
ಐಪಿಎಲ್ 2026 (IPL 2026) ರ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು (RCB vs SRH) ಎದುರಿಸಲಿದೆ. ಈ ಪಂದ್ಯ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ತೀವ್ರ ತಯಾರಿ ನಡೆಸುತ್ತಿವೆ. ಆದಾಗ್ಯೂ ಮೊದಲ ಪಂದ್ಯಕ್ಕೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗ ಹೇಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ. ಏಕೆಂದರೆ ಮಿನಿ ಹರಾಜಿನ ಬಳಿಕ ಎಲ್ಲಾ ತಂಡಗಳಿಗೆ ಉದಯೋನ್ಮುಖ ಆಟಗಾರರ ಆಗಮನವಾಗಿದೆ. ಹಾಗೆಯೇ ಕೆಲವು ಆಟಗಾರರ ಇಂಜುರಿಯಿಂದ ಅವರ ಸ್ಥಾನದಲ್ಲಿ ಯಾರು ಆಡುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಹಾಲಿ ಚಾಂಪಿಯನ್ ಆರ್ಸಿಬಿ ತನ್ನ ಪ್ಲೇಯಿಂಗ್ 11ನಲ್ಲಿ ಹೆಚ್ಚಿನ ಬದಲಾವಣೆಗಳನ್ನು ಮಾಡಲು ಹೋಗುವುದಿಲ್ಲ. ಏಕೆಂದರೆ ತಂಡವನ್ನು ಚಾಂಪಿಯನ್ ಮಾಡಿದ್ದ ಅದೇ 11 ಆಟಗಾರರನ್ನು ಕಣಕ್ಕಿಳಿಸಲು ಆಡಳಿತ ಮಂಡಳಿ ನೋಡಲಿದೆ. ಆದರೆ ಕೆಲವು ಆಟಗಾರರ ಅಲಭ್ಯತೆ ಹಾಗೂ ಕೆಲವರ ಇಂಜುರಿ ಸಮಸ್ಯೆಯಿಂದ ತಂಡದಲ್ಲಿ ಬದಲಾವಣೆಗಳನ್ನು ಮಾಡಲೇಬೇಕಾಗಿದೆ.
ಮೊದಲಿಗೆ ಆರ್ಸಿಬಿಯ ಬ್ಯಾಟಿಂಗ್ ವಿಭಾಗವನ್ನು ನೋಡುವುದಾದರೆ.. ಕಳೆದ ಬಾರಿಯಂತೆ ಈ ಬಾರಿಯೂ ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ನಾಯಕ ರಜತ್ ಪಾಟಿದಾರ್ ಮತ್ತು ದೇವದತ್ ಪಡಿಕ್ಕಲ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಟಿಮ್ ಡೇವಿಡ್ ಮತ್ತು ರೊಮಾರಿಯೊ ಶೆಫರ್ಡ್ ಫಿನಿಶಿಂಗ್ ಜವಾಬ್ದಾರಿಯನ್ನು ವಹಿಸಲಿದ್ದಾರೆ. ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ಜಿತೇಶ್ ಶರ್ಮಾ ನಿರ್ವಹಿಸಿದರೆ, ಸ್ಪಿನ್ ಆಲ್ರೌಂಡರ್ ಆಗಿ ಕೃನಾಲ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.
ಜೋಶ್ ಹೇಜಲ್‌ವುಡ್ ಬದಲಿಗೆ ಕಿವೀಸ್ ವೇಗಿ ಜಾಕೋಬ್ ಡಫಿ ಬೌಲಿಂಗ್ ವಿಭಾಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇವರ ಜೊತೆಗೆ ಅನುಭವಿ ವೇಗಿ ಭುವನೇಶ್ವರ ಕುಮಾರ್ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಇವರಿಬ್ಬರ ಜೊತೆಗೆ ಸುಯಾಶ್ ಶರ್ಮಾ ಮತ್ತು ಎಡಗೈ ವೇಗದ ಬೌಲರ್ ಮಂಗೇಶ್ ಯಾದವ್ ತಂಡದಲ್ಲಿ ಅಡುವ ಅವಕಾಶ ಪಡೆಯಬಹುದು.
ಇತ್ತ ಸನ್‌ರೈಸರ್ಸ್ ಹೈದರಾಬಾದ್ ತಂಡದ ಬ್ಯಾಟಿಂಗ್ ವಿಭಾಗದಲ್ಲಿ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಇನ್ನಿಂಗ್ಸ್ ಆರಂಭಿಸಲಿದ್ದಾರೆ. ಇಶಾನ್ ಕಿಶನ್ ಮತ್ತು ಹೆನ್ರಿಕ್ ಕ್ಲಾಸೆನ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಲಿಯಾಮ್ ಲಿವಿಂಗ್‌ಸ್ಟೋನ್ ಕೆಳ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬೌಲಿಂಗ್ ವಿಭಾಗದಲ್ಲಿ ಹರ್ಷಲ್ ಪಟೇಲ್, ಜಯದೇವ್ ಉನಾದ್ಕತ್, ಬ್ರೈಡನ್ ಕಾರ್ಸೆ, ಶಿವಂ ಮಾವಿ ಕಾಣಿಸಿಕೊಳ್ಳಲಿದ್ದಾರೆ.
IPL 2026: ಆರ್ಸಿಬಿ- ಎಸ್‌ಆರ್‌ಎಚ್ ಪಂದ್ಯ ಎಷ್ಟು ಗಂಟೆಗೆ ಆರಂಭ? ಉಚಿತವಾಗಿ ವೀಕ್ಷಿಸುವುದು ಹೇಗೆ?
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜಾಕೋಬ್ ಡಫಿ.
ಸನ್‌ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್‌ಸ್ಟೋನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಬ್ರೇಡನ್ ಕಾರ್ಸೆ, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಶಿವಂ ಮಾವಿ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:45 pm, Fri, 27 March 26