IPL 2025: ತವರಿನಲ್ಲಿ 4ನೇ ಪಂದ್ಯವನ್ನಾಡಲು ಆರ್ಸಿಬಿ ಸಜ್ಜು; ಪಂದ್ಯ ಯಾವಾಗ ಆರಂಭ?
RCB vs RR IPL 2025 Match 42: ಏಪ್ರಿಲ್ 24ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 2025ರ 42ನೇ ಪಂದ್ಯದಲ್ಲಿ ಆರ್ಸಿಬಿ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಲಿವೆ. ತವರಿನಲ್ಲಿ ಸೋಲಿನ ಸರಮಾಲೆಯನ್ನು ಎದುರಿಸುತ್ತಿರುವ ಆರ್ಸಿಬಿ ಪ್ಲೇ ಆಫ್ ಗೆ ಅರ್ಹತೆ ಪಡೆಯಲು ಹೋರಾಡಲಿದೆ. ರಾಜಸ್ಥಾನ್ ಕೂಡ ಪ್ಲೇ ಆಫ್ ರೇಸ್ ನಲ್ಲಿ ಜೀವಂತವಾಗಿರಲು ಹೋರಾಡಬೇಕಿದೆ. ಪಂದ್ಯದ ನೇರಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಮತ್ತು ಜಿಯೋ ಹಾಟ್‌ಸ್ಟಾರ್‌ನಲ್ಲಿ ಲಭ್ಯವಿರುತ್ತದೆ.

ಐಪಿಎಲ್ 2025 (IPL 2025) ರ 42ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ರಾಜಸ್ಥಾನ್ ರಾಯಲ್ಸ್ (RCB vs RR) ನಡುವೆ ನಡೆಯಲಿದೆ. ತವರಿನಲ್ಲಿ ನಡೆಯುತ್ತಿರುವ ನಾಲ್ಕನೇ ಪಂದ್ಯವನ್ನಾಡದರೂ ಗೆಲ್ಲುವ ಮೂಲಕ ಆರ್ಸಿಬಿ ಪ್ಲೇಆಫ್‌ಗೆ ಇನ್ನಷ್ಟು ಸನಿಹವಾಗಲು ಮತ್ತು ತವರಿನಲ್ಲಿ ಸೋಲಿನ ಸರಣಿಯನ್ನು ಮುಂದುವರೆಸಲು ಯತ್ನಿಸಲಿದೆ. ಏಕೆಂದರೆ ತವರಿನಲ್ಲಿ ಆಡಿರುವ 3 ಪಂದ್ಯಗಳನ್ನು ಸೋತಿರುವ ಆರ್ಸಿಬಿಗೆ ನಾಳಿನ ಪಂದ್ಯ ಅತ್ಯಂತ ಮಹತ್ವದಾಗಿದೆ. ಇತ್ತ ರಾಜಸ್ಥಾನ್ ಕೂಡ ಕಳೆದ ಮುಖಾಮುಖಿಯ ಸೋಲಿಗೆ ಸೇಡು ತೀರಿಸಿಕೊಳ್ಳಲು ಹಾಗೂ ಪ್ಲೇ ಆಫ್ ರೇಸ್ನಲ್ಲಿ ಜೀವಂತವಾಗಿರಲು ಹೋರಾಡಲಿದೆ. ಏಕೆಂದರೆ ರಾಜಸ್ಥಾನ್ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಎರಡನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 10 ರಲ್ಲಿ ಎಂಟನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಆರ್ಸಿಬಿ ಆಡಿರುವ ಎಂಟು ಪಂದ್ಯಗಳಲ್ಲಿ ಕೇವಲ ಮೂರು ಪಂದ್ಯಗಳನ್ನು ಸೋತು 10 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ
ಹೆಡ್ ಟು ಹೆಡ್
ಇಲ್ಲಿಯವರೆಗೆ ಎರಡೂ ತಂಡಗಳ ನಡುವೆ ನಡೆದ 32 ಪಂದ್ಯಗಳಲ್ಲಿ, ಆರ್ಸಿಬಿ 16 ರಲ್ಲಿ ಗೆದ್ದಿದ್ದರೆ, ರಾಜಸ್ಥಾನ್ 14 ರಲ್ಲಿ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳು ಯಾವುದೇ ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ. ಆದಾಗ್ಯೂ, ಬೆಂಗಳೂರಿನಲ್ಲಿ ನಡೆದ ಪಂದ್ಯಗಳಲ್ಲಿ ರಾಜಸ್ಥಾನ್ ನಾಲ್ಕು ಪಂದ್ಯಗಳನ್ನು ಗೆದ್ದಿದ್ದರೆ, ಆರ್ಸಿಬಿ ಮೂರು ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳು ಫಲಿತಾಂಶವಿಲ್ಲದೆ ಕೊನೆಗೊಂಡಿವೆ. ಕಳೆದ ಬಾರಿ ಜೈಪುರದಲ್ಲಿ ಎರಡೂ ತಂಡಗಳು ಮುಖಾಮುಖಿಯಾದಾಗ ಆರ್ಸಿಬಿ ಒಂಬತ್ತು ವಿಕೆಟ್‌ಗಳ ಜಯ ಸಾಧಿಸಿತ್ತು.
