RCB vs LSG: ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬರಲಿದೆಯಾ? ಇಲ್ಲಿದೆ ಹವಾಮಾನ ವರದಿ

RCB vs LSG Weather Forecast: ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಮಳೆ ಬಂದು, ಅಂತಿಮವಾಗಿ ಸೂಪರ್ ಓವರ್​ ಕೂಡ ಆಡಲು ಸಾಧ್ಯವಾಗದಿದ್ದರೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲಿರುವ ತಂಡ ಮುಂದಿನ ಹಂತಕ್ಕೇರಲಿದೆ.

RCB vs LSG: ಎಲಿಮಿನೇಟರ್ ಪಂದ್ಯದ ವೇಳೆ ಮಳೆ ಬರಲಿದೆಯಾ? ಇಲ್ಲಿದೆ ಹವಾಮಾನ ವರದಿ
RCB vs LSG Weather Forecast
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 25, 2022 | 3:58 PM

IPL 2022 ರ ಪ್ಲೇಆಫ್ ಪಂದ್ಯಗಳು ಶುರುವಾಗಿದೆ. ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಜಯಗಳಿಸುವ ಮೂಲಕ ಗುಜರಾತ್ ಟೈಟಾನ್ಸ್ ತಂಡವು ಫೈನಲ್‌ಗೆ ಲಗ್ಗೆ ಇಟ್ಟಿದೆ. ಆದರೆ, ಫೈನಲ್‌ ಆಡುವ 2ನೇ ತಂಡ ಯಾವುದೆಂದು ನಿರ್ಧಾರವಾಗಲು ಇನ್ನೆರಡು ಪಂದ್ಯಗಳು ಮುಗಿಯಬೇಕಿದೆ. ಅದರಲ್ಲಿ ಎಲಿಮಿನೇಟರ್​ ಇಂದು ನಡೆಯಲಿದ್ದು, ಈ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ . ಮೊದಲ ಕ್ವಾಲಿಫೈಯರ್ ಪಂದ್ಯದಂತೆ ಈ ಪಂದ್ಯ ಕೂಡ ಕೋಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದೆ.

ಕಳೆದ ಕೆಲವು ದಿನಗಳಿಂದ ಕೋಲ್ಕತ್ತಾದಲ್ಲಿ ಉತ್ತಮ ಮಳೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಅಲ್ಲಿಯೇ ಪ್ಲೇ ಆಫ್ ನಡೆಸುವ ನಿರ್ಧಾರದ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು. ಆದಾಗ್ಯೂ, ಬಿಸಿಸಿಐ ಈ ಬಗ್ಗೆ ಕೆಲವು ಪ್ರಮುಖ ನಿಯಮಗಳನ್ನು ರೂಪಿಸಿ, ಕೊಲ್ಕತ್ತಾದಲ್ಲೇ ಪ್ಲೇ ಆಫ್‌ ಹಂತದ ಎರಡು ಪಂದ್ಯಗಳನ್ನು ಆಯೋಜಿಸುತ್ತಿದೆ. ಅದರಂತೆ ಮೊದಲ ಕ್ವಾಲಿಫೈಯರ್ ಪಂದ್ಯ ಮುಗಿದಿದ್ದು, ಇದೀಗ ಎಲಿಮಿನೇಟರ್ ಪಂದ್ಯಕ್ಕೆ ಈಡನ್ ಗಾರ್ಡನ್ಸ್​ ಮೈದಾನ ಸಜ್ಜಾಗಿದೆ. ಆದರೆ ಈ ಪಂದ್ಯದ ವೇಳೆ ಮಳೆ ಬರಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಇಂದಿನ ಪಂದ್ಯ ಆರ್‌ಸಿಬಿ ಹಾಗೂ ಲಕ್ನೋ ತಂಡಕ್ಕೆ ಅತ್ಯಂತ ಮಹತ್ವದ್ದಾಗಿದೆ. ಈ ಪಂದ್ಯದಲ್ಲಿ ಯಾವ ತಂಡ ಸೋತರೂ ಆ ಟೀಮ್​ ಐಪಿಎಲ್​ನಿಂದ ಹೊರಬೀಳಲಿದೆ. ಇಂತಹ ಪರಿಸ್ಥಿತಿಯಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು. ಇದರ ನಡುವೆ ಪಂದ್ಯಕ್ಕೆ ವರುಣ ಅವಕೃಪೆ ತೋರಲಿದೆಯಾ ಎಂಬ ಪ್ರಶ್ನೆಗೆ ಹವಾಮಾನ ಇಲಾಖೆ ಉತ್ತರ ನೀಡಿದೆ.

