RCB vs MI Playing XI IPL 2022: ಆರ್​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ

| Updated By: ಝಾಹಿರ್ ಯೂಸುಫ್

Updated on: Apr 09, 2022 | 7:17 PM

RCB vs MI Playing XI IPL 2022: ಈ ಪಂದ್ಯಕ್ಕಾಗಿ RCB ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

RCB vs MI Playing XI IPL 2022: ಆರ್​ಸಿಬಿ ತಂಡದಲ್ಲಿ ಪ್ರಮುಖ ಬದಲಾವಣೆ: ಉಭಯ ಪ್ಲೇಯಿಂಗ್ 11 ಹೀಗಿದೆ
RCB vs MI Playing XI IPL 2022
Follow us on

IPL-2022ರ 18ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಾಮುಖಿಯಾಗಿದೆ. ಟಾಸ್ ಗೆದ್ದಿರುವ ಆರ್​ಸಿಬಿ ನಾಯಕ ಫಾಫ್ ಡುಪ್ಲೆಸಿಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಮುಂಬೈ ಇಂಡಿಯನ್ಸ್​ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್​ನಲ್ಲೂ ಬದಲಾವಣೆ ಮಾಡಲಾಗಿದೆ. ಆರ್​ಸಿಬಿ ತಂಡಕ್ಕೆ ಗ್ಲೆನ್ ಮ್ಯಾಕ್ಸ್​ವೆಲ್ ಆಗಮಿಸಿದ್ದು, ಹಾಗೆಯೇ ಮುಂಬೈ ಇಂಡಿಯನ್ಸ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದೆ.

ಗ್ಲೆನ್ ಮ್ಯಾಕ್ಸ್​ವೆಲ್​​ ಆಗಮನದಿಂದಾಗಿ ಶೆರ್ಫಾನ್ ರುದರ್​ಫೋರ್ಡ್ ಆರ್​ಸಿಬಿ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ಮುಂಬೈ ಇಂಡಿಯನ್ಸ್​ ತಂಡದಲ್ಲಿ ಡೇನಿಯಸ್ ಸಾಮ್ಸ್ ಬದಲಿಗೆ ರಮಣ್​ದೀಪ್​​ ಅವರನ್ನು ಕಣಕ್ಕಿಳಿಸಿದೆ. ಇದಲ್ಲದೇ ಮುಂಬೈ ತಂಡದಲ್ಲಿ ಟೈಮಲ್ ಮಿಲ್ಸ್ ಸ್ಥಾನದಲ್ಲಿ ಜಯದೇವ್ ಉನದ್ಕತ್ ಕೂಡ ಅವಕಾಶ ಪಡೆದಿದ್ದಾರೆ.

ಮುಂಬೈ ಇಂಡಿಯನ್ಸ್ (ಪ್ಲೇಯಿಂಗ್ XI): ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಡೆವಾಲ್ಡ್ ಬ್ರೆವಿಸ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೀರನ್ ಪೊಲಾರ್ಡ್, ರಮಣದೀಪ್ ಸಿಂಗ್, ಮುರುಗನ್ ಅಶ್ವಿನ್, ಜಯದೇವ್ ಉನದ್ಕತ್, ಜಸ್ಪ್ರೀತ್ ಬುಮ್ರಾ, ಬಾಸಿಲ್ ಥಂಪಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಡೇವಿಡ್ ವಿಲ್ಲಿ, ವನಿಂದು ಹಸರಂಗ, ಹರ್ಷಲ್ ಪಟೇಲ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್

ಇದನ್ನೂ ಓದಿ: ಐಪಿಎಲ್​ನಲ್ಲಿ ಅತೀ ವೇಗವಾಗಿ ಅರ್ಧಶತಕ ಬಾರಿಸಿದ 10 ಬ್ಯಾಟರ್​ಗಳು ಯಾರು ಗೊತ್ತಾ?