯವಿರುತ್ತದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:49 pm, Fri, 22 May 26