AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs PBKS, IPL 2024: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ?: ಎದುರಾಳಿ ಯಾರು?, ಎಷ್ಟು ಗಂಟೆಗೆ?

When RCB Next Match: ಐಪಿಎಲ್ 2024ರ ಸಿಎಸ್​ಕೆ ವಿರುದ್ಧದ ಮೊದಲ ಪಂದ್ಯದಲ್ಲಿ ಸೋತು ಆರ್​ಸಿಬಿ ತನ್ನ ಕೆಟ್ಟ ದಾಖಲೆಯನ್ನು ಮುಂದುವರೆಸಿದೆ. ಇದೀಗ ಎರಡನೇ ಪಂದ್ಯದ ಮೇಲೆ ಕಣ್ಣಿಟ್ಟಿದೆ. ಹಾಗಾದರೆ, ಬೆಂಗಳೂರು ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ?, ಎಲ್ಲಿ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

RCB vs PBKS, IPL 2024: ಆರ್​ಸಿಬಿ ಮುಂದಿನ ಪಂದ್ಯ ಯಾವಾಗ?: ಎದುರಾಳಿ ಯಾರು?, ಎಷ್ಟು ಗಂಟೆಗೆ?
RCB vs PBKS
Vinay Bhat
|

Updated on:Mar 23, 2024 | 6:49 AM

Share

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸೋಲಿನೊಂದಿಗೆ ಆರಂಭಿಸಿದೆ. ಶುಕ್ರವಾರ ಚೆಪಾಕ್ ಸ್ಟೇಡಿಯಂನಲ್ಲಿ ನಡೆದ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK vs RCB) 6 ವಿಕೆಟ್​ಗಳ ಜಯ ಕಂಡಿತು. ಬ್ಯಾಟಿಂಗ್​ನಲ್ಲಿ ಉತ್ತಮ ಪ್ರದರ್ಶನ ತೋರಿದರೂ ಆರ್​ಸಿಬಿ ಬೌಲಿಂಗ್ ಸೋಲಿಗೆ ಪ್ರಮುಖ ಕಾರಣವಾಯಿತು. ಈ ಮೂಲಕ ಮೊದಲ ಪಂದ್ಯದಲ್ಲಿ ಸೋತು ತನ್ನ ಕೆಟ್ಟ ದಾಖಲೆಯನ್ನು ಮುಂದುವರೆಸಿದೆ. ಇದೀಗ ಎರಡನೇ ಪಂದ್ಯದ ಮೇಲೆ ಆರ್​ಸಿಬಿ ಕಣ್ಣಿಟ್ಟಿದೆ. ಹಾಗಾದರೆ, ಬೆಂಗಳೂರು ಮುಂದಿನ ಮ್ಯಾಚ್ ಯಾವಾಗ?, ಯಾರ ವಿರುದ್ಧ?, ಎಲ್ಲಿ?, ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಂದಿನ ಪಂದ್ಯ ಯಾರ ವಿರುದ್ಧ? ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಪಂದ್ಯವನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಆಡಲಿದೆ.

ಬೆಂಗಳೂರು ಮತ್ತು ಪಂಜಾಬ್ ನಡುವಿನ ಪಂದ್ಯ ಯಾವಾಗ ನಡೆಯಲಿದೆ? ಬೆಂಗಳೂರು ಮತ್ತು ಪಂಜಾಬ್ ನಡುವಿನ 2024 ರ ಐಪಿಎಲ್ ಪಂದ್ಯ ಮಾರ್ಚ್ 25 ಸೋಮವಾರದಂದು ನಡೆಯಲಿದೆ.

ಸೋಲಿನೊಂದಿಗೆ ಲೀಗ್ ಆರಂಭಿಸಿದ ಆರ್​ಸಿಬಿ

ಆರ್​ಸಿಬಿ-ಪಂಜಾಬ್ ನಡುವಿನ 2024 ರ ಐಪಿಎಲ್ ಪಂದ್ಯ ಎಲ್ಲಿ ನಡೆಯಲಿದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯ ಯಾವ ಸಮಯಕ್ಕೆ ಪ್ರಾರಂಭವಾಗುತ್ತದೆ? ಆರ್​ಸಿಬಿ-ಪಂಜಾಬ್ ನಡುವಿನ ಐಪಿಎಲ್ ಪಂದ್ಯ ಸಂಜೆ 7:30ಕ್ಕೆ ಆರಂಭವಾಗಲಿದೆ.

