AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saud Shakeel: ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಹಲವು ದಾಖಲೆ ಬರೆದ ಸೌದ್ ಶಕೀಲ್

Sri Lanka vs Pakistan: ಸೌದ್ ಶಕೀಲ್ ಅವರ ಈ ದ್ವಿಶತಕದ ನೆರವಿನಿಂದ ಪಾಕಿಸ್ತಾನ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 416 ರನ್​ ಕಲೆಹಾಕಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 312 ರನ್ ಬಾರಿಸಿದ್ದ ಶ್ರೀಲಂಕಾ ತಂಡವು 149 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದೆ.

Saud Shakeel: ಭರ್ಜರಿ ಡಬಲ್ ಸೆಂಚುರಿ ಸಿಡಿಸಿ ಹಲವು ದಾಖಲೆ ಬರೆದ ಸೌದ್ ಶಕೀಲ್
Saud Shakeel
TV9 Web
| Updated By: ಝಾಹಿರ್ ಯೂಸುಫ್|

Updated on: Jul 18, 2023 | 7:29 PM

Share

ಗಾಲೆಯ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಕ್ ತಂಡದ ಯುವ ದಾಂಡಿಗ ಸೌದ್ ಶಕೀಲ್ ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಈ ಡಬಲ್ ಸೆಂಚುರಿಯೊಂದಿಗೆ ಹಲವು ದಾಖಲೆಗಳನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ. ಆ ದಾಖಲೆಗಳಾವುವು ಎಂಬುದರ ಸಂಕ್ಷಿಪ್ತ ಮಾಹಿತಿ ಈ ಕೆಳಗಿನಂತಿದೆ.

  • ಈ ಡಬಲ್ ಸೆಂಚುರಿಯೊಂದಿಗೆ ಶ್ರೀಲಂಕಾದಲ್ಲಿ ದ್ವಿಶತಕ ಸಿಡಿಸಿದ ಮೊದಲ ಪಾಕಿಸ್ತಾನಿ ಬ್ಯಾಟ್ಸ್‌ಮನ್ ಎಂಬ ದಾಖಲೆ ಸೌದ್ ಶಕೀಲ್ ಪಾಲಾಗಿದೆ. ಇದಕ್ಕೂ ಮುನ್ನ ಶ್ರೀಲಂಕಾದಲ್ಲಿ ಮೊಹಮ್ಮದ್ ಹಫೀಝ್ 196 ರನ್​ಗಳಿಸಿದ್ದು ಗರಿಷ್ಠ ವೈಯುಕ್ತಿಕ ಸ್ಕೋರ್ ಆಗಿತ್ತು. ಇದೀಗ ಅಜೇಯ 208 ರನ್​ ಬಾರಿಸಿ ಸೌದ್ ಶಕೀಲ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.
  • ಪಾಕಿಸ್ತಾನ್ ಪರ ಡಬಲ್ ಸೆಂಚುರಿ ಸಿಡಿಸಿದ 23ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೂ ಸೌದ್ ಶಕೀಲ್ ಪಾತ್ರರಾಗಿದ್ದಾರೆ.
  • ಟೆಸ್ಟ್ ಕ್ರಿಕೆಟ್​ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಾ ಬರುತ್ತಿರುವ ಸೌದ್ ಶಕೀಲ್ ಮೊದಲ 11 ಟೆಸ್ಟ್ ಇನ್ನಿಂಗ್ಸ್‌ಗಳ ನಂತರ ಪಾಕಿಸ್ತಾನದ ಪರ ಅತ್ಯಧಿಕ ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಸದ್ಯ ಶಕೀಲ್ ಒಟ್ಟು 788 ರನ್​ ಕಲೆಹಾಕಿದ್ದಾರೆ.
  • ಮೊದಲ ವಿದೇಶಿ ಟೆಸ್ಟ್ ಸರಣಿಯಲ್ಲಿ ದ್ವಿಶತಕ ಸಿಡಿಸಿದ 2ನೇ ಪಾಕಿಸ್ತಾನಿ ಬ್ಯಾಟ್ಸ್​ಮನ್ ಎಂಬ ಹಿರಿಮೆಗೂ ಸೌದ್ ಶಕೀಲ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 1971 ರಲ್ಲಿ ಇಂಗ್ಲೆಂಡ್ ವಿರುದ್ಧ ಝಹೀರ್ ಅಬ್ಬಾಸ್ ದ್ವಿಶತಕ ಬಾರಿಸಿದ್ದರು. ಇದೀಗ ಸೌದ್ ಶಕೀಲ್ ಈ ವಿಶೇಷ ದಾಖಲೆ ಬರೆದ 2ನೇ ಪಾಕ್ ಬ್ಯಾಟರ್ ಎನಿಸಿಕೊಂಡಿದ್ದಾರೆ.
  • ಇನ್ನು ಮೊದಲ 6 ಟೆಸ್ಟ್ ಪಂದ್ಯಗಳಲ್ಲಿ 50+ ಸರಾಸರಿಯಲ್ಲಿ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಗೂ ಸೌದ್ ಶಕೀಲ್ ಸೇರ್ಪಡೆಯಾಗಿದ್ದಾರೆ. ಇದಕ್ಕೂ ಮುನ್ನ ಈ ವಿಶೇಷ ಸಾಧನೆ ಮಾಡಿದ ಆಟಗಾರರೆಂದರೆ ಸುನಿಲ್ ಗವಾಸ್ಕರ್, ಬೇಸಿಲ್ ಬುಚರ್, ಸಯೀದ್ ಅಹ್ಮದ್ ಮತ್ತು ಬರ್ಟ್ ಸಟ್‌ಕ್ಲಿಫ್ ಮಾತ್ರ. ಇದೀಗ ಈ ಪಟ್ಟಿಗೆ ಐದನೇ ಬ್ಯಾಟರ್ ಆಗಿ ಸೌದ್ ಶಕೀಲ್ ಎಂಟ್ರಿ ಕೊಟ್ಟಿದ್ದಾರೆ.

ಅಂದಹಾಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಪಾಕಿಸ್ತಾನ್ ಪರ 2 ವರ್ಷಗಳ ಮೂಡಿಬರುತ್ತಿರುವ ಮೊದಲ ದ್ವಿಶತಕ ಇದು. ಇದಕ್ಕೂ ಮುನ್ನ 2021 ರಲ್ಲಿ ಝಿಂಬಾಬ್ವೆ ವಿರುದ್ಧ ಅಬಿದ್ ಅಲಿ 215 ರನ್​ ಬಾರಿಸಿದ್ದರು. ಇದೀಗ 2 ವರ್ಷಗಳ ಬಳಿಕ ಸೌದ್ ಶಕೀಲ್ ಪಾಕಿಸ್ತಾನ್ ಪರ ದ್ವಿಶತಕ ಬಾರಿಸಿ ಮಿಂಚಿದ್ದಾರೆ.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ಗೂ ಮುನ್ನ ಟೀಮ್ ಇಂಡಿಯಾಗೆ 3 ಗುಡ್​ ನ್ಯೂಸ್

ಸೌದ್ ಶಕೀಲ್ ಅವರ ಈ ದ್ವಿಶತಕದ ನೆರವಿನಿಂದ ಪಾಕಿಸ್ತಾನ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 416 ರನ್​ ಕಲೆಹಾಕಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿ 312 ರನ್ ಬಾರಿಸಿದ್ದ ಶ್ರೀಲಂಕಾ ತಂಡವು 149 ರನ್​ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದೆ.

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್