ಇದನ್ನೂ ಓದಿ
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು
Image
Virat Kohli: ಕೊಹ್ಲಿ ಕಡೆಯಿಂದ ರಶೀದ್ ಖಾನ್​​ಗೆ ಸ್ಪೆಷಲ್ ಗಿಫ್ಟ್​: ಸೇಫ್ ಆಗಿ ಇಟ್ಟಿರಿ ಎಂದ ಸೌತ್ ಆಫ್ರಿಕಾ ಕ್ರಿಕೆಟಿಗ
Image
KL Rahul: ಐಪಿಎಲ್​ನಲ್ಲಿ ರಾಹುಲ್ ಅಬ್ಬರ: ಸತತ 5ನೇ ಬಾರಿ ಕೆಎಲ್ ಕಿಂಗ್
Image
IPL 2022: ಬುಮ್ರಾ ದಾಖಲೆ ಮುರಿದ ಉಮ್ರಾನ್ ಮಲಿಕ್

ಹವಾಮಾನ ಇಲಾಖೆಯ ಪ್ರಕಾರ ಇಂದಿನ ಪಂದ್ಯದಲ್ಲಿ ಮಳೆಯ ಅಡೆತಡೆ ಇಲ್ಲ. ಮೋಡ ಮುಸುಕಿದ ವಾತಾವರಣ ಇದ್ದರೂ ಸಂಜೆ ಮಳೆಯಾಗುವ ಸಾಧ್ಯತೆ ಇಲ್ಲ. ಹವಾಮಾನವು ಸ್ಪಷ್ಟವಾಗಿರುತ್ತದೆ. ತಾಪಮಾನವು 27 ಡಿಗ್ರಿಗಳಿಂದ 36 ವರೆಗೆ ತಲುಪಬಹುದು. ಹೀಗಾಗಿ ಪಂದ್ಯದ ಸಮಯದಲ್ಲಿ ಮಳೆಯಾಗುವ ಸಾಧ್ಯತೆ ತುಂಬಾ ಕಡಿಮೆ. ಹಾಗಾಗಿ ಪಂದ್ಯವು ಯಾವುದೇ ಅಡೆ ತಡೆಯಿಲ್ಲದೆ ಮುಗಿಯಲಿದೆ ಎಂದು ತಿಳಿಸಿದೆ.

ಇನ್ನು ಪ್ಲೇಆಫ್​ ಹಂತದ ಪಂದ್ಯಗಳ ವೇಳೆ ಮಳೆಯಾದರೆ ಫಲಿತಾಂಶ ನಿರ್ಧರಿಸಲು ಬಿಸಿಸಿಐ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಇದರಲ್ಲಿ ಮೊದಲ ಮೂರು ಪಂದ್ಯಗಳಿಗೆ, ಅಂದರೆ ಮೊದಲ ಕ್ವಾಲಿಫೈಯರ್, ಎಲಿಮಿನೇಟರ್ ಹಾಗೂ 2ನೇ ಕ್ವಾಲಿಫೈಯರ್ ಪಂದ್ಯಗಳಿಗೆ ಮೀಸಲು ದಿನದಾಟ ನೀಡಲಾಗಿಲ್ಲ. ಬದಲಾಗಿ ಆಯಾ ದಿನವೇ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತದೆ. ಇದಕ್ಕಾಗಿ ಹೆಚ್ಚುವರಿ ಸಮಯವಕಾಶ ನೀಡಲಾಗಿದೆ.

ಬಿಸಿಸಿಐ ಪ್ರಕಟಿಸಿರುವ ಹೊಸ ಮಾರ್ಗಸೂಚಿ ಹೀಗಿದೆ: – ಪ್ಲೇಆಫ್​ ಹಂತದ ಮೊದಲ ಮೂರು ಪಂದ್ಯಗಳಿಗೆ ಹೆಚ್ಚುವರಿ 2 ಗಂಟೆಗಳ ಸಮಯವಕಾಶ ನೀಡಲಾಗುತ್ತದೆ. ಅಂದರೆ ಮೊದಲ 3 ಪಂದ್ಯಗಳು ಮಳೆಯಿಂದ ವಿಳಂಬವಾದರೆ ಓವರ್​ ಕಡಿತಗೊಳಿಸದೇ ರಾತ್ರಿ 9.40 ಕ್ಕೆ ಪಂದ್ಯವನ್ನು ಆಯೋಜಿಸಲಾಗುತ್ತದೆ.

