WPL 2025: ಬೆಂಗಳೂರಿನಲ್ಲಿ ಆರ್ಸಿಬಿಗೆ ಬಲಿಷ್ಠ ಮುಂಬೈ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತ ವೀಕ್ಷಣೆ ಹೇಗೆ?
RCB vs MI WPL 2025: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಅಜೇಯ ಓಟವನ್ನು ಮುಂದುವರೆಸಿದೆ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದಿರುವ ಆರ್‌ಸಿಬಿ, ಇಂದು ತನ್ನ ತವರು ಮೈದಾನದಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಎದುರಾಳಿ ಮೊದಲ ಆವೃತ್ತಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್. ಸ್ಮೃತಿ ಮಂಧಾನ ನೇತೃತ್ವದ ಆರ್‌ಸಿಬಿ ಹ್ಯಾಟ್ರಿಕ್ ಗೆಲುವಿನತ್ತ ಮುನ್ನುಗ್ಗಲಿದೆ, ಆದರೆ ಮುಂಬೈ ಸಹ ಬಲಿಷ್ಠ ತಂಡವಾಗಿದೆ.

ಮೂರನೇ ಆವೃತ್ತಿಯ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಇಂದು ತನ್ನ ತವರು ಮೈದಾನದಲ್ಲಿ ಅಂದರೆ ಬೆಂಗಳೂರಿನಲ್ಲಿ ಮೊದಲ ಪಂದ್ಯವನ್ನು ಆಡಲಿದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಲ್ಲಿ ಬಲಿಷ್ಠ ತಂಡಗಳನ್ನು ಮಕಾಡೆ ಮಲಗಿಸಿರುವ ಸ್ಮೃತಿ ಪಡೆಗೆ ಇಂದು ಮತ್ತೊಂದು ಅಗ್ನಿಪರೀಕ್ಷೆ ಎದುರಾಗಲಿದೆ. ಏಕೆಂದರೆ ಆರ್ಸಿಬಿಯ ಇಂದಿನ ಎದುರಾಳಿ ಮೊದಲ ಆವೃತ್ತಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್. ಹೌದು.. ಇಂದು ತಮ್ಮ ತವರು ಮೈದಾನದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಸ್ಮೃತಿ ಮಂಧಾನ ಪಡೆ, ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಸೀಸನ್ನಲ್ಲಿ ಇಲ್ಲಿಯವರೆಗೆ ಉತ್ತಮ ಪ್ರದರ್ಶನ ನೀಡಿದ್ದು, ಆಡಿದ ಎರಡೂ ಪಂದ್ಯಗಳನ್ನು ಗೆದ್ದಿದೆ. ಆರ್‌ಸಿಬಿ ಈಗ ಮುಂಬೈ ಇಂಡಿಯನ್ಸ್ ವಿರುದ್ಧ ಹ್ಯಾಟ್ರಿಕ್ ಗೆಲುವಿನತ್ತ ಗಮನ ಹರಿಸಿದೆ.
ಆರ್‌ಸಿಬಿ ಅಜೇಯ ಓಟ
ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ 200 ಕ್ಕೂ ಹೆಚ್ಚು ರನ್‌ಗಳ ಗುರಿಯನ್ನು ಬೆನ್ನಟ್ಟಿದ್ದ ಆರ್‌ಸಿಬಿ, ಆ ನಂತರ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸಹ ಸುಲಭವಾಗಿ ಸೋಲಿಸಿತ್ತು. ಈ ಮೂಲಕ ಸ್ಮೃತಿ ಮಂಧಾನ ನೇತೃತ್ವದ ತಂಡ ನಾಲ್ಕು ಅಂಕಗಳನ್ನು ಹೊಂದಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಆರ್ಸಿಬಿಯನ್ನು ಹೊರತುಪಡಿಸಿ ಟೂರ್ನಿಯಲ್ಲಿ ಬೇರೆ ಯಾವುದೇ ತಂಡ ಇದುವರೆಗೆ ಆಡಿರುವ ಎಲ್ಲಾ ಪಂದ್ಯಗಳನ್ನು ಗೆದ್ದಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲೂ ಆರ್ಸಿಬಿಯೇ ಗೆಲುವಿನ ಫೇವರೇಟ್ ಎನಿಸಿಕೊಂಡಿದೆ.
