
ಐಪಿಎಲ್ 2026 ರ (IPL 2026) 20ನೇ ಪಂದ್ಯದಲ್ಲಿ ಬಲಿಷ್ಠ ಮುಂಬೈ ಇಂಡಿಯನ್ಸ್ ತಂಡವನ್ನು ಅವರ ನೆಲದಲ್ಲಿ 18 ರನ್ಗಳಿಂದ ಮಣಿಸಿದ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (MI vs RCB) ತಂಡ ಮತ್ತೆ ತನ್ನ ತವರು ನೆಲದತ್ತ ಪ್ರಯಾಣಿಸಲಿದೆ. ಮೊದಲ ಎರಡು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡಿದ್ದ ಆರ್ಸಿಬಿ ಆ ಬಳಿಕ ಎದುರಾಳಿ ತಂಡಗಳ ತವರು ನೆಲದಲ್ಲಿ ಆಡಲು ಅಲ್ಲಿಗೆ ಪ್ರಯಾಣ ಬೆಳೆಸಿತ್ತು. ಇದೀಗ ಆರ್ಸಿಬಿ (RCB) ತನ್ನ ಐದನೇ ಪಂದ್ಯವನ್ನು ತನ್ನ ತವರು ನೆಲದಲ್ಲಿ ಆಡಲಿದೆ. ಲೀಗ್ನಲ್ಲಿ ಇದುವರೆಗೆ 4 ಪಂದ್ಯಗಳನ್ನಾಡಿರುವ ಆರ್ಸಿಬಿ ಮೂರು ಪಂದ್ಯಗಳಲ್ಲಿ ಗೆದ್ದು, ಒಂದು ಪಂದ್ಯವನ್ನು ಸೋತಿದೆ. ಈ ಮೂಲಕ 6 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಗೆದ್ದು ಪಾಯಿಂಟ್ ಪಟ್ಟಿಯಲ್ಲಿ ಮೇಲೇರುವ ಇರಾದೆಯಲ್ಲಿ ರಜತ್ ಪಡೆ ಇದೆ.
ಐಪಿಎಲ್ 2026 ರ 23ನೇ ಪಂದ್ಯದಲ್ಲಿ ಆರ್ಸಿಬಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ಐಪಿಎಲ್ 2026 ರಲ್ಲಿ ಆರ್ಸಿಬಿ ಹಾಗೂ ಲಕ್ನೋ ನಡುವಿನ ಪಂದ್ಯ ಏಪ್ರಿಲ್ 15 ರ ಬುಧವಾರದಂದು ನಡೆಯಲಿದೆ.
ಐಪಿಎಲ್ 2026 ರಲ್ಲಿ ಆರ್ಸಿಬಿ ಹಾಗೂ ಲಕ್ನೋ ನಡುವಿನ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಐಪಿಎಲ್ 2026 ರಲ್ಲಿ ಆರ್ಸಿಬಿ ಹಾಗೂ ಲಕ್ನೋ ನಡುವಿನ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ. ಟಾಸ್ 7 ಗಂಟೆಗೆ ನಡೆಯಲಿದೆ.
ಐಪಿಎಲ್ 2026 ರಲ್ಲಿ ಆರ್ಸಿಬಿ ಹಾಗೂ ಲಕ್ನೋ ನಡುವಿನ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ನ ವಿವಿದ ಚಾನೆಲ್‌ಗಳಲ್ಲಿ ವೀಕ್ಷಿಸಬಹುದಾಗಿದೆ. ಹಾಗೆಯೇ ಜಿಯೋ ಹಾಟ್ಸ್ಟಾರ್ನಲ್ಲೂ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದಾಗಿದೆ.
MI vs RCB: ವಾಂಖೆಡೆಯಲ್ಲಿ ಮುಂಬೈಗೆ ಮಣ್ಣು ಮುಕ್ಕಿಸಿದ ಆರ್ಸಿಬಿ
ಆರ್ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ,
ಲಕ್ನೋ ಸೂಪರ್ಜೈಂಟ್ಸ್: ಮಿಚೆಲ್ ಮಾರ್ಷ್, ಐಡೆನ್ ಮಾರ್ಕ್ರಾಮ್, ರಿಷಭ್ ಪಂತ್(ನಾಯಕ), ಆಯುಷ್ ಬಡೋನಿ, ನಿಕೋಲಸ್ ಪೂರನ್, ಅಬ್ದುಲ್ ಸಮದ್, ಮುಕುಲ್ ಚೌಧರಿ, ಮೊಹಮ್ಮದ್ ಶಮಿ, ಅವೇಶ್ ಖಾನ್, ಮಣಿಮಾರನ್ ಸಿದ್ಧಾರ್ಥ್, ದಿಗ್ವೇಶ್ ಸಿಂಗ್ ರಾಠಿ, ಪ್ರಿನ್ಸ್ ಯಾದವ್, ಮ್ಯಾಥ್ಯೂ ಬ್ರೀಟ್ಜ್‌ಕೆ, ಶಹಬಾಜ್ ಅಹ್ಮದ್, ಮಯಾಂಕ್ ಯಾದವ್, ಹಿಮ್ಮತ್ ಸಿಂಗ್, ಅನ್ರಿಚ್ ನೋಕಿಯಾ, ಮೊಹ್ಸಿನ್ ಖಾನ್, ಅರ್ಜುನ್ ತೆಂಡೂಲ್ಕರ್, ಆಕಾಶ್ ಮಹಾರಾಜ್ ಸಿಂಗ್, ಅಕ್ಷತ್ ರಘುವಂಶಿ, ಅರ್ಶಿನ್ ಕುಲಕರ್ಣಿ, ನಮನ್ ತಿವಾರಿ, ಜಾರ್ಜ್ ಲಿಂಡೆ, ಜೋಶ್ ಇಂಗ್ಲಿಸ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