RCB vs MI Playing XI IPL 2022: ಆರ್ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ
RCB vs MI Playing XI IPL 2022: ಈ ಪಂದ್ಯಕ್ಕಾಗಿ RCB ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.
IPL-2022ರ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಆರ್ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ನಲ್ಲೂ ಬದಲಾವಣೆ ಮಾಡಲಾಗಿದೆ. ಆರ್ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್‌ವೆಲ್ ಆಗಮಿಸಿದ್ದು, ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.
ಗ್ಲೆನ್ ಮ್ಯಾಕ್ಸ್‌ವೆಲ್ ಆಗಮನದಿಂದಾಗಿ ಶೆರ್ಫಾನ್ ರುದರ್ಫೋರ್ಡ್ ಆರ್ಸಿಬಿ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ ಡೇನಿಯಸ್ ಸಾಮ್ಸ್ ಬದಲಿಗೆ ರಮಣ್ದೀಪ್ ಅವರನ್ನು ಕಣಕ್ಕಿಳಿಸಿದೆ. ಇದಲ್ಲದೇ ಮುಂಬೈ ತಂಡದಲ್ಲಿ ಟೈಮಲ್ ಮಿಲ್ಸ್ ಸ್ಥಾನದಲ್ಲಿ ಜಯದೇವ್ ಉನದ್ಕತ್ ಕೂಡ ಅವಕಾಶ ಪಡೆದಿದ್ದಾರೆ.
ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್
ಇದನ್ನೂ ಓದಿ: ಐಪಿಎಲ್ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್ಗಳು ಯಾರು ಗೊತ್ತಾ?