
IPL 2024 RCB vs LSG: ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಕ್ವಿಂಟನ್ ಡಿಕಾಕ್ (81) ಅವರ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡ 153 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ತವರು ಮೈದಾನದಲ್ಲಿ 28 ರನ್ಗಳ ಹೀನಾಯ ಸೋಲನುಭವಿಸಿದೆ. ಇದಕ್ಕೂ ಮುನ್ನ ಆರ್ಸಿಬಿ ಇದೇ ಮೈದಾನದಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತ್ತು. ಇದೀಗ ಮತ್ತೆ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಸೋತಿದೆ.
RCB ಪ್ಲೇಯಿಂಗ್ ಇಲೆವೆನ್: ಫಾಫ್ ಡು ಪ್ಲೆಸಿಸ್ (ನಾಯಕ) , ವಿರಾಟ್ ಕೊಹ್ಲಿ , ರಜತ್ ಪಾಟಿದಾರ್ , ಗ್ಲೆನ್ ಮ್ಯಾಕ್ಸ್ ವೆಲ್ , ಕ್ಯಾಮರೋನ್ ಗ್ರೀನ್ , ದಿನೇಶ್ ಕಾರ್ತಿಕ್ , ಅನೂಜ್ ರಾವತ್ (ವಿಕೆಟ್ ಕೀಪರ್) , ಯಶ್ ದಯಾಳ್, ರೀಸ್ ಟೋಪ್ಲಿ, ಮಯಾಂಕ್ ಡಾಗರ್ , ಮೊಹಮ್ಮದ್ ಸಿರಾಜ್.
LSG ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ ಆರ್ಸಿಬಿ 28 ರನ್ಗಳಿಂದ ಸೋಲನುಭವಿಸಿದೆ. ಲಕ್ನೋ ನೀಡಿದ 181 ರನ್ಗಳ ಗುರಿಯನ್ನು ಬೆನ್ನತ್ತಿದ ಆರ್ಸಿಬಿ 153 ರನ್ಗಳಿಗೆ ಆಲೌಟ್ ಆಗಿದೆ.
ಆರ್ಸಿಬಿ ಪರ 33 ರನ್ ಬಾರಿಸಿದ ಮಹಿಪಾಲ್ ಲೋಮ್ರರ್ ಗರಿಷ್ಠ ಸ್ಕೋರರ್.
ಎಲ್ಎಸ್ಜಿ ಪರ 4 ಓವರ್ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಕಬಳಿಸಿ ಮಿಂಚಿದ ಮಯಾಂಕ್ ಯಾದವ್.
ರವಿ ಬಿಷ್ಣೋಯ್ ಎಸೆದ 19ನೇ ಓವರ್ನ 5ನೇ ಮತ್ತು 6ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸ್ ಸಿಡಿಸಿದ ಮೊಹಮ್ಮದ್ ಸಿರಾಜ್.
ಕೊನೆಯ 6 ಎಸೆತಗಳಲ್ಲಿ 30 ರನ್ಗಳ ಅವಶ್ಯಕತೆ.
ಕ್ರೀಸ್ನಲ್ಲಿ ಸಿರಾಜ್ ಹಾಗೂ ರೀಸ್ ಟೋಪ್ಲಿ ಬ್ಯಾಟಿಂಗ್
ಯಶ್ ಠಾಕೂರ್ ಎಸೆದ 18ನೇ ಓವರ್ನ 5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನ… ಬೌಂಡರಿ ಲೈನ್ನಲ್ಲಿ ಕ್ಯಾಚ್.
13 ಎಸೆತಗಳಲ್ಲಿ 33 ರನ್ ಬಾರಿಸಿ ಔಟಾದ ಮಹಿಪಾಲ್ ಲೋಮ್ರರ್.
ಸೋಲಿನ ಸುಳಿಯಲ್ಲಿ ಸಿಲುಕಿದ ಆರ್ಸಿಬಿ.
