AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RCB vs SRH Playing XI IPL 2022: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಆರ್​​ಸಿಬಿ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ

RCB vs SRH Playing XI IPL 2022: ಕಳೆದ ಸೀಸನ್​ನಲ್ಲಿ ಒಂದು ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ಮತ್ತೊಂದು ಪಂದ್ಯದಲ್ಲಿ ಎಸ್​ಆರ್​ಹೆಚ್ ಗೆದ್ದಿದೆ. ಈ ಬಾರಿ ಕೂಡ ಉಭಯ ತಂಡಗಳು 5 ಮತ್ತು ನಾಲ್ಕು ಗೆಲುವು ದಾಖಲಿಸಿರುವ ಕಾರಣ ಸಮಬಲ ಹೊಂದಿದೆ ಎಂದೇ ಹೇಳಬಹುದು.

RCB vs SRH Playing XI IPL 2022: ಬಲಿಷ್ಠ ಪಡೆಯನ್ನು ಕಣಕ್ಕಿಳಿಸಿದ ಆರ್​​ಸಿಬಿ: ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ
RCB vs SRH, Playing XI, IPL 2022
TV9 Web
| Updated By: ಝಾಹಿರ್ ಯೂಸುಫ್|

Updated on: Apr 23, 2022 | 7:21 PM

Share

IPL 2022: ಐಪಿಎಲ್​ನ 36ನೇ ಪಂದ್ಯದಲ್ಲಿ ಆರ್​ಸಿಬಿ ಹಾಗೂ ಎಸ್​ಆರ್​ಹೆಚ್ (RCB vs SRH) ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಎಸ್​ಆರ್​ಹೆಚ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದಾರೆ ಈಗಾಗಲೇ 7 ಪಂದ್ಯಗಳಲ್ಲಿ ಆರ್​ಸಿಬಿ ತಂಡವು 5 ಗೆಲುವು ದಾಖಲಿಸಿದರೆ, ಎಸ್​ಆರ್​ಹೆಚ್​ ತಂಡವು 6 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿದೆ. ಅಂದರೆ ಈ ಬಾರಿಯ ಐಪಿಎಲ್​ನಲ್ಲಿ ಉಭಯ ತಂಡಗಳ ಸಮಬಲ ಹೊಂದಿದೆ ಎನ್ನಬಹುದು. ಇದಾಗ್ಯೂ ಈ ಹಿಂದಿನ ಅಂಕಿ ಅಂಶಗಳಲ್ಲಿ ಆರ್​ಸಿಬಿ ವಿರುದ್ದ ಎಸ್​ಆರ್​ಹೆಚ್ ಮೇಲುಗೈ ಸಾಧಿಸಿದೆ. ಅಂದರೆ ಇದುವರೆಗೆ ಉಭಯ ತಂಡಗಳು ಒಟ್ಟು 20 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಆರ್​ಸಿಬಿ ಗೆದ್ದಿರುವುದು ಕೇವಲ 8 ಬಾರಿ ಮಾತ್ರ. ಆದರೆ ಎಸ್​ಆರ್​ಹೆಚ್ 11 ಬಾರಿ ಗೆಲುವು ದಾಖಲಿಸಿದೆ. ಅಂದರೆ ಆರ್​ಸಿಬಿ ವಿರುದ್ದ ಎಸ್​ಆರ್​ಹೆಚ್​ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದೆ.

ಇನ್ನು ಕಳೆದ ಸೀಸನ್​ನಲ್ಲಿ ಒಂದು ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ಮತ್ತೊಂದು ಪಂದ್ಯದಲ್ಲಿ ಎಸ್​ಆರ್​ಹೆಚ್ ಗೆದ್ದಿದೆ. ಈ ಬಾರಿ ಕೂಡ ಉಭಯ ತಂಡಗಳು 5 ಮತ್ತು ನಾಲ್ಕು ಗೆಲುವು ದಾಖಲಿಸಿರುವ ಕಾರಣ ಸಮಬಲ ಹೊಂದಿದೆ ಎಂದೇ ಹೇಳಬಹುದು. ಇದಾಗ್ಯೂ ಸತತ ನಾಲ್ಕು ಪಂದ್ಯಗಳಲ್ಲಿ ಎಸ್​ಆರ್​ಹೆಚ್​ ಗೆಲ್ಲುವ ಮೂಲಕ ಭರ್ಜರಿ ಪ್ರದರ್ಶನ ನೀಡಿದೆ. ಹೀಗಾಗಿ ಆರ್​ಸಿಬಿಗೆ ಎಸ್​ಆರ್​ಹೆಚ್ ವಿರುದ್ದ ಗೆಲುವು ಸುಲಭವಲ್ಲ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಪ್ಲೇಯಿಂಗ್ 11 ನಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ 11 ಈ ಕೆಳಗಿನಂತಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ಅನುಜ್ ರಾವತ್, ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಸುಯಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ವನಿಂದು ಹಸರಂಗ, ಜೋಶ್ ಹ್ಯಾಝಲ್‌ವುಡ್, ಮೊಹಮ್ಮದ್ ಸಿರಾಜ್

ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ XI: ಕೇನ್ ವಿಲಿಯಮ್ಸನ್ (ನಾಯಕ), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್, ನಿಕೋಲಸ್ ಪೂರನ್, ಶಶಾಂಕ್ ಸಿಂಗ್, ಜಗದೀಶ ಸುಚಿತ್, ಭುವನೇಶ್ವರ್ ಕುಮಾರ್, ಮಾರ್ಕೊ ಯಾನ್ಸನ್, ಟಿ. ನಟರಾಜನ್, ಉಮ್ರಾನ್ ಮಲಿಕ್

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