RCB vs DC, IPL 2024: ಐಪಿಎಲ್ನಲ್ಲಿಂದು ಆರ್‌ಸಿಬಿ ಪಂದ್ಯ: ಫಾಫ್ ಪಡೆ ಗೆದ್ದರೆ ಏನಾಗಲಿದೆ?, ಸೋತರೆ ಏನಾಗುತ್ತೆ?
Royal Challengers Bengaluru vs Delhi Capitals: ಐಪಿಎಲ್ನಲ್ಲಿಂದು ನಡೆಯಲಿರುವ ಎರಡನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಷರ್ ಪಟೇಲ್ ಅವರ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಮ್ಯಾಚ್ಗೆ ಸಾಕ್ಷಿಯಾಗಲಿದೆ.

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿಂದು (IPL 2024) ಎರಡು ಮಹತ್ವದ ಪಂದ್ಯಗಳು ನಡೆಯಲಿವೆ. ಮಧ್ಯಾಹ್ನ ಎಂ. ಚಿದಂಬರಂ ಸ್ಟೇಡಿಯಂನಲ್ಲಿ ಆಯೋಜಿಸಲಾಗಿರುವ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿ ಆಗಲಿದೆ. ದ್ವಿತೀಯ ಪಂದ್ಯ ಸಾಕಷ್ಟು ರೋಚಕತೆ ಸೃಷ್ಟಿಸಿದ್ದು, ಫಾಫ್ ಡುಪ್ಲೆಸಿಸ್ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಕ್ಷರ್ ಪಟೇಲ್ ಅವರ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಈ ಹೈವೋಲ್ಟೇಜ್ ಮ್ಯಾಚ್ಗೆ ಸಾಕ್ಷಿಯಾಗಲಿದೆ.
ಸತತ ನಾಲ್ಕು ಪಂದ್ಯಗಳನ್ನು ಗೆದ್ದು ಪ್ಲೇಆಫ್‌ನ ರೇಸ್‌ನಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎರಡು ಬಾರಿ ಗುಜರಾತ್ ಟೈಟಾನ್ಸ್ ತಂಡವನ್ನು ಸೋಲಿಸಿದ್ದಲ್ಲದೆ, ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಜಯ ಸಾಧಿಸಿತು. ಆರ್‌ಸಿಬಿ 12 ಪಂದ್ಯಗಳಿಂದ 10 ಅಂಕಗಳೊಂದಿಗೆ ಏಳನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಬಾಕಿ ಉಳಿದಿರುವ ಎರಡೂ ಪಂದ್ಯ ಆರ್‌ಸಿಬಿ ಗೆಲ್ಲಲೇ ಬೇಕು. ಜೊತೆಗೆ ಉತ್ತಮ ರನ್ರೇಟ್ ಕಾಪಾಡಿಕೊಳ್ಳಬೇಕು.
ವಾರದಿಂದ ಬೆಂಗಳೂರಿನಲ್ಲಿ ಮಳೆ; ಆರ್‌ಸಿಬಿ- ಡೆಲ್ಲಿ ಪಂದ್ಯಕ್ಕೆ ವರುಣನ ಅವಕೃಪೆ?
ಸತತ ನಾಲ್ಕು ಗೆಲುವುಗಳು ಮತ್ತು ವಿರಾಟ್ ಕೊಹ್ಲಿ ಅವರ ಅತ್ಯುತ್ತಮ ಫಾರ್ಮ್ ತಂಡದ ಮನೋಬಲ ಹೆಚ್ಚಿದೆ. ಈ ಋತುವಿನಲ್ಲಿ ಕೊಹ್ಲಿ ಗರಿಷ್ಠ 634 ರನ್ ಗಳಿಸಿದ್ದಾರೆ ಮತ್ತು ಅವರ ಸ್ಟ್ರೈಕ್ ರೇಟ್ 153 ಆಗಿದೆ. ಕೊಹ್ಲಿ ಹೊರತಾಗಿ ನಾಯಕ ಫಾಫ್ ಡುಪ್ಲೆಸಿಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್ ಮತ್ತು ದಿನೇಶ್ ಕಾರ್ತಿಕ್ ಕೂಡ ಉತ್ತಮ ಇನ್ನಿಂಗ್ಸ್ ಆಡಿದ್ದಾರೆ. ಆರಂಭಿಕ ಪಂದ್ಯಗಳಲ್ಲಿ ಸರಾಸರಿ ಪ್ರದರ್ಶನದ ನಂತರ ಈಗ ಬೌಲರ್‌ಗಳು ತಮ್ಮ ಕೆಲಸವನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಕಳೆದ ನಾಲ್ಕು ಪಂದ್ಯಗಳಲ್ಲಿ ತಮ್ಮ ಲಯವನ್ನು ಕಂಡುಕೊಂಡಿದ್ದಾರೆ ಮತ್ತು ಯಶ್ ದಯಾಲ್ ಮತ್ತು ಸ್ಪಿನ್ನರ್ ಸ್ವಪ್ನಿಲ್ ಸಿಂಗ್ ಸಹ ಉಪಯುಕ್ತವೆಂದು ಸಾಬೀತುಪಡಿಸಿದ್ದಾರೆ.