18ನೇ ಓವರ್ನ ಮೊದಲ ಎಸೆತದಲ್ಲಿ 2 ರನ್ ಓಡುವ ಯತ್ನದಲ್ಲಿ ಮಯಾಂಕ್ ಡಾಗರ್ ರನೌಟ್.
ಬೌಂಡರಿ ಲೈನ್ನಿಂದ ನಿಕೋಲಸ್ ಪೂರನ್ ಎಸೆದ ಡೈರೆಕ್ಟ್ ಥ್ರೋಗೆ ಬಲಿಯಾದ ಡಾಗರ್ (0).
ಕ್ರೀಸ್ನಲ್ಲಿ ಮಹಿಪಾಲ್ ಲೋಮ್ರರ್ ಹಾಗೂ ರೀಸ್ ಟೋಪ್ಲಿ ಬ್ಯಾಟಿಂಗ್.
ನವೀನ್ ಉಲ್ ಹಕ್ ಎಸೆದ 17ನೇ ಓವರ್ನ 5ನೇ ಎಸೆತದಲ್ಲಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ಡಿಕೆ.
8 ಎಸೆತಗಳಲ್ಲಿ 4 ರನ್ ಬಾರಿಸಿ ಔಟಾದ ದಿನೇಶ್ ಕಾರ್ತಿಕ್.
7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಆರ್ಸಿಬಿ.
ಕ್ರೀಸ್ನಲ್ಲಿ ಮಹಿಪಾಲ್ ಲೋಮ್ರರ್ ಹಾಗೂ ಮಯಾಂಕ್ ಡಾಗರ್ ಬ್ಯಾಟಿಂಗ್
ಯಶ್ ಠಾಕೂರ್ ಎಸೆದ 16ನೇ ಓವರ್ನ 2ನೇ ಎಸೆತದಲ್ಲಿ ಲಾಂಗ್ ಆಫ್ನತ್ತ ಸಿಕ್ಸ್ ಬಾರಿಸಿದ ಮಹಿಪಾಲ್ ಲೋಮ್ರರ್.
3ನೇ ಎಸೆತದಲ್ಲಿ ಮಹಿಪಾಲ್ ಬ್ಯಾಟ್ನಿಂದ ಮತ್ತೊಂದು ಫೋರ್.
4ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಸಿಕ್ಸ್ ಸಿಡಿಸಿದ ಮಹಿಪಾಲ್ ಲೋಮ್ರರ್.
16ನೇ ಓವರ್ನಲ್ಲಿ 19 ರನ್ ನೀಡಿದ ಯಶ್ ಠಾಕೂರ್.
ಮಯಾಂಕ್ ಯಾದವ್ ಎಸೆದ 15ನೇ ಓವರ್ನ 2ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿದ ರಜತ್ ಪಾಟಿದಾರ್.
21 ಎಸೆತಗಳಲ್ಲಿ 29 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಪಾಟಿದಾರ್.
ಆರ್ಸಿಬಿ ತಂಡದ 6ನೇ ವಿಕೆಟ್ ಪತನ.
ಕ್ರೀಸ್ನಲ್ಲಿ ಮಹಿಪಾಲ್ ಲೋಮ್ರರ್ ಹಾಗೂ ದಿನೇಶ್ ಕಾರ್ತಿಕ್ ಬ್ಯಾಟಿಂಗ್
ಮಾರ್ಕಸ್ ಸ್ಟೋಯಿನಿಸ್ ಎಸೆದ 13ನೇ ಓವರ್ನ 5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿದ ಅನೂಜ್.
21 ಎಸೆತಗಳಲ್ಲಿ 11 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಅನೂಜ್ ರಾವತ್.
ಯಶ್ ದಯಾಳ್ ಬದಲಿಗೆ ಇಂಪ್ಯಾಕ್ಟ್ ಸಬ್ ಆಗಿ ಕಣಕ್ಕಿಳಿದ ಮಹಿಪಾಲ್ ಲೋಮ್ರರ್.
