IPL 2022: RCB ತಂಡದ ಟಾರ್ಗೆಟ್ ಬಹಿರಂಗಪಡಿಸಿದ ಮೈಕ್ ಹೆಸ್ಸನ್

IPL 2022 RCB: ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್.

IPL 2022: RCB ತಂಡದ ಟಾರ್ಗೆಟ್ ಬಹಿರಂಗಪಡಿಸಿದ ಮೈಕ್ ಹೆಸ್ಸನ್
IPL 2022 RCB
Follow us
TV9 Web
| Updated By: ಝಾಹಿರ್ ಯೂಸುಫ್

Updated on: Apr 23, 2022 | 5:06 PM

IPL 2022: ಐಪಿಎಲ್ ಸೀಸನ್​ 15 ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಪ್ರದರ್ಶನ ನೀಡುತ್ತಿದೆ. ಮೊದಲಾರ್ಧದಲ್ಲಿ ಆಡಿದ 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವ ಭರವಸೆ ಮೂಡಿಸಿದೆ. ಇದೀಗ ದ್ವಿತಿಯಾರ್ಧ ಶುರುವಾಗಿದ್ದು, 2ನೇ ಹಂತದಲ್ಲೂ ಭರ್ಜರಿ ಪ್ರದರ್ಶನ ನೀಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಆರ್​ಸಿಬಿ ತಂಡದ ನಿರ್ದೇಶಕ ಮೈಕ್ ಹೆಸ್ಸನ್. ಈ ಬಗ್ಗೆ ಮಾತನಾಡಿರುವ ಹೆಸ್ಸನ್, ನಾವು ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದೇವೆ. ಹೀಗಾಗಿ ದ್ವಿತಿಯಾರ್ಧದಲ್ಲೂ ಅದನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಆರ್​ಸಿಬಿ ತಂಡವು ದ್ವಿತಿಯಾರ್ಧದಲ್ಲೂ ಉತ್ತಮವಾಗಿ ಆಡಲು ಪ್ರಯತ್ನಿಸಲಿದೆ. ಮುಂಬರುವ ಪಂದ್ಯಗಳು ಬಹಳ ಮಹತ್ವದ್ದಾಗಿದೆ. ಹೀಗಾಗಿ ಮುಂದಿನ 7 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನಾವು ಪ್ಲೇಆಫ್​ ಪ್ರವೇಶಿಸುವ ವಿಶ್ವಾಸವಿದೆ. ಅಲ್ಲದೆ ಲೀಗ್ ಹಂತದ ಮುಕ್ತಾಯದ ವೇಳೆ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಅಥವಾ ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲು ಆರ್​ಸಿಬಿ ಟಾರ್ಗೆಟ್ ಹಾಕಿಕೊಂಡಿದೆ ಎಂದು ಮೈಕ್ ಹೆಸ್ಸನ್ ತಿಳಿಸಿದ್ದಾರೆ.

ಈ ಮೂಲಕ ಈ ಬಾರಿ ಆರ್​ಸಿಬಿ ಲೀಗ್ ಹಂತದ ದ್ವಿತಿಯಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರುವ ಇರಾದೆಯಲ್ಲಿದೆ. ಒಂದು ವೇಳೆ ಅದು ಕೈತಪ್ಪಿದರೆ 2ನೇ ಸ್ಥಾನದೊಂದಿಗೆ ಲೀಗ್ ಹಂತವನ್ನು ಮುಗಿಸುವ ಪ್ಲ್ಯಾನ್ ರೂಪಿಸಿಕೊಂಡಿದೆ ಆರ್​ಸಿಬಿ. ಅದರಂತೆ ಈ ಸಲ ಆರ್​ಸಿಬಿ ಪ್ಲೇಆಫ್ ಆಡುವುದು ಖಚಿತ ಎಂದು ಮೈಕ್ ಹೆಸ್ಸನ್ ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ 5 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದಾದ ಬಳಿಕ ಕೆಕೆಆರ್ ವಿರುದ್ದ 3 ವಿಕೆಟ್​ಗಳಿಂದ ಗೆಲ್ಲುವ ಮೂಲಕ ಜಯದ ಅಭಿಯಾನ ಆರಂಭಿಸಿತ್ತು. ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ 4 ವಿಕೆಟ್​ಗಳ ಜಯ ಸಾಧಿಸಿದರೆ, ಐದನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು. ಇನ್ನು ಆರನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ದ 23 ರನ್​ಗಳಿಂದ ಮುಗ್ಗರಿಸುವ ಮೂಲಕ ಆರ್​ಸಿಬಿ ನಿರಾಸೆ ಮೂಡಿಸಿತು. ಇದಾಗ್ಯೂ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ 16 ರನ್​ಗಳಿಂದ ಗೆಲ್ಲುವ ಮೂಲಕ ಮೊದಲಾರ್ಧವನ್ನು ಜಯದೊಂದಿಗೆ ಅಂತ್ಯಗೊಳಿಸಿತು. ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ ಆರ್​ಸಿಬಿ.

ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ಬೆಂಗಳೂರು: ಡೆಡ್ಲಿ ಆಕ್ಸಿಡೆಂಟ್, ಕೂದಲೆಳೆ ಅಂತರದಲ್ಲಿ ಬೈಕ್​ ಸವಾರ ಪಾರು
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ವಿಜಯಪುರದಲ್ಲಿ ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ, ವಿಡಿಯೋ ವೈರಲ್​
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಗೃಹ ಇಲಾಖೆ ನೀಡುವ ಸೂಚನೆಗಳನ್ನು ಬ್ಯಾಂಕ್​ಗಳು ಪಾಲಿಸುತ್ತಿಲ್ಲ: ಪರಮೇಶ್ವರ್
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಉದ್ಯಮಿಗೆ ಹಲ್ಲೆ ಮಾಡಿ ಹಣ ಕಸಿದು ಕಾರು ಸಮೇತ ಪರಾರಿಯಾದ ಮುಸುಕುಧಾರಿಗಳು
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಬಾಗಲಕೋಟೆಯ ಪ್ರೌಢ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ಗೌತಮಿಯ ಮುದ್ದಾಡಿದ ಶ್ವಾನಗಳು; ಮನೆಗೆ ಬಂದ ಸ್ಪರ್ಧಿಗೆ ಹೀಗಿತ್ತು ಸ್ವಾಗತ
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ರಜತ್ ಮೇಲಿನ ಕೋಪಕ್ಕೆ ಬಿಗ್ ಬಾಸ್ ಪ್ರಾಪರ್ಟಿ ಪುಡಿ ಮಾಡಿದ ಮಂಜು
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಡೊನಾಲ್ಡ್​ಟ್ರಂಪ್​ಗೆ ಮರಳು ಕಲಾವಿದನಿಂದ ಅಭಿನಂದನೆ
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
ಪತ್ನಿ ಗರ್ಭಿಣಿಯಾಗಿದ್ದಾಗ ಪತಿ ಈ ತಪ್ಪುಗಳನ್ನು ಮಾಡಬಾರದು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು
Daily horoscope: ಈ ರಾಶಿಯವರು ಇಂದು ಕೆಲಸಗಳಲ್ಲಿ ಯಶಸ್ಸು ಕಾಣುವರು