ಬಲಿಷ್ಠ ಮುಂಬೈ
ಇತ್ತ ಮುಂಬೈ ತಂಡ ತುಂಬಾ ಬಲಿಷ್ಠವಾಗಿದ್ದು, ಅವರನ್ನು ಸೋಲಿಸುವುದು ಸುಲಭವಲ್ಲ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ, ನ್ಯಾಟ್ ಸಿವರ್-ಬ್ರಂಟ್ ಅವರ ಅತ್ಯುತ್ತಮ ಬ್ಯಾಟಿಂಗ್ (59 ಎಸೆತಗಳಲ್ಲಿ 80 ರನ್‌ಗಳು) ಮತ್ತು ಹರ್ಮನ್‌ಪ್ರೀತ್ ಅವರ 73 ರನ್‌ಗಳ ಪಾಲುದಾರಿಕೆಯ ಹೊರತಾಗಿಯೂ, ತಂಡವು ಸೋಲನ್ನು ಎದುರಿಸಬೇಕಾಯಿತು. ಈಗ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡವು ಬಲವಾದ ಪುನರಾಗಮನ ಮಾಡಲು ಬದ್ಧವಾಗಿದೆ.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ಯಾವಾಗ ನಡೆಯಲ್ಲಿದೆ?
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ಶುಕ್ರವಾರ (ಫೆಬ್ರವರಿ 21, 2025) ನಡೆಯಲಿದೆ.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ?
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯವು ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ಯಾವ ಸಮಯಕ್ಕೆ ಆರಂಭವಾಗಲಿದೆ?
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯ ವು ಭಾರತೀಯ ಕಾಲಮಾನ ಸಂಜೆ 7:30 ಕ್ಕೆ ಪ್ರಾರಂಭವಾಗಲಿದೆ. ಇದರ ಟಾಸ್ ಅರ್ಧ ಗಂಟೆ ಮುಂಚಿತವಾಗಿ ಸಂಜೆ 7:00 ಗಂಟೆಗೆ ನಡೆಯಲಿದೆ.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯವನ್ನು ಟಿವಿಯಲ್ಲಿ ಎಲ್ಲಿ ವೀಕ್ಷಿಸಬಹುದು?
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯವನ್ನು ನೀವು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೇರಪ್ರಸಾರ ವೀಕ್ಷಿಸಬಹುದು.
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಎಲ್ಲಿ ವೀಕ್ಷಿಸಬೇಕು?
ಆರ್‌ಸಿಬಿ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಡಬ್ಲ್ಯುಪಿಎಲ್ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ನೀವು ಜಿಯೋಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ವೀಕ್ಷಿಸಬಹುದು.
ಎರಡು ತಂಡಗಳು ಇಂತಿವೆ
ಮುಂಬೈ ಇಂಡಿಯನ್ಸ್: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಯಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನಾಡಿನ್ ಡಿ ಕ್ಲರ್ಕ್, ಸಂಸ್ಕೃತಿ ಗುಪ್ತಾ, ಸೈಕಾ ಇಶಾಕ್, ಶಬ್ನಿಮ್ ಇಸ್ಮಾಯಿಲ್, ಜಿಂಟಿಮಣಿ ಕಲಿತಾ, ಜಿ ಕಮಲಿನಿ, ಅಮನ್‌ದೀಪ್ ಕೌರ್, ಅಮನ್‌ಜೋತ್ ಕೌರ್, ಸತ್ಯಮೂರ್ತಿ ಕೀರ್ತನಾ, ಅಮೇಲಿಯಾ ಕೆರ್, ಅಕ್ಷಿತಾ ಮಹೇಶ್ವರಿ, ಹೇಲಿ ಮ್ಯಾಥ್ಯೂಸ್, ಸಜೀವನ್ ಸಜ್ನಾ, ನಾಟ್ ಸಿವರ್-ಬ್ರಂಟ್, ಪರುಣಿಕಾ ಸಿಸೋಡಿಯಾ, ಕ್ಲೋಯ್ ಟ್ರಯಾನ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಸ್ಮೃತಿ ಮಂಧಾನ (ನಾಯಕಿ), ಕನಿಕಾ ಅಹುಜಾ, ಏಕ್ತಾ ಬಿಶ್ತ್, ಚಾರ್ಲಿ ಡೀನ್, ಕಿಮ್ ಗಾರ್ತ್, ರಿಚಾ ಘೋಷ್, ಹೀದರ್ ಗ್ರಹಾಂ, ವಿಜೆ ಜೋಶಿತಾ, ಸಬ್ಬಿನೇನಿ ಮೇಘನಾ, ನುಝತ್ ಪರ್ವೀನ್, ಜಾಗ್ರವಿ ಪವಾರ್, ಎಲ್ಲಿಸ್ ಪೆರ್ರಿ, ರಾಘವಿ ಬಿಸ್ಟ್, ಸ್ನೇಹ್ ರಾಣಾ, ಪ್ರೇಮಾ ರಾವತ್, ರೇಣುಕಾ ಸಿಂಗ್, ಜಾರ್ಜಿಯಾ ವೇರ್‌ಹ್ಯಾಮ್, ಡ್ಯಾನಿ ವ್ಯಾಟ್-ಹಾಡ್ಜ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
