6,6,6,6,6: RCB ಆಟಗಾರ ಲಿಯಾಮ್ ಲಿವಿಂಗ್​ಸ್ಟೋನ್ ಸಿಡಿಲಬ್ಬರ ಶುರು

|

Updated on: Nov 27, 2024 | 7:53 AM

IPL 2025: ಐಪಿಎಲ್ 2025 ರಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಆರ್​​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.ಈ ಬಾರಿಯ ಮೆಗಾ ಹರಾಜಿನಲ್ಲಿ ಇಂಗ್ಲೆಡ್ ದಾಂಡಿಗನನ್ನು ಆರ್​​ಸಿಬಿ 8.75 ಕೋಟಿ ರೂ. ಗೆ ಖರೀದಿಸಿದ್ದು, ಇದರ ಬೆನ್ನಲ್ಲೇ ತಮ್ಮ ಬ್ಯಾಟಿಂಗ್ ಝಲಕ್ ತೋರಿಸಿ ಲಿಯಾಮ್ ಲಿವಿಂಗ್​ಸ್ಟೋನ್ ಅಬ್ಬರಿಸಿರುವುದು ವಿಶೇಷ.

ಐಪಿಎಲ್​ ಮೆಗಾ ಹರಾಜಿನ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಎಂಟ್ರಿ ಕೊಟ್ಟಿರುವ ಲಿಯಾಮ್ ಲಿವಿಂಗ್​​ಸ್ಟೋನ್ ಅಬುಧಾಬಿ ಟಿ10 ಲೀಗ್​​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಈ ಟೂರ್ನಿಯ 18ನೇ ಪಂದ್ಯದಲ್ಲಿ ಬಾಂಗ್ಲಾ ಟೈಗರ್ಸ್ ಪರ ಕಣಕ್ಕಿಳಿದ ಲಿಯಾಮ್ ಕೇವಲ 15 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ಅಬ್ಬರಿಸಿದ್ದರೆ.

ಶೇಖ್ ಝಾಯದ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಡೆಲ್ಲಿ ಬುಲ್ಸ್ ಹಾಗೂ ಬಾಂಗ್ಲಾ ಟೈಗರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡೆಲ್ಲಿ ಬುಲ್ಸ್ ತಂಡವು 10 ಓವರ್​​ಗಳಲ್ಲಿ 6 ವಿಕೆಟ್ ಕಳೆದುಕೊಂಡು 123 ರನ್ ಕಲೆಹಾಕಿತು.

60 ಎಸೆತಗಳಲ್ಲಿ 124 ರನ್​​ಗಳ ಗುರಿ ಪಡೆದ ಬಾಂಗ್ಲಾ ಟೈಗರ್ಸ್ ಪರ ಲಿಯಾಮ್ ಲಿವಿಂಗ್​​ಸ್ಟೋನ್ ಅಬ್ಬರಿಸಿದರು. ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಲಿಯಾಮ್ ಮೈದಾನದ ಮೂಲೆ ಮೂಲೆಗೆ ಸಿಕ್ಸ್​-ಫೋರ್​​ಗಳ ಸುರಿಮಳೆಗೈದರು. ಅಲ್ಲದೆ ಕೇವಲ 15 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 50 ರನ್ ಬಾರಿಸಿ 9.4 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಸ್ಪೋಟಕ ಇನಿಂಗ್ಸ್ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಆರ್​​ಸಿಬಿ ಅಭಿಮಾನಿಗಳು ಮೆಚ್ಚುಗೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಏಕೆಂದರೆ ಐಪಿಎಲ್ 2025 ರಲ್ಲಿ ಲಿಯಾಮ್ ಲಿವಿಂಗ್​ಸ್ಟೋನ್ ಆರ್​​ಸಿಬಿ ಪರ ಕಣಕ್ಕಿಳಿಯಲಿದ್ದಾರೆ.ಈ ಬಾರಿಯ ಮೆಗಾ ಹರಾಜಿನಲ್ಲಿ ಇಂಗ್ಲೆಡ್ ದಾಂಡಿಗನನ್ನು ಆರ್​​ಸಿಬಿ 8.75 ಕೋಟಿ ರೂ. ಗೆ ಖರೀದಿಸಿದ್ದು, ಇದರ ಬೆನ್ನಲ್ಲೇ ತಮ್ಮ ಬ್ಯಾಟಿಂಗ್ ಝಲಕ್ ತೋರಿಸಿ ಲಿಯಾಮ್ ಲಿವಿಂಗ್​ಸ್ಟೋನ್ ಅಬ್ಬರಿಸಿರುವುದು ವಿಶೇಷ.