ಕ್ರೀಸ್ನಲ್ಲಿ ಮಹಿಪಾಲ್ ಲೋಮ್ರರ್ ಹಾಗೂ ರಜತ್ ಪಾಟಿದಾರ್ ಬ್ಯಾಟಿಂಗ್.
ರವಿ ಬಿಷ್ಣೋಯ್ ಎಸೆದ 12ನೇ ಓವರ್ನ 5ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ರಜತ್ ಪಾಟಿದಾರ್.
ಕೊನೆಯ ಎಸೆತದಲ್ಲಿ ಪಾಟಿದಾರ್ ಬ್ಯಾಟ್ನಿಂದ ಸ್ಟ್ರೈಟ್ ಹಿಟ್ ಫೋರ್.
12ನೇ ಓವರ್ನಲ್ಲಿ 13 ರನ್ ಕಲೆಹಾಕಿದ ಆರ್ಸಿಬಿ ಬ್ಯಾಟರ್ಗಳು.
10 ಓವರ್ಗಳಲ್ಲಿ ಕೇವಲ 63 ರನ್ ಕಲೆಹಾಕಿದ ಆರ್ಸಿಬಿ.
4 ಪ್ರಮುಖ ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಅನೂಜ್ ರಾವತ್ ಹಾಗೂ ರಜತ್ ಪಾಟಿದಾರ್ ಬ್ಯಾಟಿಂಗ್.
ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್‌ವೆಲ್ ಹಾಗೂ ಕ್ಯಾಮರೋನ್ ಗ್ರೀನ್ ಔಟ್.
9 ಓವರ್ಗಳ ಮುಕ್ತಾಯದ ವೇಳೆಗೆ ಕೇವಲ 60 ರನ್ ಮಾತ್ರ ನೀಡಿದ ಲಕ್ನೋ ಸೂಪರ್ ಜೈಂಟ್ಸ್ ಬೌಲರ್ಗಳು.
ಅಗ್ರ ಕ್ರಮಾಂಕದ ನಾಲ್ಕು ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿರುವ ಆರ್ಸಿಬಿ.
ಕ್ರೀಸ್ನಲ್ಲಿ ಅನೂಜ್ ರಾವತ್ ಹಾಗೂ ರಜತ್ ಪಾಟಿದಾರ್ ಬ್ಯಾಟಿಂಗ್
ಮಯಾಂಕ್ ಯಾದವ್ ಎಸೆದ 8ನೇ ಓವರ್ನ 4ನೇ ಎಸೆತದಲ್ಲಿ ಕ್ಯಾಮರೋನ್ ಗ್ರೀನ್ ಕ್ಲೀನ್ ಬೌಲ್ಡ್.
9 ಎಸೆತಗಳಲ್ಲಿ 9 ರನ್ ಬಾರಿಸಿ ಔಟಾದ ಕ್ಯಾಮರೋನ್ ಗ್ರೀನ್.
ಲಕ್ನೋ ಸೂಪರ್ ಜೈಂಟ್ಸ್ ಪರ 2 ವಿಕೆಟ್ ಕಬಳಿಸಿರುವ ಮಯಾಂಕ್ ಅಗರ್ವಾಲ್.
ಮಯಾಂಕ್ ಯಾದವ್ ಎಸೆದ 6ನೇ ಓವರ್ನ 4ನೇ ಎಸೆತದಲ್ಲಿ ಸುಲಭ ಕ್ಯಾಚ್ ನೀಡಿ ಹೊರ ನಡೆದ ಮ್ಯಾಕ್ಸ್‌ವೆಲ್.
ಗ್ಲೆನ್ ಮ್ಯಾಕ್ಸ್‌ವೆಲ್ ರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಯಶಸ್ವಿಯಾದ ಯುವ ವೇಗಿ.