– ಈ ವೇಳೆಯೂ ಮಳೆಯಿಂದ ಅಡಚಣೆ ಉಂಟಾದರೆ 5 ಓವರ್​ಗಳ ಪಂದ್ಯಗಳನ್ನು ಆಡಿಸಲಾಗುತ್ತದೆ. ಅಂದರೆ ಒಂದು ತಂಡಕ್ಕೆ 5 ಓವರ್​ಗಳ ಇನಿಂಗ್ಸ್​ ಇರಲಿದೆ. ಈ ಪಂದ್ಯವನ್ನು ಆಯೋಜಿಸಲು ರಾತ್ರಿ 11.56 ರವರೆಗೆ ಸಮಯ ನಿಗದಿ ಮಾಡಲಾಗಿದೆ.

– 5 ಓವರ್​ಗಳ ಪಂದ್ಯ ನಡೆಸಲು ನಿರ್ಧರಿಸಿದರೆ ಟೈಮ್ ಔಟ್ ಇರುವುದಿಲ್ಲ. ಹಾಗೆಯೇ ರಾತ್ರಿ 12.50 ರೊಳಗೆ ಪಂದ್ಯ ಮುಗಿಯಬೇಕು ಎಂದು ತಿಳಿಸಲಾಗಿದೆ.

– ರಾತ್ರಿ 12.50 ರೊಳಗೆ ಪಂದ್ಯ ಮುಗಿಸಲು ಸಾಧ್ಯವಾಗದ ಪರಿಸ್ಥಿತಿಯಿದ್ದರೆ, ಸೂಪರ್ ಓವರ್ ಆಡಿಸಲಾಗುತ್ತದೆ.

– ಇನ್ನು ಸೂಪರ್ ಓವರ್ ಕೂಡ ಆಡುವಂತಹ ಪರಿಸ್ಥಿತಿ ಇರದಿದ್ದರೆ, ಆ ಪಂದ್ಯವನ್ನು ರದ್ದು ಮಾಡಲಾಗುತ್ತದೆ. ಅಲ್ಲದೆ ಇಲ್ಲಿ ಪಾಯಿಂಟ್ಸ್​ ಟೇಬಲ್​ ಲೆಕ್ಕಚಾರ ಬರಲಿದೆ. ಅಂದರೆ ಲೀಗ್ ಹಂತದಲ್ಲಿ ಅತೀ ಹೆಚ್ಚು ಪಾಯಿಂಟ್ಸ್​ ಪಡೆದಿರುವ ತಂಡವು ಕ್ವಾಲಿಫೈಯರ್ ಆಗಲಿದೆ.

ಉದಾಹರಣೆಗೆ: ಆರ್​ಸಿಬಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವಣ ಪಂದ್ಯದ ವೇಳೆ ಮಳೆ ಬಂದು, ಅಂತಿಮವಾಗಿ ಸೂಪರ್ ಓವರ್​ ಕೂಡ ಆಡಲು ಸಾಧ್ಯವಾಗದಿದ್ದರೆ, ಪಾಯಿಂಟ್ಸ್​ ಟೇಬಲ್​ನಲ್ಲಿ ಮೇಲಿರುವ ತಂಡ ಮುಂದಿನ ಹಂತಕ್ಕೇರಲಿದೆ. ಅಂದರೆ ಇಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ಪಾಯಿಂಟ್ಸ್​ ಟೇಬಲ್​ನಲ್ಲಿ 3ನೇ ಸ್ಥಾನದಲ್ಲಿದೆ. ಹಾಗೆಯೇ ಆರ್​ಸಿಬಿ 4ನೇ ಸ್ಥಾನದಲ್ಲಿದೆ. ಇಲ್ಲಿ ಆರ್​ಸಿಬಿಗಿಂತ ಹೆಚ್ಚಿನ ಪಾಯಿಂಟ್ಸ್​ (18) ಲಕ್ನೋ ತಂಡಕ್ಕಿದ್ದು, ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್​ 2ನೇ ಕ್ವಾಲಿಫೈಯರ್​ಗೆ ಏರಲಿದೆ. ಹಾಗೆಯೇ ಆರ್​ಸಿಬಿ ತಂಡವು ಪಂದ್ಯವಾಡದೆ ಐಪಿಎಲ್​ನಿಂದ ಹೊರಬೀಳಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