
IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 54ನೇ ಪಂದ್ಯದ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರ ಟಿಮ್ ಡೇವಿಡ್ ಅಶ್ಲೀಲವಾಗಿ ಸಂಭ್ರಮಿಸಿದ್ದಾರೆ. ಅದು ಸಹ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿಕೊಂಡು. ರಾಯ್ಪುರ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡವು 20 ಓವರ್ಗಳಲ್ಲಿ 167 ರನ್ ಕಲೆಹಾಕಿದ್ದರು.
ಈ ಗುರಿಯನ್ನು ಬೆನ್ನತ್ತಿದ ಆರ್ಸಿಬಿ ತಂಡಕ್ಕೆ ಗೆಲ್ಲಲು ಕೊನೆಯ ಓವರ್ನಲ್ಲಿ 15 ರನ್ಗಳು ಬೇಕಿತ್ತು. ಅದರಂತೆ ಅಂತಿಮ ಎಸೆತದಲ್ಲಿ 2 ರನ್ಗಳ ಅವಶ್ಯಕತೆ ಙಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ರಾಸಿಖ್ ದಾರ್ ರೋಚಕ ಗೆಲುವು ತಂದು ಕೊಟ್ಟಿದ್ದರು. ಇತ್ತ ಆರ್ಸಿಬಿ ಗೆಲ್ಲುತ್ತಿದ್ದಂತೆ ಡಗೌಟ್ನಲ್ಲಿದ್ದ ಟಿಮ್ ಡೇವಿಡ್ ಮುಂಬೈ ಇಂಡಿಯನ್ಸ್ ತಂಡವನ್ನು ಗುರಿಯಾಗಿಸಿ ಮಧ್ಯ ಬೆರಳು ತೋರಿಸಿ ಅಸಭ್ಯವಾಗಿ ಸಂಭ್ರಮಿಸಿದ್ದಾರೆ.
ಇದೀಗ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಟಿಮ್ ಡೇವಿಡ್ ವಿರುದ್ಧ ಮ್ಯಾಚ್ ರೆಫರಿ ಕ್ರಮ ಜರುಗಿಸುವ ಸಾಧ್ಯತೆಯಿದೆ. ಏಕೆಂದರೆ ಕ್ರಿಕೆಟ್ ಆಟದಲ್ಲಿ ಇಂತಹ ಸನ್ನೆಗಳನ್ನು ಮಾಡುವುದು ‘ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್’ (ICC) ನ ನೀತಿ ಸಂಹಿತೆಯ ಅಡಿಯಲ್ಲಿ ಗಂಭೀರ ಅಪರಾಧವೆಂದು ಪರಿಗಣಿಸಲಾಗುತ್ತದೆ.
ಈ ಅಪರಾಧದ ಪ್ರಕಾರ: ಮಧ್ಯದ ಬೆರಳು ತೋರಿಸುವುದು ಅಸಭ್ಯ, ಆಕ್ಷೇಪಾರ್ಹ ಮತ್ತು ಅವಮಾನಕರ ಸನ್ನೆಗಳ ವರ್ಗಕ್ಕೆ ಸೇರುತ್ತದೆ. ಇದು ಸಾಮಾನ್ಯವಾಗಿ ಐಸಿಸಿ ನೀತಿ ಸಂಹಿತೆಯ ಹಂತ 1 (Level 1) ಅಥವಾ ಹಂತ 2 (Level 2) ಉಲ್ಲಂಘನೆಯಾಗಿದೆ.
ಆದರೆ ಇದೀಗ ಗೆಲುವಿನ ಬೆನ್ನಲ್ಲೇ ಮೈಮರೆಯುವ ಮೂಲಕ ಟಿಮ್ ಡೇವಿಡ್ ಅಸಭ್ಯವಾಗಿ ವರ್ತಿಸಿದ್ದಾರೆ. ಹೀಗಾಗಿ ಅವರಿಗೆ ಪಂದ್ಯ ಶುಲ್ಕದ ಶೇ 50 ರಷ್ಟು ಅಥವಾ ಶೇ 100 ರಷ್ಟು ದಂಡ ವಿಧಿಸುವ ಸಾಧ್ಯತೆ ಇದೆ.
Published On - 8:42 am, Mon, 11 May 26