ಕ್ರೀಸ್ನಲ್ಲಿ ಕ್ಯಾಮರೋನ್ ಗ್ರೀನ್ ಹಾಗೂ ರಜತ್ ಪಾಟಿದಾರ್ ಬ್ಯಾಟಿಂಗ್
ಮಯಾಂಕ್ ಯಾದವ್ ಎಸೆದ 6ನೇ ಓವರ್ನ ಮೊದಲ ಎಸೆತದಲ್ಲಿ ಸಿಂಗಲ್ ತೆಗೆಯುವ ಯತ್ನದಲ್ಲಿ ಫಾಫ್ ಡುಪ್ಲೆಸಿಸ್ ರನೌಟ್.
ದೇವದತ್ ಪಡಿಕ್ಕಲ್ ಎಸೆದ ಡೈರೆಕ್ಟ್ ಹಿಟ್ ಥ್ರೋಗೆ ಬಲಿಯಾದ ಫಾಫ್ ಡುಪ್ಲೆಸಿಸ್ (19).
ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ 2ನೇ ಯಶಸ್ಸು.
ಸಿದ್ಧಾರ್ಥ್ ಮಣಿಮಾರನ್ ಎಸೆದ 5ನೇ ಓವರ್ನ ಮೊದಲ ಎಸೆತದಲ್ಲಿ ಫೋರ್ ಬಾರಿಸಿದ ಕೊಹ್ಲಿ.
2ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಹೊಡೆತಕ್ಕೆ ಯತ್ನಿಸಿ ಫ್ರಂಟ್ ಫೀಲ್ಡರ್ಗೆ ಕ್ಯಾಚ್ ನೀಡಿದ ಕೊಹ್ಲಿ.
16 ಎಸೆತಗಳಲ್ಲಿ 22 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ವಿರಾಟ್ ಕೊಹ್ಲಿ.
ಕ್ರೀಸ್ನಲ್ಲಿ ಫಾಫ್ ಡುಪ್ಲೆಸಿಸ್ ಹಾಗೂ ರಜತ್ ಪಾಟಿದಾರ್ ಬ್ಯಾಟಿಂಗ್
ನವೀನ್ ಉಲ್ ಹಕ್ ಎಸೆದ 4ನೇ ಓವರ್ನ 3ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ವಿರಾಟ್ ಕೊಹ್ಲಿ.
4 ಓವರ್ಗಳ ಮುಕ್ತಾಯದ ವೇಳೆಗೆ ಆರ್ಸಿಬಿ ತಂಡದ ಸ್ಕೋರ್ 36 ರನ್ಗಳು.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್
ಸಿದ್ಧಾರ್ಥ್ ಮಣಿಮಾರನ್ ಎಸೆದ 3ನೇ ಓವರ್ನ 5ನೇ ಮತ್ತು 6ನೇ ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ಬೌಂಡರಿ ಬಾರಿಸಿದ ಫಾಫ್ ಡುಪ್ಲೆಸಿಸ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್
ಮೊದಲ ಓವರ್ನಲ್ಲಿ 3 ರನ್ ಕಲೆಹಾಕಿದ ಆರ್ಸಿಬಿ ಆರಂಭಿಕರು.
2ನೇ ಓವರ್ನಲ್ಲಿ 10 ರನ್ ಬಾರಿಸುವಲ್ಲಿ ಯಶಸ್ವಿಯಾದ ಕೊಹ್ಲಿ-ಫಾಫ್.
ಕ್ರೀಸ್ನಲ್ಲಿ ವಿರಾಟ್ ಕೊಹ್ಲಿ ಹಾಗೂ ಫಾಫ್ ಡುಪ್ಲೆಸಿಸ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 20ನೇ ಓವರ್ನ 4ನೇ ಮತ್ತು 6ನೇ ಎಸೆತಗಳಲ್ಲಿ ಭರ್ಜರಿ ಸಿಕ್ಸ್ ಸಿಡಿಸಿದ ಪೂರನ್.
20 ಓವರ್ಗಳಲ್ಲಿ 181 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್.
