IPL 2022: RCB ತಂಡದ ಟಾರ್ಗೆಟ್ ಬಹಿರಂಗಪಡಿಸಿದ ಮೈಕ್ ಹೆಸ್ಸನ್

| Updated By: ಝಾಹಿರ್ ಯೂಸುಫ್

Updated on: Apr 23, 2022 | 5:06 PM

IPL 2022 RCB: ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್.

IPL 2022: RCB ತಂಡದ ಟಾರ್ಗೆಟ್ ಬಹಿರಂಗಪಡಿಸಿದ ಮೈಕ್ ಹೆಸ್ಸನ್
IPL 2022 RCB
Follow us on

IPL 2022: ಐಪಿಎಲ್ ಸೀಸನ್​ 15 ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಪ್ರದರ್ಶನ ನೀಡುತ್ತಿದೆ. ಮೊದಲಾರ್ಧದಲ್ಲಿ ಆಡಿದ 7 ಪಂದ್ಯಗಳಲ್ಲಿ 5 ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪ್ಲೇಆಫ್ ಪ್ರವೇಶಿಸುವ ಭರವಸೆ ಮೂಡಿಸಿದೆ. ಇದೀಗ ದ್ವಿತಿಯಾರ್ಧ ಶುರುವಾಗಿದ್ದು, 2ನೇ ಹಂತದಲ್ಲೂ ಭರ್ಜರಿ ಪ್ರದರ್ಶನ ನೀಡುವ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ ಆರ್​ಸಿಬಿ ತಂಡದ ನಿರ್ದೇಶಕ ಮೈಕ್ ಹೆಸ್ಸನ್. ಈ ಬಗ್ಗೆ ಮಾತನಾಡಿರುವ ಹೆಸ್ಸನ್, ನಾವು ಪ್ರತಿಯೊಂದು ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದೇವೆ. ಹೀಗಾಗಿ ದ್ವಿತಿಯಾರ್ಧದಲ್ಲೂ ಅದನ್ನು ಮುಂದುವರೆಸುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ಆರ್​ಸಿಬಿ ತಂಡವು ದ್ವಿತಿಯಾರ್ಧದಲ್ಲೂ ಉತ್ತಮವಾಗಿ ಆಡಲು ಪ್ರಯತ್ನಿಸಲಿದೆ. ಮುಂಬರುವ ಪಂದ್ಯಗಳು ಬಹಳ ಮಹತ್ವದ್ದಾಗಿದೆ. ಹೀಗಾಗಿ ಮುಂದಿನ 7 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ನಾವು ಪ್ಲೇಆಫ್​ ಪ್ರವೇಶಿಸುವ ವಿಶ್ವಾಸವಿದೆ. ಅಲ್ಲದೆ ಲೀಗ್ ಹಂತದ ಮುಕ್ತಾಯದ ವೇಳೆ ಪಾಯಿಂಟ್ ಟೇಬಲ್​ನಲ್ಲಿ ಮೊದಲ ಅಥವಾ ಎರಡನೇ ಸ್ಥಾನದಲ್ಲಿ ಕಾಣಿಸಿಕೊಳ್ಳಲು ಆರ್​ಸಿಬಿ ಟಾರ್ಗೆಟ್ ಹಾಕಿಕೊಂಡಿದೆ ಎಂದು ಮೈಕ್ ಹೆಸ್ಸನ್ ತಿಳಿಸಿದ್ದಾರೆ.

ಈ ಮೂಲಕ ಈ ಬಾರಿ ಆರ್​ಸಿಬಿ ಲೀಗ್ ಹಂತದ ದ್ವಿತಿಯಾರ್ಧದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಪಾಯಿಂಟ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರುವ ಇರಾದೆಯಲ್ಲಿದೆ. ಒಂದು ವೇಳೆ ಅದು ಕೈತಪ್ಪಿದರೆ 2ನೇ ಸ್ಥಾನದೊಂದಿಗೆ ಲೀಗ್ ಹಂತವನ್ನು ಮುಗಿಸುವ ಪ್ಲ್ಯಾನ್ ರೂಪಿಸಿಕೊಂಡಿದೆ ಆರ್​ಸಿಬಿ. ಅದರಂತೆ ಈ ಸಲ ಆರ್​ಸಿಬಿ ಪ್ಲೇಆಫ್ ಆಡುವುದು ಖಚಿತ ಎಂದು ಮೈಕ್ ಹೆಸ್ಸನ್ ಪರೋಕ್ಷವಾಗಿ ತಿಳಿಸಿದ್ದಾರೆ.

ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ತಂಡವು ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ದ 5 ವಿಕೆಟ್​ಗಳಿಂದ ಸೋಲನುಭವಿಸಿತ್ತು. ಇದಾದ ಬಳಿಕ ಕೆಕೆಆರ್ ವಿರುದ್ದ 3 ವಿಕೆಟ್​ಗಳಿಂದ ಗೆಲ್ಲುವ ಮೂಲಕ ಜಯದ ಅಭಿಯಾನ ಆರಂಭಿಸಿತ್ತು. ಮೂರನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ದ 4 ವಿಕೆಟ್​ಗಳ ಜಯ ಸಾಧಿಸಿದರೆ, ಐದನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ದ 7 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತು. ಇನ್ನು ಆರನೇ ಪಂದ್ಯದಲ್ಲಿ ಸಿಎಸ್​ಕೆ ವಿರುದ್ದ 23 ರನ್​ಗಳಿಂದ ಮುಗ್ಗರಿಸುವ ಮೂಲಕ ಆರ್​ಸಿಬಿ ನಿರಾಸೆ ಮೂಡಿಸಿತು. ಇದಾಗ್ಯೂ 7ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ 16 ರನ್​ಗಳಿಂದ ಗೆಲ್ಲುವ ಮೂಲಕ ಮೊದಲಾರ್ಧವನ್ನು ಜಯದೊಂದಿಗೆ ಅಂತ್ಯಗೊಳಿಸಿತು.
ಇದೀಗ ದ್ವಿತಿಯಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡುವ ಪ್ಲೇಆಫ್ ಪ್ರವೇಶಿಸುವ ಇರಾದೆಯಲ್ಲಿದೆ ಆರ್​ಸಿಬಿ.

ಆರ್​ಸಿಬಿ ತಂಡ: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಅನುಜ್ ರಾವತ್, ದಿನೇಶ್ ಕಾರ್ತಿಕ್, ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಝಲ್​ವುಡ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಸುಯಶ್ ಪ್ರಭುದೇಸಾಯಿ, ಅನೀಶ್ವರ್ ಗೌತಮ್, ಕರ್ಣ್ ಶರ್ಮಾ, ಜೇಸನ್ ಬೆಹ್ರೆಡ್ರಾರ್ಫ್, ಸಿದ್ದಾರ್ಥ್ ಕೌಲ್, ಚಾಮಾ ಮಿಲಿಂದ್, ಮಹಿಪಾಲ್ ಲೊಮ್ರೋರ್, ಶೆರ್ಫೇನ್ ರುದರ್‌ಫೋರ್ಡ್, ಫಿನ್ ಅಲೆನ್, ಡೇವಿಡ್ ವಿಲ್ಲಿ, ರಜತ್ ಪಾಟಿದಾರ್.

ಇದನ್ನೂ ಓದಿ: KL Rahul: ಶತಕದ ಪಂದ್ಯದಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ: IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