AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?

IPL 2026 RCB vs SRH Head-to-Head Stats: ಮಾರ್ಚ್ 28 ರಂದು ಚಿನ್ನಸ್ವಾಮಿಯಲ್ಲಿ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್​ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ಮುಖಾಮುಖಿಯಾಗಲಿವೆ. ಎಸ್ಆರ್ಹೆಚ್ ಬಲಿಷ್ಠ ಬ್ಯಾಟಿಂಗ್ ಹೊಂದಿದ್ದರೆ, ಆರ್‌ಸಿಬಿ ಸಮತೋಲಿತ ತಂಡವಾಗಿದೆ. ಐಪಿಎಲ್ ಇತಿಹಾಸದಲ್ಲಿ ಎಸ್ಆರ್ಹೆಚ್​ಗೆ ಸಣ್ಣ ಮೇಲುಗೈ ಇದ್ದರೂ, ಇತ್ತೀಚಿನ ಪಂದ್ಯಗಳಲ್ಲಿ ಆರ್‌ಸಿಬಿ ಉತ್ತಮ ಪ್ರದರ್ಶನ ನೀಡಿದೆ. ಈ ಮಹಾ ಕದನದಲ್ಲಿ ಯಾವ ತಂಡ ಗೆಲ್ಲುತ್ತದೆ ಎಂದು ಕಾದು ನೋಡೋಣ.

IPL 2026: ಆರ್​ಸಿಬಿ- ಎಸ್‌ಆರ್‌ಎಚ್ ಮುಖಾಮುಖಿ ದಾಖಲೆ ಹೇಗಿದೆ? ಕಳೆದ 5 ಪಂದ್ಯಗಳ ಫಲಿತಾಂಶವೇನು?
Rcb Vs Srh
ಪೃಥ್ವಿಶಂಕರ
|

Updated on:Mar 27, 2026 | 5:39 PM

Share

ಇಂಡಿಯನ್ ಪ್ರೀಮಿಯರ್ ಲೀಗ್​ನ 19 ನೇ ಸೀಸನ್​ನ (IPL 2026)  ಮೊದಲ ಪಂದ್ಯ ಮಾರ್ಚ್ 28 ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB vs SRH) ನಡುವೆ ನಡೆಯಲಿದೆ. ಒಂದೆಡೆ ಆರ್​ಸಿಬಿ ಹಾಲಿ ಚಾಂಪಿಯನ್ ಆಗಿದ್ದರೆ, ಮತ್ತೊಂದೆಡೆ ಸನ್‌ರೈಸರ್ಸ್ ಹೈದರಾಬಾದ್‌ ಕಳೆದ ಆವೃತ್ತಿಯಲ್ಲಿ 6ನೇ ಸ್ಥಾನಕ್ಕೆ ತೃಪ್ತಿಪಡೆದುಕೊಂಡಿತ್ತು. ಆದಾಗ್ಯೂ ಬಲಿಷ್ಠ ಬ್ಯಾಟಿಂಗ್‌ ವಿಭಾಗವನ್ನು ಹೊಂದಿರುವ ಎಸ್‌ಆರ್‌ಎಚ್ ತಂಡವನ್ನು ಕಡಿಮೆ ಅಂದಾಜು ಮಾಡುವಂತಿಲ್ಲ. ಇತ್ತ ಬ್ಯಾಟಿಂಗ್‌ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿ ಸಮತೋಲನದಿಂದ ಕೂಡಿರುವ ಆರ್​ಸಿಬಿ ಮೈಮರೆಯುವಂತಿಲ್ಲ. ಇನ್ನು ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳ ಮುಖಾಮುಖಿ ದಾಖಲೆಯನ್ನು ನೋಡುವುದಾದರೆ..