ಆರ್ಸಿಬಿ ತಂಡಕ್ಕೆ 182 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಿದ ಎಲ್ಎಸ್ಜಿ
ರೀಸ್ ಟೋಪ್ಲಿ ಎಸೆದ 19ನೇ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಮೂರು ಸಿಕ್ಸ್ ಬಾರಿಸಿದ ನಿಕೋಲಸ್ ಪೂರನ್.
ಕೊನೆಯ ಓವರ್ ಬಾಕಿ…ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಕೋರ್ 168 ರನ್ಗಳು.
ಕ್ರೀಸ್ನಲ್ಲಿ ನಿಕೋಲಸ್ ಪೂರನ್ ಹಾಗೂ ಕೃನಾಲ್ ಪಾಂಡ್ಯ ಬ್ಯಾಟಿಂಗ್
ಯಶ್ ದಯಾಳ್ ಎಸೆದ 18ನೇ ಓವರ್ನ ಮೊದಲ ಎಸೆತದಲ್ಲಿ ಫೋರ್ ಬಾರಿಸಿದ ನಿಕೋಲಸ್ ಪೂರನ್.
ಉಳಿದ 4 ಎಸೆತಗಳಲ್ಲಿ ಕೇವಲ 1 ರನ್ ನೀಡಿದ ದಯಾಳ್.
6ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿದ ಆಯುಷ್ ಬದೋನಿ…ಅತ್ಯುತ್ತಮ ರನ್ನಿಂಗ್ ಕ್ಯಾಚ್ ಹಿಡಿದ ಫಾಫ್ ಡುಪ್ಲೆಸಿಸ್.
ರೀಸ್ ಟೋಪ್ಲಿ ಎಸೆದ 17ನೇ ಓವರ್ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಸ್ಟ್ರೈಟ್ ಬೌಂಡರಿ ಲೈನ್ನಲ್ಲಿ ಕ್ಯಾಚ್ ನೀಡಿದ ಡಿಕಾಕ್.
56 ಎಸೆತಗಳಲ್ಲಿ 81 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಕ್ವಿಂಟನ್ ಡಿಕಾಕ್.
ಕ್ರೀಸ್ನಲ್ಲಿ ನಿಕೋಲಸ್ ಪೂರನ್ ಹಾಗೂ ಆಯುಷ್ ಬದೋನಿ ಬ್ಯಾಟಿಂಗ್
ಮೊಹಮ್ಮದ್ ಸಿರಾಜ್ ಎಸೆದ 16ನೇ ಓವರ್ನ 4ನೇ ಮತ್ತು 5ನೇ ಎಸೆತಗಳಲ್ಲಿ ಸ್ಟ್ರೈಟ್ ಹಿಟ್ ಬೌಂಡರಿ ಬಾರಿಸಿದ ಕ್ವಿಂಟನ್ ಡಿಕಾಕ್.
53 ಎಸೆತಗಳಲ್ಲಿ 80 ರನ್ ಬಾರಿಸಿ ಭರ್ಜರಿ ಬ್ಯಾಟಿಂಗ್ ಮುಂದುವರೆಸಿರುವ ಡಿಕಾಕ್.
ಕ್ರೀಸ್ನಲ್ಲಿ ನಿಕೋಲಸ್ ಪೂರನ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
15ನೇ ಓವರ್ನಲ್ಲಿ ಕೇವಲ 2 ರನ್ ಮಾತ್ರ ನೀಡಿದ ಎಡಗೈ ವೇಗಿ ಯಶ್ ದಯಾಳ್.
15 ಓವರ್ಗಳ ಮುಕ್ತಾಯದ ವೇಳೆಗೆ ಲಕ್ನೋ ಸೂಪರ್ ಜೈಂಟ್ಸ್ ತಂಡದ ಸ್ಕೋರ್ 131 ರನ್ಸ್.
ಕ್ರೀಸ್ನಲ್ಲಿ ನಿಕೋಲಸ್ ಪೂರನ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
ಗ್ಲೆನ್ ಮ್ಯಾಕ್ಸ್‌ವೆಲ್ ಎಸೆದ 14ನೇ ಓವರ್ನ ಮೊದಲ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಮಾರ್ಕಸ್ ಸ್ಟೋಯಿನಿಸ್.
