AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World Cup 2025: ಶತಕ ವಂಚಿತರಾದ್ರು ಸ್ಮರಣೀಯ ಇನ್ನಿಂಗ್ಸ್ ಆಡಿದ ರಿಚಾ ಘೋಷ್

Richa Ghosh's 94-Run ODI Masterclass: ವಿಶಾಖಪಟ್ಟಣಂನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ರಿಚಾ ಘೋಷ್ ಏಕಾಂಗಿ ಹೋರಾಟ ನಡೆಸಿ 94 ರನ್ ಬಾರಿಸಿದರು. ತಂಡದ ಬ್ಯಾಟಿಂಗ್ ವೈಫಲ್ಯದ ನಡುವೆಯೂ, ಅವರು ಭಾರತವನ್ನು 250+ ರನ್‌ಗಳಿಗೆ ತಲುಪಿಸಿದರು. ಶತಕದಿಂದ ವಂಚಿತರಾದರೂ, ರಿಚಾ ಮಹಿಳಾ ಏಕದಿನದಲ್ಲಿ 1000 ರನ್‌ಗಳನ್ನು ಪೂರೈಸಿ, 8ನೇ ಕ್ರಮಾಂಕದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆ ನಿರ್ಮಿಸಿದರು.

World Cup 2025: ಶತಕ ವಂಚಿತರಾದ್ರು ಸ್ಮರಣೀಯ ಇನ್ನಿಂಗ್ಸ್ ಆಡಿದ ರಿಚಾ ಘೋಷ್
Richa Ghosh
ಪೃಥ್ವಿಶಂಕರ
|

Updated on:Oct 09, 2025 | 8:42 PM

Share

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ಮಹಿಳಾ ತಂಡಗಳ ನಡುವಿನ ವಿಶ್ವಕಪ್ (Women’s World Cup 2025) ಪಂದ್ಯದಲ್ಲಿ ಮಳೆಯ ನಡುವೆಯೂ ಆಫ್ರಿಕಾ ಬೌಲರ್​ಗಳನ್ನು ಬೆವರುವಂತೆ ಮಾಡಿದ ರಿಚಾ ಘೋಷ್ (Richa Ghosh) ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್ ಆಡುವಲ್ಲಿ ಯಶಸ್ವಿಯಾಗಿದ್ದಾರೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾಕ್ಕೆ ಮೊದಲ ಎರಡು ಪಂದ್ಯಗಳಂತೆ ಈ ಪಂದ್ಯದಲ್ಲೂ ಬ್ಯಾಟಿಂಗ್‌ ವಿಭಾಗ ಕೈಕೊಟ್ಟಿತು. ಪ್ರಮುಖ 6 ವಿಕೆಟ್​​ಗಳು ಕೇವಲ 102 ರನ್​​ಗಳಿಗೆ ಪೆವಿಲಿಯನ್ ಸೇರಿಕೊಂಡವು. ಆದರೆ ಇಲ್ಲಿಂದ ತಂಡದ ಇನ್ನಿಂಗ್ಸ್ ನಿಭಾಯಿಸಿದ ರಿಚಾ, ತಂಡವನ್ನು 250 ರನ್​ಗಳ ಗಡಿ ದಾಟಿಸಿದ್ದು ಮಾತ್ರವಲ್ಲದೆ 94 ರನ್​​ಗಳ ಅದ್ಭುತ ಇನ್ನಿಂಗ್ಸ್ ಕೂಡ ಆಡಿದರು.

ಒಂದೆಡೆ ತಂಡದ ಪ್ರಮುಖ ಆಟಗಾರ್ತಿಯರೆಲ್ಲ 100 ರನ್​​ಗಳಿಗೆ ಪೆವಿಲಿಯನ್​ ಸೇರಿಕೊಂಡರೆ, ಇನ್ನೊಂದೆಡೆ ತಂಡದ ಸ್ಟಾರ್ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ರಿಚಾ ಘೋಷ್ ಏಕಾಂಗಿ ಹೋರಾಟ ಮುಂದುವರೆಸಿದರು. 94 ರನ್‌ಗಳ ಬಿರುಗಾಳಿ ಇನ್ನಿಂಗ್ಸ್ ಆಡಿದ ರಿಚಾ ಕೇವಲ 6 ರನ್​​ಗಳಿಂದ ಶತಕ ವಂಚಿತರಾದರು. ಆದಾಗ್ಯೂ, ಅವರು ಅಂತರರಾಷ್ಟ್ರೀಯ ಮಹಿಳಾ ಏಕದಿನ ಕ್ರಿಕೆಟ್‌ನಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸುವಲ್ಲಿ ಯಶಸ್ವಿಯಾದರು.

IND vs WI: 6,6,6,6,6… ಅತೀ ವೇಗದ ಅರ್ಧಶತಕ; ವಿಶ್ವ ದಾಖಲೆ ಸರಿಗಟ್ಟಿದ ರಿಚಾ ಘೋಷ್

ರಿಚಾ ಘೋಷ್ ದಾಖಲೆ

ಈ ಪಂದ್ಯದಲ್ಲಿ ಎಂಟನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ರಿಚಾ ಘೋಷ್ 77 ಎಸೆತಗಳನ್ನು ಎದುರಿಸಿ 11 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್‌ಗಳು ಸೇರಿದಂತೆ 94 ರನ್‌ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. 122.07 ರ ಅವರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದ 22 ವರ್ಷದ ರಿಚಾ ಹಲವಾರು ಮೈಲಿಗಲ್ಲುಗಳನ್ನು ಸ್ಥಾಪಿಸಿದರು. ಮಹಿಳಾ ಏಕದಿನ ಪಂದ್ಯಗಳಲ್ಲಿ 1,000 ರನ್‌ಗಳನ್ನು ಪೂರ್ಣಗೊಳಿಸಿದ ರಿಚಾ, ಎಂಟನೇ ಅಥವಾ ಅದಕ್ಕಿಂತ ಕಡಿಮೆ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ ಮಹಿಳಾ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆಯನ್ನು ನಿರ್ಮಿಸಿದರು. ಇದಕ್ಕೂ ಮೊದಲು, ಕ್ಲೋಯ್ ಟ್ರಯಾನ್ ಈ ವರ್ಷದ ಆರಂಭದಲ್ಲಿ ಕೊಲಂಬೊದಲ್ಲಿ ನಡೆದಿದ್ದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 74 ರನ್ ಬಾರಿಸಿ ಈ ದಾಖಲೆಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:50 pm, Thu, 9 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!