ಮತ್ತೊಂದೆಡೆ ಡೆಲ್ಲಿ ತಂಡದ ಪ್ರದರ್ಶನದಲ್ಲಿ ಸ್ಥಿರತೆಯ ಕೊರತೆ ಎದ್ದು ಕಾಣುತ್ತಿದೆ. ಡೇವಿಡ್ ವಾರ್ನರ್ ಏಳು ಪಂದ್ಯಗಳಲ್ಲಿ 135 ಸ್ಟ್ರೈಕ್ ರೇಟ್‌ನಲ್ಲಿ 167 ರನ್ ಗಳಿಸಿದ್ದರು. ಗಾಯದ ಕಾರಣದಿಂದ ಹೊರಗುಳಿದ ನಂತರ ಮೆಕ್‌ಗುರ್ಕ್ ಆಡುತ್ತಿದ್ದಾರೆ. ಆರಂಭಿಕ ಆಟಗಾರ ಅಭಿಷೇಕ್ ಪೊರೆಲ್ ಕೂಡ 157 ಸ್ಟ್ರೈಕ್ ರೇಟ್‌ನಲ್ಲಿ ರನ್ ಗಳಿಸಿದ್ದಾರೆ. ಆದರೆ ಅವರ ಪ್ರದರ್ಶನದಲ್ಲಿ ಯಾವುದೇ ಸ್ಥಿರತೆ ಇರಲಿಲ್ಲ. ನಾಯಕ ಪಂತ್ ಅಲಭ್ಯತೆ ಎದ್ದು ಕಾಣಲಿದೆ. ಟ್ರಿಸ್ಟಾನ್ ಸ್ಟಬ್ಸ್ ಉತ್ತಮ ಇನಿಂಗ್ಸ್ ಆಡಿದ್ದು, ಆರ್‌ಸಿಬಿ ಬೌಲರ್ ಗಳಿಗೂ ಕಠಿಣ ಸವಾಲು ಎದುರಾಗಲಿದೆ. ಬೌಲಿಂಗ್‌ನಲ್ಲಿ ಡೆಲ್ಲಿ ಮೇಲುಗೈ ಸಾಧಿಸಿದೆ.
ಪಂತ್ ಔಟ್! ಆರ್‌ಸಿಬಿ ವಿರುದ್ಧ ಡೆಲ್ಲಿ ತಂಡಕ್ಕೆ ಸ್ಪಿನ್ ಆಲ್ರೌಂಡರ್ ನಾಯಕ
ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ಅವರಂತಹ ಸ್ಪಿನ್ನರ್‌ಗಳನ್ನು ಹೊಂದಿದ್ದು, ಅವರು ಒಟ್ಟಿಗೆ 24 ವಿಕೆಟ್ ಪಡೆದಿದ್ದಾರೆ. ವೇಗದ ಬೌಲರ್‌ಗಳಾದ ಖಲೀಲ್ ಅಹ್ಮದ್ 14 ಮತ್ತು ಮುಖೇಶ್ ಕುಮಾರ್ 15 ವಿಕೆಟ್ ಪಡೆದಿದ್ದಾರೆ.
ಮಳೆಯ ಕಾಟ?:
ಬೆಂಗಳೂರಿನಲ್ಲಿ ಕಳೆದ 1 ವಾರದಿಂದ ಉತ್ತಮವಾಗಿ ಮಳೆಯಾಗುತ್ತಿದೆ. ಹೀಗಾಗಿ ನಗರದಲ್ಲಿ ತಾಪಮಾನ ಕೊಂಚ ತಗ್ಗಿದೆ. ಅಕ್ಯುವೆದರ್ ಪ್ರಕಾರ ಭಾನುವಾರದಂದು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಪಂದ್ಯವು ರಾತ್ರಿ 7.30 ಕ್ಕೆ ಪ್ರಾರಂಭವಾಗಲ್ಲಿದ್ದು, ಈ ವೇಳೆಯೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಸಂಭಾವ್ಯ ಪ್ಲೇಯಿಂಗ್ XI:
ಆರ್‌ಸಿಬಿ: ಫಾಫ್ ಡುಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ವಿಲ್ ಜಾಕ್ಸ್, ರಜತ್ ಪಾಟಿದಾರ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸ್ವಪ್ನಿಲ್ ಸಿಂಗ್, ಕರ್ಣ್ ಶರ್ಮಾ, ಮೊಹಮ್ಮದ್ ಸಿರಾಜ್, ಲಾಕಿ ಫರ್ಗುಸನ್, ಯಶ್ ದಯಾಲ್.
ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್‌ಗುರ್ಕ್, ಪೃಥ್ವಿ ಶಾ, ಅಭಿಷೇಕ್ ಪೊರೆಲ್, ಡೇವಿಡ್ ವಾರ್ನರ್/ಶೈ ಹೋಪ್, ಟ್ರಿಸ್ಟಾನ್ ಸ್ಟಬ್ಸ್, ಗುಲ್ಬದಿನ್ ನೈಬ್/ಜ್ಯೆ ರಿಚರ್ಡ್‌ಸನ್, ಅಕ್ಷರ್ ಪಟೇಲ್ (ನಾಯಕ), ರಾಸಿಖ್ ಸಲಾಂ, ಕುಲ್ದೀಪ್ ಯಾದವ್, ಮುಖೇಶ್ ಕುಮಾರ್, ಖಲೀಲ್ ಅಹ್ಮದ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