ಹೆಡ್ ಟು ಹೆಡ್ ದಾಖಲೆ

ಅಂಕಿಅಂಶಗಳ ಪ್ರಕಾರ ಸನ್‌ರೈಸರ್ಸ್ ಹೈದರಾಬಾದ್, ಆರ್‌ಸಿಬಿ ವಿರುದ್ಧ ಮೇಲುಗೈ ಸಾಧಿಸಿರುವುದನ್ನು ಗಮಿನಸಬಹುದು. ಐಪಿಎಲ್ ಇತಿಹಾಸದಲ್ಲಿ ಈ ಎರಡೂ ತಂಡಗಳ ನಡುವೆ ಒಟ್ಟು 26 ಪಂದ್ಯಗಳು ನಡೆದಿವೆ. ಇದರಲ್ಲಿ ಸನ್‌ರೈಸರ್ಸ್ ಹೈದರಾಬಾದ್ 13 ಪಂದ್ಯಗಳನ್ನು ಗೆದ್ದಿದ್ದರೆ, ಆರ್‌ಸಿಬಿ 11 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇನ್ನು ಕಳೆದ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್‌ಸಿಬಿ ಅದ್ಭುತ ಪ್ರದರ್ಶನ ನೀಡಿತ್ತಾದರೂ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿತ್ತು. ಇದರ ಹೊರತಾಗಿಯೂ, ಆರ್‌ಸಿಬಿ ಐಪಿಎಲ್ 2025 ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಕಳೆದ 5 ಪಂದ್ಯಗಳ ಫಲಿತಾಂಶ

ಇನ್ನು ಆರ್‌ಸಿಬಿ ಹಾಗೂ ಎಸ್‌ಆರ್‌ಹೆಚ್‌ ನಡುವಿನ ಕಳೆದ ಐದು ಪಂದ್ಯಗಳ ಮುಖಾಮುಖಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೂರರಲ್ಲಿ ಗೆದ್ದಿದೆ . ಇತ್ತೀಚಿನ ದಿನಗಳಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಉತ್ತಮ ದಾಖಲೆಯನ್ನು ಹೊಂದಿದೆ ಎಂದು ಅಂಕಿಅಂಶಗಳು ತೋರಿಸುತ್ತವೆ. ಆದಾಗ್ಯೂ, ಹೊಸ ಆವೃತ್ತಿಯ ಆರಂಭಿಕ ಪಂದ್ಯದಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ನೋಡಲು ಆಸಕ್ತಿದಾಯಕವಾಗಿರುತ್ತದೆ.

IPL 2026: ಯಾವ ಚಾನೆಲ್‌ನಲ್ಲಿ ಐಪಿಎಲ್ ನೇರಪ್ರಸಾರ? ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸುವುದು ಹೇಗೆ?

ಉಭಯ ತಂಡಗಳು

ಆರ್​ಸಿಬಿ ಪೂರ್ಣ ತಂಡ: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ತ್ ಪಡಿಕ್ಕಲ್, ರಜತ್ ಪಾಟಿದಾರ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಜೋರ್ಡಾನ್ ಕಾಕ್ಸ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ವೆಂಕಟೇಶ್ ಅಯ್ಯರ್, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ವಿಕ್ಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾಣ್, ಜೋಶ್ ಹೇಜಲ್​ವುಡ್, ರಸಿಖ್ ದಾರ್, ಸುಯಶ್ ಶರ್ಮಾ, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ಅಭಿನಂದನ್ ಸಿಂಗ್, ಜಾಕೋಬ್ ಡಫಿ, ಯಶ್ ದಯಾಲ್

ಎಸ್‌ಆರ್‌ಎಚ್ ಪೂರ್ಣ ತಂಡ: ಪ್ಯಾಟ್ ಕಮ್ಮಿನ್ಸ್, ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ, ಲಿಯಾಮ್ ಲಿವಿಂಗ್‌ಸ್ಟೋನ್, ಹರ್ಷಲ್ ಪಟೇಲ್, ಕಮಿಂದು ಮೆಂಡಿಸ್, ಬ್ರೈಡನ್ ಕಾರ್ಸೆ, ಹರ್ಷ್ ದುಬೆ, ಅನಿಕೇತ್ ವರ್ಮಾ, ಸ್ಮರಣ್ ರವಿಚಂದ್ರನ್, ಸಲಿಲ್ ಅರೋರಾ, ಜಯ್‌ದೇವ್ ಉನದ್ಕತ್, ಶಿವಂ ಮಾವಿ, ಜೀಶನ್ ಅನ್ಸಾರಿ, ಎಶಾನ್ ಮಾಲಿಂಗ, ಸಾಕಿಬ್ ಹುಸೇನ್ ಮತ್ತು ಡೇವಿಡ್ ಪೇನ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:07 pm, Fri, 27 March 26

Follow Us