IPL 2022: ವಾಟ್ ಎ ಕ್ಯಾಚ್: ಡೇವಿಡ್ ವಿಲ್ಲಿಯ ಅದ್ಭುತ ಕ್ಯಾಚ್
RCB vs KKR: ಡೇವಿಡ್ ವಿಲ್ಲಿಯ ಈ ಅದ್ಭುತ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದೆ. ಅಲ್ಲದೆ ಆರ್ಸಿಬಿ ಆಟಗಾರರ ಕ್ಷೇತ್ರರಕ್ಷಣೆಯ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಐಪಿಎಲ್ ಸೀಸನ್ 15 ನ ಆರನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ಉತ್ತಮ ಆರಂಭ ಪಡೆದಿದೆ. ಟಾಸ್ ಗೆದ್ದು ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದರು. ನಾಯಕನ ನಿರ್ಧಾರವನ್ನು ಸಮರ್ಥಿಸುವಂತೆ ಆರ್ಸಿಬಿ ಬೌಲರುಗಳು ಕೆಕೆಆರ್ ತಂಡಕ್ಕೆ ಆರಂಭಿಕ ಆಘಾತ ನೀಡಿದ್ದರು. ಪಂದ್ಯದ ನಾಲ್ಕನೇ ಓವರ್ನಲ್ಲಿ ವೆಂಕಟೇಶ್ ಅಯ್ಯರ್ ವಿಕೆಟ್ ಪಡೆಯುವ ಮೂಲಕ ಆಕಾಶ್ ದೀಪ್ ಆರ್ಸಿಬಿಗೆ ಮೊದಲ ಯಶಸ್ಸು ತಂದುಕೊಟ್ಟಿದ್ದರು. ಇದರ ಬೆನ್ನಲ್ಲೇ ಸಿರಾಜ್ ಅಜಿಂಕ್ಯ ರಹಾನೆ ಅವರನ್ನು ಪೆವಿಲಿಯನ್ಗೆ ಕಳುಹಿಸಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಎಡಗೈ ದಾಂಡಿಗ ನಿತೀಶ್ ರಾಣಾ ಆರಂಭದಿಂದಲೇ ಬಿರುಸಿನ ಆಟಕ್ಕೆ ಮುಂದಾಗಿದ್ದರು.
ಒಂದು ಫೋರ್ ಹಾಗೂ ಒಂದು ಸಿಕ್ಸ್ ಸಿಡಿಸುವ ಮೂಲಕ ಅಬ್ಬರಿಸಿದ ರಾಣಾ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು. ಅದರಂತೆ ಆಕಾಶ್ ದೀಪ್ ಎಸೆದ ಬೌನ್ಸರ್ ಎಸೆತಕ್ಕೆ ಭರ್ಜರಿ ಉತ್ತರ ನೀಡಿದ್ದರು. ಆದರೆ ಚೆಂಡು ಅಲ್ಲೇ ಆಕಾಶದತ್ತ ಚಿಮ್ಮಿತ್ತು. ಬೌಂಡರಿ ಲೈನ್ನಲ್ಲಿ ಶಹಬಾಜ್ ಅಹ್ಮದ್ ಓಡಿ ಬರುತ್ತಿದ್ದರೆ, ಇತ್ತ ಥರ್ಡಿ ಯಾರ್ಡ್ ಸರ್ಕಲ್ನಲ್ಲಿದ್ದ ಡೇವಿಡ್ ವಿಲ್ಲಿ ಹಿಮ್ಮುಖವಾಗಿ ಓಡಿ ಹೋಗಿ ಅಂತಿಮ ಹಂತದಲ್ಲಿ ಅದ್ಭುತವಾಗಿ ಕ್ಯಾಚ್ ಹಿಡಿಯುವ ಮೂಲಕ ಎಲ್ಲರನ್ನು ನಿಬ್ಬೆರಗಾಗಿಸಿದರು.
Akash Deep You’re rocking today. ?? #KKRvsRCB #RCBvKKR #akashdeep #siraj #FafDuPlessis #viratkholi #Kohli #Akash pic.twitter.com/aj0ncX7Yv6
— Ankit Kunwar (@TheAnkitKunwar) March 30, 2022
ಇದೀಗ ಡೇವಿಡ್ ವಿಲ್ಲಿಯ ಈ ಅದ್ಭುತ ಫೀಲ್ಡಿಂಗ್ ವಿಡಿಯೋ ವೈರಲ್ ಆಗಿದೆ. ಅಲ್ಲದೆ ಆರ್ಸಿಬಿ ಆಟಗಾರರ ಕ್ಷೇತ್ರರಕ್ಷಣೆಯ ಬಗ್ಗೆ ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಡೇವಿಡ್ ವಿಲ್ಲಿ ಹಿಡಿದ ಅದ್ಭುತ ಕ್ಯಾಚ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆಟದ XI) ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ದಿನೇಶ್ ಕಾರ್ತಿಕ್ (WK), ಶೆರ್ಫೇನ್ ರುದರ್‌ಫೋರ್ಡ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಡೇವಿಡ್ ವಿಲ್ಲಿ, ಹರ್ಷಲ್ ಪಟೇಲ್, ಆಕಾಶದೀಪ್, ಮೊಹಮ್ಮದ್ ಸಿರಾಜ್.
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI) ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ, ಶ್ರೇಯಸ್ ಅಯ್ಯರ್ (ಸಿ), ಸ್ಯಾಮ್ ಬಿಲ್ಲಿಂಗ್ಸ್, ಶೆಲ್ಡನ್ ಜಾಕ್ಸನ್ (ವಾಕ್), ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಇದನ್ನೂ ಓದಿ: IPL ಆಡಿದ್ದ 11 ಪಾಕಿಸ್ತಾನಿ ಆಟಗಾರರು ಯಾರು ಗೊತ್ತಾ?
ಇದನ್ನೂ ಓದಿ: IPL 2022: ಇವರೇ RCB ಪರ ಹ್ಯಾಟ್ರಿಕ್ ವಿಕೆಟ್ ಪಡೆದ ಮೂವರು ಬೌಲರುಗಳು