5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿದ ಸ್ಟೋಯಿನಿಸ್.
15 ಎಸೆತಗಳಲ್ಲಿ 24 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಮಾರ್ಕಸ್ ಸ್ಟೋಯಿನಿಸ್.
4 ಓವರ್ಗಳಲ್ಲಿ 23 ರನ್ ನೀಡಿ 2 ವಿಕೆಟ್ ಕಬಳಿಸಿದ ಮ್ಯಾಕ್ಸ್‌ವೆಲ್.
ಕ್ಯಾಮರೋನ್ ಗ್ರೀನ್ ಎಸೆದ 13ನೇ ಓವರ್ನ 2ನೇ ಎಸೆತದಲ್ಲಿ ಡೀಪ್ ಸ್ಕ್ವೇರ್ನತ್ತ ಸಿಕ್ಸ್ ಬಾರಿಸಿದ ಡಿಕಾಕ್.
4ನೇ ಎಸೆತದಲ್ಲಿ ಮಾರ್ಕಸ್ ಸ್ಟೋಯಿನಿಸ್ ಬ್ಯಾಟ್ನಿಂದ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್.
ಕೊನೆಯ ಎಸೆತದಲ್ಲಿ ಡೀಪ್ ಕವರ್ನತ್ತ ಆಕರ್ಷಕ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್.
ಮಯಾಂಕ್ ಡಾಗರ್ ಎಸೆದ 12ನೇ ಓವರ್ನ 4ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್.
ಈ ಫೋರ್ನೊಂದಿಗೆ 36 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಡಿಕಾಕ್.
6ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಬಾರಿಸಿದ ಕ್ವಿಂಟನ್ ಡಿಕಾಕ್.
12 ಓವರ್ಗಳಲ್ಲಿ ಶತಕ ಪೂರೈಸಿದ ಲಕ್ನೋ ಸೂಪರ್ ಜೈಂಟ್ಸ್.
10 ಓವರ್ಗಳಲ್ಲಿ 84 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್.
2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು.
ಕ್ರೀಸ್ನಲ್ಲಿ ಮಾರ್ಕಸ್ ಸ್ಟೋಯಿನಿಸ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
ಕೆಎಲ್ ರಾಹುಲ್ (20) ಹಾಗೂ ದೇವದತ್ ಪಡಿಕ್ಕಲ್ (6) ಔಟ್.
ಮೊಹಮ್ಮದ್ ಸಿರಾಜ್ ಎಸೆದ 9ನೇ ಓವರ್ನ 3ನೇ ಎಸೆತದಲ್ಲಿ ಡೀಪ್ ಮಿಡ್ ವಿಕೆಟ್ನತ್ತ ಸಿಕ್ಸ್ ಸಿಡಿಸಿದ ಕ್ವಿಂಟನ್ ಡಿಕಾಕ್.
5ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಯತ್ನಿಸಿ ವಿಕೆಟ್ ಕೀಪರ್ಗೆ ಕ್ಯಾಚ್ ನೀಡಿದ ದೇವದತ್ ಪಡಿಕ್ಕಲ್.
11 ಎಸೆತಗಳಲ್ಲಿ 6 ರನ್ ಬಾರಿಸಿ ಸಿರಾಜ್ಗೆ ವಿಕೆಟ್ ಒಪ್ಪಿಸಿದ ದೇವದತ್ ಪಡಿಕ್ಕಲ್.
ಪವರ್ಪ್ಲೇ (6 ಓವರ್) ನಲ್ಲಿ 54 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್.
7ನೇ ಓವರ್ನಲ್ಲಿ ಕೇವಲ 5 ರನ್ ನೀಡಿದ ರೀಸ್ ಟೋಪ್ಲಿ.
