AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ಈವೆಂಟ್​​ಗಳಲ್ಲೇ ಅತಿ ಹೆಚ್ಚು ವೀಕ್ಷಣೆ; ದಾಖಲೆ ಬರೆದ 2025 ರ ಚಾಂಪಿಯನ್ಸ್ ಟ್ರೋಫಿ

ICC Champions Trophy 2025 Viewership: 2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯು 368 ಬಿಲಿಯನ್ ನಿಮಿಷಗಳ ಜಾಗತಿಕ ವೀಕ್ಷಣೆಯನ್ನು ಕಂಡಿದ್ದು, ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಐಸಿಸಿ ಪಂದ್ಯಾವಳಿ ಎಂಬ ದಾಖಲೆ ಬರೆದಿದೆ. ಅಲ್ಲದೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದ ಫೈನಲ್ ಪಂದ್ಯವೂ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಚಾಂಪಿಯನ್ಸ್ ಟ್ರೋಫಿ ಪಂದ್ಯ ಎಂಬ ದಾಖಲೆಯನ್ನು ನಿರ್ಮಿಸಿತು. ಭಾರತದ ಗೆಲುವಿನಲ್ಲಿ ರೋಹಿತ್ ಶರ್ಮಾ ಮತ್ತು ಕುಲ್ದೀಪ್ ಯಾದವ್ ಪ್ರಮುಖ ಪಾತ್ರ ವಹಿಸಿದರು.

ಐಸಿಸಿ ಈವೆಂಟ್​​ಗಳಲ್ಲೇ ಅತಿ ಹೆಚ್ಚು ವೀಕ್ಷಣೆ; ದಾಖಲೆ ಬರೆದ 2025 ರ ಚಾಂಪಿಯನ್ಸ್ ಟ್ರೋಫಿ
Champions Trophy
ಪೃಥ್ವಿಶಂಕರ
|

Updated on:May 21, 2025 | 4:43 PM

Share

2025 ರ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ಪಾಕಿಸ್ತಾನ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ ಆತಿಥ್ಯದಲ್ಲಿ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಯ (Champions Trophy 2025) ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಯಶಸ್ವಿಯಾಗಿದ್ದ ಟೀಂ ಇಂಡಿಯಾ (IND vs NZ), 2013 ರ ಬಳಿಕ ಈ ಟ್ರೋಫಿ ಗೆದ್ದ ದಾಖಲೆ ಬರೆದಿತ್ತು. ಇದೀಗ ಇಡೀ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ವೀಕ್ಷಣೆಯ ವಿಚಾರದಲ್ಲಿ ದಾಖಲೆ ಬರೆದಿದ್ದು, ಇದುವರೆಗೆ ನಡೆದಿರುವ ಐಸಿಸಿ (ICC) ಪಂದ್ಯಾವಳಿಗಳಲ್ಲಿ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಪಂದ್ಯಾವಳಿ ಎಂಬ ಹೊಸ ದಾಖಲೆ ಬರೆದಿದೆ.

ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಐಸಿಸಿ ಈವೆಂಟ್

2025ರ ಚಾಂಪಿಯನ್ಸ್ ಟ್ರೋಫಿ ಬರೋಬ್ಬರಿ 368 ಬಿಲಿಯನ್ ನಿಮಿಷಗಳ ಜಾಗತಿಕ ವೀಕ್ಷಣೆ ಕಂಡಿದೆ. ಇದು 2017ರಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್‌ ಆತಿಥ್ಯದಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ವೀಕ್ಷಣೆಗಿಂತ ಶೇಕಡಾ 19 ರಷ್ಟು ಹೆಚ್ಚಳವಾಗಿದೆ. ಈ ಮೂಲಕ ಇದುವರೆಗೆ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಐಸಿಸಿ ಪುರುಷರ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಕೂಡ ಆಗಿದೆ. ಇದಲ್ಲದೆ, ಈ ಟೂರ್ನಿ ಪ್ರತಿ ಓವರ್‌ಗೆ 308ಮಿಲಿಯನ್ ನಿಮಿಷಗಳ ಜಾಗತಿಕ ವೀಕ್ಷಣೆ ಪಡೆಯುವ ಮೂಲಕ ಐಸಿಸಿ ಈವೆಂಟ್​ವೊಂದು ಅತ್ಯಧಿಕ ವೀಕ್ಷಣೆ ಪಡೆದ ದಾಖಲೆಯನ್ನು ಬರೆದಿದೆ.

ಹಾಗೆಯೇ ದುಬೈನಲ್ಲಿ ಮಾರ್ಚ್ 9 ರಂದು ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್‌ ಪಂದ್ಯ ವಿಶ್ವದಾದ್ಯಂತ 65.3 ಬಿಲಿಯನ್ ನಿಮಿಷಗಳ ಲೈವ್ ವೀಕ್ಷಣೆ ಕಂಡಿದ್ದು, ಈ ಮೂಲಕ ಅತಿ ಹೆಚ್ಚು ವೀಕ್ಷಿಸಲ್ಪಟ್ಟ ಚಾಂಪಿಯನ್ಸ್ ಟ್ರೋಫಿ ಪಂದ್ಯ ಎನಿಸಿಕೊಂಡಿದೆ. ಇದರೊಂದಿಗೆ 2017 ರ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನಿರ್ಮಿಸಲಾದ ದಾಖಲೆಯನ್ನು ಸಹ ಮುರಿದಿದೆ ಎಂದು ಐಸಿಸಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ICC Annual Rankings: ಐಸಿಸಿ ವಾರ್ಷಿಕ ರ‍್ಯಾಂಕಿಂಗ್ ಪಟ್ಟಿಯಲ್ಲೂ ಭಾರತದ್ದೇ ಪಾರುಪತ್ಯ

ಫೈನಲ್ ಪಂದ್ಯ ಹೀಗಿತ್ತು

2025 ರ ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು. ಈ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 7 ವಿಕೆಟ್‌ಗಳ ನಷ್ಟಕ್ಕೆ 251 ರನ್ ಗಳಿಸಿ ಭಾರತಕ್ಕೆ 252 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಯಾಗಿ ಭಾರತ ತಂಡವು ಒಂದು ಓವರ್ ಬಾಕಿ ಇರುವಂತೆ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸುವ ಮೂಲಕ ಗುರಿಯನ್ನು ಬೆನ್ನಟ್ಟಿತು. ಈ ಪಂದ್ಯಾವಳಿಯನ್ನು ಗೆಲ್ಲುವ ಮೂಲಕ, ಭಾರತ ತಂಡವು 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ದಾಖಲೆ ಬರೆಯಿತು. ಈ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ್ದ ರೋಹಿತ್ ಶರ್ಮಾ 83 ಎಸೆತಗಳಲ್ಲಿ 76 ರನ್ ಬಾರಿಸಿದ್ದರು. ಹಾಗೆಯೇ ಬೌಲಿಂಗ್‌ನಲ್ಲಿ ಕುಲ್ದೀಪ್ ಯಾದವ್ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್‌ಗಳನ್ನು ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:37 pm, Wed, 21 May 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