RCB vs KKR: ಆರ್ಸಿಬಿ ಮುಂದಿನ ಪಂದ್ಯ ಕೂಡ ಬೆಂಗಳೂರಲ್ಲಿ: ಎದುರಾಳಿ ಯಾರು?, ಪಂದ್ಯ ಯಾವಾಗ?
Royal Challengers Bengaluru vs Kolkata Knight Riders, IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ ಖಾತೆ ತೆರೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇದೀಗ ತನ್ನ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಹಾಗಾದರೆ, ಆರ್‌ಸಿಬಿಯ ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ?, ಎಲ್ಲಿ ನಡೆಯಲಿದೆ?. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಐಪಿಎಲ್ 2024 ರ ಋತುವಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತನ್ನ ಖಾತೆಯನ್ನು ತೆರೆದಿದೆ. ಅದು ಕೂಡ ಅವರ ತವರು ನೆಲ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ. ಹೋಳಿ ದಿನದಂದು ನಡೆದ ಪಂದ್ಯದಲ್ಲಿ ಆರ್‌ಸಿಬಿಯ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ಬೌಲರ್‌ಗಳ ಬೆವರಿಳಿಸಿ ತಂಡವನ್ನು 4 ವಿಕೆಟ್‌ಗಳಿಂದ ಜಯಗಳಿಸಿದರು. 77 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ಕೊಹ್ಲಿ ಗೆಲುವಿನ ಸ್ಟಾರ್ ಆದರು. ದಿನೇಶ್ ಕಾರ್ತಿಕ್ ಕೇವಲ 10 ಎಸೆತಗಳಲ್ಲಿ 28 ರನ್‌ಗಳ ಸ್ಫೋಟಕ ಆಟವಾಡಿ ವಿನ್ನಿಂಗ್ ಶಾಟ್ ಹೊಡೆದರು. ಇದೀಗ ಮೂರನೇ ಪಂದ್ಯಕ್ಕೆ ಆರ್ಸಿಬಿ ಸಜ್ಜಾಗುತ್ತಿದೆ. ಹಾಗಾದರೆ, ಬೆಂಗಳೂರು ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ? ಎಲ್ಲಿ?.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಪಂದ್ಯ ಯಾರ ವಿರುದ್ಧ?
ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ.
ಬೆಂಗಳೂರು ಮತ್ತು ಕೆಕೆಆರ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ?
ಬೆಂಗಳೂರು ಮತ್ತು ಕೆಕೆಆರ್ ನಡುವಿನ 2024 ರ ಐಪಿಎಲ್ ಪಂದ್ಯ ಮಾರ್ಚ್ 29 ಶುಕ್ರವಾರದಂದು ನಡೆಯಲಿದೆ.
ಹೋಳಿ ಸೆಲೆಬ್ರೇಷನ್ ವೇಳೆ ರೋಹಿತ್ ಪತ್ನಿ ರಿತಿಕಾರನ್ನು ತಬ್ಬಿಕೊಂಡ ಹಾರ್ದಿಕ್ ಪಾಂಡ್ಯ
ಆರ್ಸಿಬಿ-ಪಂಜಾಬ್ ನಡುವಿನ 2024 ರ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ?
ಆರ್ಸಿಬಿ-ಕೆಕೆಆರ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.
ಆರ್ಸಿಬಿ-ಕೆಕೆಆರ್ ನಡುವಿನ ಪಂದ್ಯ ಟಿವಿಯಲ್ಲಿ ಎಲ್ಲಿ ಪ್ರಸಾರವಾಗುತ್ತದೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು-ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಯಾವ ಅಪ್ಲಿಕೇಶನ್‌ನಲ್ಲಿ ಇರಲಿದೆ?
ಪಂದ್ಯದ ಮಧ್ಯೆ ಪಂಜಾಬ್ ಆಟಗಾರನನ್ನು ನಿಂದಿಸಿದ ವಿರಾಟ್ ಕೊಹ್ಲಿ: ವಿಡಿಯೋ
ಆರ್ಸಿಬಿ-ಪಂಜಾಬ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಇರುತ್ತದೆ.
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.
ಕೋಲ್ಕತ್ತಾ ನೈಟ್ ರೈಡರ್ಸ್: ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ರಿಂಕು ಸಿಂಗ್, ರಹಮಾನುಲ್ಲಾ ಗುರ್ಬಾಜ್, ಫಿಲ್ ಸಾಲ್ಟ್, ಸುನಿಲ್ ನರೈನ್, ಸುಯ್ಯಾಶ್ ಶರ್ಮಾ, ಅನುಕೂಲ್ ರಾಯ್, ಆಂಡ್ರೆ ರಸೆಲ್, ವೆಂಕಟೇಶ್ ಅಯ್ಯರ್, ಹರ್ಷಿತ್ ರಾಣಾ, ವೈಭವ್ ಅರೋರಾ, ವರುಣ್ ಚಕ್ರವರ್ತಿ, ಕೆಎಸ್ ಭರತ್ ಚೇತನ್, ಸಕರಿಯಾ, ಮಿಚೆಲ್ ಸ್ಟಾರ್ಕ್, ಆಂಗ್ಕ್ರಿಶ್ ರಘುವಂಶಿ, ರಮಣದೀಪ್ ಸಿಂಗ್, ಶೆರ್ಫೇನ್ ರುದರ್ಫೋರ್ಡ್, ಮನೀಶ್ ಪಾಂಡೆ, ಮುಜೀಬ್ ಉರ್ ರೆಹಮಾನ್, ದುಷ್ಮಂತ ಚಮೀರಾ, ಸಾಕಿಬ್ ಹುಸೇನ್. ಅಲಭ್ಯ ಆಟಗಾರರು: ಜೇಸನ್ ರಾಯ್, ಗಸ್ ಅಟ್ಕಿನ್ಸನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:31 am, Tue, 26 March 24