8ನೇ ಓವರ್ನಲ್ಲಿ 3 ರನ್ ಮಾತ್ರ ನೀಡಿದ ಗ್ಲೆನ್ ಮ್ಯಾಕ್ಸ್‌ವೆಲ್.
ಕ್ರೀಸ್ನಲ್ಲಿ ದೇವದತ್ ಪಡಿಕ್ಕಲ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
ಗ್ಲೆನ್ ಮ್ಯಾಕ್ಸ್‌ವೆಲ್ ಎಸೆದ 6ನೇ ಓವರ್ನ 2ನೇ ಎಸೆತದಲ್ಲಿ ಸ್ವೀಪ್ ಶಾಟ್ ಸಿಕ್ಸ್ ಸಿಡಿಸಿದ ಕೆಎಲ್ ರಾಹುಲ್.
3ನೇ ಎಸೆತದಲ್ಲಿ ಮತ್ತೊಂದು ಭರ್ಜರಿ ಹೊಡೆತಕ್ಕೆ ಯತ್ನ…ಫ್ರಂಟ್ ಫೀಲ್ಡರ್ಗೆ ಕ್ಯಾಚ್… ಕೆಎಲ್ ರಾಹುಲ್ ಔಟ್.
14 ಎಸೆತಗಳಲ್ಲಿ 20 ರನ್ ಬಾರಿಸಿ ವಿಕೆಟ್ ಒಪ್ಪಿಸಿದ ಕೆಎಲ್ ರಾಹುಲ್.
ಕ್ರೀಸ್ನಲ್ಲಿ ದೇವದತ್ ಪಡಿಕ್ಕಲ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
ಯಶ್ ದಯಾಳ್ ಎಸೆದ 5ನೇ ಓವರ್ನ 5ನೇ ಎಸೆತದಲ್ಲಿ ಸ್ಟ್ರೈಟ್ ಹಿಟ್ ಸಿಕ್ಸ್ ಸಿಡಿಸಿದ ಕೆಎಲ್ ರಾಹುಲ್.
5 ಓವರ್ಗಳ ಮುಕ್ತಾಯದ ವೇಳೆ 46 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
ಪವರ್ಪ್ಲೇನ 4ನೇ ಓವರ್ ಎಸೆದ ಗ್ಲೆನ್ ಮ್ಯಾಕ್ಸ್‌ವೆಲ್.
ಸ್ಪಿನ್ ಮೋಡಿ ಮೂಲಕ ಕೇವಲ 4 ರನ್ ನೀಡಿದ ಮ್ಯಾಕ್ಸಿ.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್.
ಮೊಹಮ್ಮದ್ ಸಿರಾಜ್ ಎಸೆದ 3ನೇ ಓವರ್ನ 4ನೇ ಎಸೆತದಲ್ಲಿ ಲೆಗ್ ಸೈಡ್ನತ್ತ ಭರ್ಜರಿ ಸಿಕ್ಸ್ ಸಿಡಿಸಿದ ಕ್ವಿಂಟನ್ ಡಿಕಾಕ್.
5ನೇ ಎಸೆತದಲ್ಲಿ ಡಿಕಾಕ್ ಬ್ಯಾಟ್ನಿಂದ ಡೀಪ್ ಸ್ಕ್ವೇರ್ ಲೆಗ್ನತ್ತ ಮತ್ತೊಂದು ಸಿಕ್ಸ್.
3ನೇ ಓವರ್ನಲ್ಲಿ 13 ರನ್ ನೀಡಿದ ಸಿರಾಜ್.
ಯಶ್ ದಯಾಳ್ ಎಸೆದ 2ನೇ ಓವರ್ನ 3ನೇ ಎಸೆತದಲ್ಲಿ ಆಫ್ ಸೈಡ್ನತ್ತ ಆಕರ್ಷಕ ಬೌಂಡರಿ ಬಾರಿಸಿದ ಕ್ವಿಂಟನ್ ಡಿಕಾಕ್.