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಯಾವಾಗ ನಡೆಯಲಿದೆ?
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಏಪ್ರಿಲ್ 24 ರಂದು ನಡೆಯಲಿದೆ.
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಎಲ್ಲಿ ನಡೆಯಲಿದೆ?
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ.
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಎಷ್ಟು ಗಂಟೆಗೆ ಆರಂಭವಾಗಲಿದೆ?
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಸಂಜೆ 7:30 ಕ್ಕೆ ಆರಂಭವಾಗಲಿದೆ.
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯ ಯಾವ ಚಾನೆಲ್ನಲ್ಲಿ ನೇರಪ್ರಸಾರ?
ಆರ್ಸಿಬಿ ಹಾಗೂ ರಾಜಸ್ಥಾನ್ ನಡುವಿನ ಐಪಿಎಲ್ 42ನೇ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ವೀಕ್ಷಿಸಬಹುದಾಗಿದೆ.
IPL 2025: ಬ್ಯಾಟ್ಗೂ ತಾಗಲಿಲ್ಲ, ಅಂಪೈರೂ ಔಟ್ ಕೊಡಲಿಲ್ಲ; ಔಟೆಂದು ತಾನೇ ಪೆವಿಲಿಯನ್ ಸೇರಿಕೊಂಡ ಕಿಶನ್
ಉಭಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಯಶ್ ದಯಾಳ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಲಿಯಾಮ್ ಲಿವಿಂಗ್‌ಸ್ಟೋನ್, ಜೋಶ್ ಹೇಜಲ್‌ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ನುವಾನ್ ತುಷಾರ, ಜೇಕಬ್ ಬೆಥೆಲ್, ಮನೋಜ್ ಭಾಂಡಗೆ, ದೇವದತ್ತ್ ಪಡಿಕ್ಕಲ್, ಸ್ವಸ್ತಿಕ್ ಚಿಕಾರಾ, ಲುಂಗಿ ಎನ್‌ಗಿಡಿ, ಅಭಿನಂದನ್ ಸಿಂಗ್, ಮೋಹಿತ್ ರಾಠಿ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಧ್ರುವ್ ಜುರೆಲ್, ರಿಯಾನ್ ಪರಾಗ್, ಶಿಮ್ರೋನ್ ಹೆಟ್ಮೆಯರ್, ಸಂದೀಪ್ ಶರ್ಮಾ, ಜೋಫ್ರಾ ಆರ್ಚರ್, ವನಿಂದು ಹಸರಂಗ, ಮಹೇಶ್ ತೀಕ್ಷಣ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ತುಷಾರ್ ದೇಶಪಾಂಡೆ, ನಿತೀಶ್ ರಾಣಾ, ಫಜಲ್ಹಕ್ ಫಾರೂಕಿ, ಶುಭಂ ದುಬೆ, ಯುಧ್ವೀರ್ ಚರಕ್, ವೈಭವ್ ಸೂರ್ಯವಂಶಿ, ಕುನಾಲ್ ರಾಥೋಡ್, ಕ್ವೆನಾ ಮಫಕಾ, ಅಶೋಕ್ ಶರ್ಮಾ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