ಆರ್​ಸಿಬಿ-ಪಂಜಾಬ್ ನಡುವಿನ ಪಂದ್ಯ ಟಿವಿಯಲ್ಲಿ ಎಲ್ಲಿ ಪ್ರಸಾರವಾಗುತ್ತದೆ? ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ.

‘ಅವರು ನನ್ನ ಪಕ್ಕ ಕುಳಿತುಕೊಳ್ಳುತ್ತಿರಲಿಲ್ಲ’: ಧೋನಿ ಬಗ್ಗೆ ಕುತೂಹಲಕಾರಿ ಸಂಗತಿ ಬಿಚ್ಚಿಟ್ಟ ಸಚಿನ್ ತೆಂಡೂಲ್ಕರ್

ರಾಯಲ್ ಚಾಲೆಂಜರ್ಸ್ ಬೆಂಗಳೂರು-ಪಂಜಾಬ್ ಕಿಂಗ್ಸ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಯಾವ ಅಪ್ಲಿಕೇಶನ್‌ನಲ್ಲಿ ಇರಲಿದೆ? ಆರ್​ಸಿಬಿ-ಪಂಜಾಬ್ ನಡುವಿನ ಪಂದ್ಯದ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಇರುತ್ತದೆ.

ಉಭಯ ತಂಡಗಳು

ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಸುಯ್ಯಾಶ್ ಪ್ರಭುದೇಸಾಯಿ, ವಿಲ್ ಜಾಕ್ವೆಸ್, ಮಹಿಪಾಲ್ ಲೊಮ್ರೋರ್, ಕರ್ಣ್ ಶರ್ಮಾ, ಮನೋಜ್ ಭಾಂಡಗೆ, ಮಯಾಂಕ್ ದಾಗರ್, ವಿಜಯಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಹಿಮಾಂಶು ಶರ್ಮಾ, ರಾಜನ್ ಕುಮಾರ್, ಕ್ಯಾಮರೂನ್ ಗ್ರೀನ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಟಾಮ್ ಕರನ್, ಲಾಕಿ ಫರ್ಗುಸನ್, ಸ್ವಪ್ನಿಲ್ ಸಿಂಗ್, ಸೌರವ್ ಚೌಹಾನ್.

ಪಂಜಾಬ್ ಕಿಂಗ್ಸ್: ಶಿಖರ್ ಧವನ್ (ನಾಯಕಸಿ), ಪ್ರಭಾಸಿಮ್ರಾನ್ ಸಿಂಗ್, ಜಾನಿ ಬೈರ್‌ಸ್ಟೋವ್, ಸಿಖಂದರ್ ರಾಜಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕರ್ರಾನ್, ಹರ್ಷಲ್ ಪಟೇಲ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್, ಕಗಿಸೊ ರಬಾಡ, ಹರ್‌ಪ್ರೀತ್ ಬ್ರಾರ್, ನಾಥನ್ ಎಲ್ಲಿಸ್, ಶಿವಂ ಸಿಂಗ್, ಕ್ರಿಸ್ ವೋಕ್ಸ್, ಲಿಯಾಮ್ ಲಿವಿಂಗ್‌ಸ್ಟೋನ್, ರಿಲೀ ರೋಸೌವ್, ಹರ್‌ಪ್ರೀತ್ ಸಿಂಗ್ ಭಾಟಿಯಾ, ರಿಷಿ ಧವನ್, ಶಶಾಂಕ್ ಸಿಂಗ್, ತನಯ್ ತ್ಯಾಗರಾಜನ್, ಅಶುತೋಷ್ ಶರ್ಮಾ, ಅಥರ್ವ ಟೈಡೆ, ವಿಧ್ವತ್ ಕಾವೇರಪ್ಪ, ಪ್ರಿನ್ಸ್ ಚೌಧರಿ, ವಿಶ್ವನಾಥ್ ಸಿಂಗ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:49 am, Sat, 23 March 24