2ನೇ ಓವರ್ನಲ್ಲಿ 7 ರನ್ ಕಲೆಹಾಕಿದ ಲಕ್ನೋ ಸೂಪರ್ ಜೈಂಟ್ಸ್ ಆರಂಭಿಕರು.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್
ಎಡಗೈ ವೇಗಿ ರೀಸ್ ಟೋಪ್ಲಿ ಎಸೆದ ಮೊದಲ ಓವರ್ನಲ್ಲಿ ಹ್ಯಾಟ್ರಿಕ್ ಫೋರ್ ಬಾರಿಸಿದ ಕ್ವಿಂಟನ್ ಡಿಕಾಕ್.
ಮೊದಲ ಓವರ್ನಲ್ಲಿ 12 ರನ್ ಬಾರಿಸಿ ಶುಭಾರಂಭ ಮಾಡಿದ ಲಕ್ನೋ ಸೂಪರ್ ಜೈಂಟ್ಸ್.
ಕ್ರೀಸ್ನಲ್ಲಿ ಕೆಎಲ್ ರಾಹುಲ್ ಹಾಗೂ ಕ್ವಿಂಟನ್ ಡಿಕಾಕ್ ಬ್ಯಾಟಿಂಗ್
LSG ಪ್ಲೇಯಿಂಗ್ ಇಲೆವೆನ್: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ನಾಯಕ), ದೇವದತ್ ಪಡಿಕ್ಕಲ್, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ರವಿ ಬಿಷ್ಣೋಯ್, ಯಶ್ ಠಾಕೂರ್, ನವೀನ್-ಉಲ್-ಹಕ್, ಮಯಾಂಕ್ ಯಾದವ್.
ಈ ಪಂದ್ಯಕ್ಕಾಗಿ ಆರ್ಸಿಬಿ ತನ್ನ ಪ್ಲೇಯಿಂಗ್ ಇಲೆವೆನ್ನಲ್ಲಿ ಒಂದು ಬದಲಾವಣೆ ಮಾಡಿಕೊಂಡಿದೆ. ಅದರಂತೆ ಅಲ್ಝಾರಿ ಜೋಸೆಫ್ ಸ್ಥಾನದಲ್ಲಿ ಎಡಗೈ ವೇಗಿ ರೀಸ್ ಟೋಪ್ಲಿ ಕಣಕ್ಕಿಳಿದಿದ್ದಾರೆ.
RCB ಪ್ಲೇಯಿಂಗ್ ಇಲೆವೆನ್: ಫಾಫ್ ಡು ಪ್ಲೆಸಿಸ್ (ನಾಯಕ) , ವಿರಾಟ್ ಕೊಹ್ಲಿ , ರಜತ್ ಪಾಟಿದಾರ್ , ಗ್ಲೆನ್ ಮ್ಯಾಕ್ಸ್ ವೆಲ್ , ಕ್ಯಾಮರೋನ್ ಗ್ರೀನ್ , ದಿನೇಶ್ ಕಾರ್ತಿಕ್ , ಅನೂಜ್ ರಾವತ್ (ವಿಕೆಟ್ ಕೀಪರ್) , ಯಶ್ ದಯಾಳ್, ರೀಸ್ ಟೋಪ್ಲಿ, ಮಯಾಂಕ್ ಡಾಗರ್ , ಮೊಹಮ್ಮದ್ ಸಿರಾಜ್.
ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2024) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆರ್ಸಿಬಿ ತಂಡದ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ.
ಟಾಸ್ ಪ್ರಕ್ರಿಯೆ: 7 ಗಂಟೆಗೆ
ಪಂದ್ಯ ಶುರು: 7.30 ರಿಂದ
ಸ್ಥಳ: ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು.
An intense battle loading 🆙 ⏳
❤️ 🆚 💙
⏰ 7:30 PM IST
💻 https://t.co/4n69KTSZN3
📱 Official IPL App #TATAIPL | #RCBvLSG pic.twitter.com/vnNziVAsbW— IndianPremierLeague (@IPL) April 2, 2024
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ನ 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.
Published On - 6:26 pm, Tue, 2 April 24